IPL 2024: ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ CSK: ಟಾಪ್​-5 ನಲ್ಲಿ RCB

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ​ (ಐಪಿಎಲ್ 2024) ಮೊದಲ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಬೀಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಲೂ ಐದನೇ ಸ್ಥಾನದಲ್ಲೇ ಉಳಿದಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 27, 2024 | 7:19 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 6 ವಿಕೆಟ್​ಗಳಿಂದ ಗೆದ್ದು ಬೀಗಿದ್ದ ಸಿಎಸ್​ಕೆ, 2ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ 63 ರನ್​ಗಳಿಂದ ಸೋಲುಣಿಸಿದೆ.

1 / 8
ಈ ಎರಡು ಭರ್ಜರಿ ಗೆಲುವುಗಳೊಂದಿಗೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡವು 4 ಅಂಕಗಳೊಂದಿಗೆ ಮೊದಲ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಹಾಗೆಯೇ ಎರಡೂ ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಕಾರಣ ಸಿಎಸ್​ಕೆ ತಂಡದ ನೆಟ್​ ರನ್​ ರೇಟ್ +1.979 ಕ್ಕೇರಿದೆ.

2 / 8
ಇನ್ನು ಆಡಿರುವ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 20 ರನ್​ಗಳಿಂದ ಸೋಲುಣಿಸಿರುವ ರಾಜಸ್ಥಾನ್ ರಾಯಲ್ಸ್ ತಂಡ 2 ಪಾಯಿಂಟ್ಸ್​​ನೊಂದಿಗೆ ಅಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಆರ್​ಆರ್ ತಂಡದ ಪ್ರಸ್ತುತ ನೆಟ್ ರನ್​ ರೇಟ್ +1.000.

3 / 8
ಹಾಗೆಯೇ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4 ರನ್​ಗಳಿಂದ ರೋಚಕ ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದೆ. ಕೆಕೆಆರ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.200.

4 / 8
ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ವಿಕೆಟ್​ಗಳಿಂದ ಗೆದ್ದು ಬೀಗಿದ್ದ ಪಂಜಾಬ್ ಕಿಂಗ್ಸ್ ತಂಡವು 2ನೇ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 4 ವಿಕೆಟ್​ಗಳಿಂದ ಸೋಲನುಭವಿಸಿತ್ತು. ಇದಾಗ್ಯೂ 2 ಅಂಕಗಳೊಂದಿಗೆ +0.025 ನೆಟ್​ ರನ್ ರೇಟ್ ಹೊಂದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

5 / 8
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ವಿಕೆಟ್​ಗಳಿಂದ ಸೋಲನುಭವಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಗೆಲ್ಲುವ ಮೂಲಕ ಕಂಬ್ಯಾಕ್ ಮಾಡಿದೆ. ಈ ಗೆಲುವಿನೊಂದಿಗೆ ಒಟ್ಟು 2 ಅಂಕ ಪಡೆದಿರುವ ಫಾಫ್ ಪಡೆ ಅಂಕ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದೆ.  ಆರ್​ಸಿಬಿ ತಂಡದ ಪ್ರಸ್ತುತ ನೆಟ್​ ರನ್ ರೇಟ್ -0.180.

6 / 8
ಹಾಗೆಯೇ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿದ್ದ ಗುಜರಾತ್ ಟೈಟಾನ್ಸ್ ತಂಡವು 2ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲನುಭವಿಸಿದೆ. ಈ ಗೆಲುವು-ಸೋಲುಗಳೊಂದಿಗೆ 2 ಅಂಕ ಪಡೆದಿರುವ ಗುಜರಾತ್ ಟೈಟಾನ್ಸ್ ತಂಡವು -1.425 ನೆಟ್​ ರನ್​ ರೇಟ್​ನೊಂದಿಗೆ ಪಾಯಿಂಟ್ಸ್​​ ಟೇಬಲ್​​ನಲ್ಲಿ 6ನೇ ಸ್ಥಾನದಲ್ಲಿದೆ.

7 / 8
ಇನ್ನು ಮೊದಲ ಪಂದ್ಯದಲ್ಲಿ ಸೋತಿರುವ ಸನ್​ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕ್ರಮವಾಗಿ 7,8,9 ಮತ್ತು 10ನೇ ಸ್ಥಾನಗಳನ್ನು ಅಲಂಕರಿಸಿದೆ.

8 / 8
Follow us
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!

ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್

ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ

ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ

ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!

ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ

ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು

ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ

ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ