IPL 2024: ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲದ ಪಂಜಾಬ್ ಕಿಂಗ್ಸ್ ಈ ವಿಚಾರದಲ್ಲಿ ಮಾತ್ರ ನಂ.1..!
IPL 2024: ಪಂಜಾಬ್ ಕಿಂಗ್ಸ್ ತಂಡ ಐಪಿಎಲ್‌ನಲ್ಲಿ ಇದುವರೆಗೆ ಮಾಡಿರುವ ಸಾಧನೆಯನ್ನು ಅಧಿಕ ಬಾರಿ ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಗೂ ಮಾಡಲು ಸಾಧ್ಯವಾಗಿಲ್ಲ.
1 / 7
ಪಂಜಾಬ್ ಕಿಂಗ್ಸ್ ತಂಡ ಮೊದಲ ಸೀಸನ್‌ನಿಂದಲೂ ಐಪಿಎಲ್ ಆಡುತ್ತಿದೆ. ಈ ತಂಡವನ್ನು ಆರಂಭದಲ್ಲಿ ಕಿಂಗ್ಸ್ XI ಪಂಜಾಬ್ ಎಂದು ಕರೆಯಲಾಗುತ್ತಿತ್ತು. ಕಳೆದ 16 ಸೀಸನ್‌ಗಳಲ್ಲಿ ಪಂಜಾಬ್ ತಂಡ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. 2014ರಲ್ಲಿ ಮಾತ್ರ ಫೈನಲ್‌ನಗೇರಿದ್ದ ಪಂಜಾಬ್, ಕೆಕೆಆರ್ ವಿರುದ್ಧ ಸೋತು ಪ್ರಶಸ್ತಿಯಿಂದ ವಂಚಿತವಾಗಿತ್ತು.
2 / 7
ಆದರೆ ಪಂಜಾಬ್ ಕಿಂಗ್ಸ್ ತಂಡ ಐಪಿಎಲ್‌ನಲ್ಲಿ ಇದುವರೆಗೆ ಮಾಡಿರುವ ಸಾಧನೆಯನ್ನು ಅಧಿಕ ಬಾರಿ ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಗೂ ಮಾಡಲು ಸಾಧ್ಯವಾಗಿಲ್ಲ.
3 / 7
ವಾಸ್ತವವಾಗಿ ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 200 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಪಂಜಾಬ್ ತಂಡ ಐಪಿಎಲ್ ಇತಿಹಾಸದಲ್ಲೇ 200 ಕ್ಕೂ ಹೆಚ್ಚು ರನ್‌ಗಳ ಗುರಿಯನ್ನು ಅಧಿಕ ಬಾರಿ ಬೆನ್ನಟ್ಟಿದ ತಂಡ ಎಂಬ ದಾಖಲೆ ಬರೆದಿದೆ.
4 / 7
ಗುಜರಾತ್ ತಂಡ ನೀಡಿದ 200 ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಐಪಿಎಲ್‌ನಲ್ಲಿ ಆರನೇ ಬಾರಿಗೆ 200 ಕ್ಕೂ ಹೆಚ್ಚು ರನ್‌ಗಳ ಗುರಿಯನ್ನು ಬೆನ್ನಟ್ಟಿದೆ. ಮೊದಲನೆಯದಾಗಿ 2010ರ ಸೀಸನ್ನಲ್ಲಿ ಕೆಕೆಆರ್ ವಿರುದ್ಧ ಮಹೇಲಾ ಜಯವರ್ಧನೆ ಅವರ ಶತಕದ ನೆರವಿನಿಂದ ಪಂಜಾಬ್ 201 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿತ್ತು.
5 / 7
ನಂತರ 2014ರಲ್ಲಿ ಹೈದರಾಬಾದ್ ವಿರುದ್ಧ ತಂಡ 206 ರನ್, 2014 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮತ್ತು 2022 ರಲ್ಲಿ ಆರ್ಸಿಬಿ ವಿರುದ್ಧ, ತಂಡವು ತಲಾ 206 ರನ್ ಗುರಿ ಬೆನ್ನಟ್ಟುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿತು. ಕಳೆದ ಸೀಸನ್ನಲ್ಲಿ ಚೆನ್ನೈ ತಂಡ ನೀಡಿದ 201 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿತ್ತು.
6 / 7
ಟಿ20 ಕ್ರಿಕೆಟ್‌ನಲ್ಲಿ ನಾಲ್ಕು ತಂಡಗಳು 200 ರನ್‌ಗಳ ಗುರಿಯನ್ನು 5 ಬಾರಿ ಬೆನ್ನಟ್ಟಿವೆ. ಅವುಗಳಲ್ಲಿ 5 ಬಾರಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ 200 ಅಥವಾ ಅದಕ್ಕಿಂತ ಹೆಚ್ಚಿನ ಗುರಿಯನ್ನು 5 ಬಾರಿ ಸಾಧಿಸಿದೆ. ಕಳೆದ ಒಂದೇ ಸೀಸನ್ನಲ್ಲಿ ಮುಂಬೈ ಮೂರು ಬಾರಿ 200 ಕ್ಕಿಂತ ಹೆಚ್ಚು ಗುರಿಯನ್ನು ಬೆನ್ನಟ್ಟಿ ಗೆಲುವು ಸಾಧಿಸಿತ್ತು.
7 / 7
ಇದಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 5 ಬಾರಿ 200 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳ ಗುರಿಯನ್ನು ಬೆನ್ನಟ್ಟುವ ಮೂಲಕ ಪಂದ್ಯವನ್ನು ಗೆದ್ದು ಬೀಗಿವೆ.