IPL 2024: ಗುಜರಾತ್ ವಿರುದ್ಧ ಮಾಡಿದ ತಪ್ಪಿಗೆ ಭಾರಿ ದಂಡ ತೆತ್ತ ಸಂಜು ಸ್ಯಾಮ್ಸನ್..!

IPL 2024: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಾಯಕ ಸಂಜು ಸ್ಯಾಮ್ಸನ್‌ ಮಾಡಿದ ತಪ್ಪಿಗೆ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಅದರಂತೆ ಸಂಜು ಪಂದ್ಯ ಶುಲ್ಕದಲ್ಲಿ 12 ಲಕ್ಷ ರೂಗಳನ್ನು ದಂಡವಾಗಿ ಪಾವತಿಸಬೇಕಿದೆ.

ಪೃಥ್ವಿಶಂಕರ
|

Updated on: Apr 11, 2024 | 4:06 PM

ಐಪಿಎಲ್ 2024ರಲ್ಲಿ ನಡೆದ 22ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ತಂಡವನ್ನು ಮೂರು ವಿಕೆಟ್‌ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ ಮೂರನೇ ಜಯ ಸಾಧಿಸಿದೆ. ಇತ್ತ ಲೀಗ್​ನಲ್ಲಿ ಅಜೇಯರಾಗಿ ಉಳಿದಿದ್ದ ರಾಜಸ್ಥಾನ್ ರಾಯಲ್ಸ್ ಕೂಡ ತನ್ನ ಮೊದಲ ಸೋಲು ಎದುರಿಸಿದೆ.

1 / 6
ರಾಜಸ್ಥಾನ್ ನೀಡಿದ196 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೈಟಾನ್ಸ್ ಕೊನೆಯ ಐದು ಓವರ್‌ಗಳಲ್ಲಿ ಅದ್ಭುತ ಆಟ ಪ್ರದರ್ಶಿಸಿ 30 ಎಸೆತಗಳಲ್ಲಿ 73 ರನ್ ಕಲೆ ಹಾಕಿ ಗೆಲುವಿನ ದಡ ಸೇರಿತು. 20ನೇ ಓವರ್​ನ ಕೊನೆಯ ಎಸೆತದಲ್ಲಿ ರಶೀದ್ ಖಾನ್ ಬೌಂಡರಿ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

2 / 6
ಸೋಲಿನ ಹೊರತಾಗಿಯೂ ರಾಯಲ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಪಂದ್ಯದಲ್ಲಿ ನಾಯಕ ಸಂಜು ಸ್ಯಾಮ್ಸನ್‌ ಮಾಡಿದ ತಪ್ಪಿಗೆ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಅದರಂತೆ ಸಂಜು ಪಂದ್ಯ ಶುಲ್ಕದಲ್ಲಿ 12 ಲಕ್ಷ ರೂಗಳನ್ನು ದಂಡವಾಗಿ ಪಾವತಿಸಬೇಕಿದೆ.

3 / 6
ವಾಸ್ತವವಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡ ಪರಿಣಾಮವಾಗಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ ದಂಡ ವಿಧಿಸಲಾಗಿದೆ. ಈ ಸೀಸನ್​ನಲ್ಲಿ ಸಂಜು ಮಾಡಿದ ಮೊದಲ ಅಪರಾಧವಾಗಿದೆ. ಆದ್ದರಿಂದ ಸ್ಯಾಮ್ಸನ್‌ಗೆ ರೂ 12 ಲಕ್ಷ ದಂಡ ವಿಧಿಸಲಾಗಿದೆ.

4 / 6
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಮಂದಗತಿಯ ಆರಂಭದ ಹೊರತಾಗಿಯೂ ಆರ್‌ಆರ್ ಅದ್ಭುತ ಪ್ರದರ್ಶನ ನೀಡಿದ್ದು ಗಮನಾರ್ಹ. ತಂಡದ ಪರ ನಾಯಕ ಸ್ಯಾಮ್ಸನ್ ಕೇವಲ 38 ಎಸೆತಗಳಲ್ಲಿ ಅಜೇಯ 68 ರನ್ ಗಳಿಸಿದರೆ ರಿಯಾನ್ ಪರಾಗ್ ಕೂಡ 48 ಎಸೆತಗಳಲ್ಲಿ 76 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ರಾಜಸ್ಥಾನ ರಾಯಲ್ಸ್ 3 ವಿಕೆಟ್‌ಗೆ 196 ರನ್ ಗಳಿಸಲು ನೆರವಾದರು.

5 / 6
ಗುರಿ ಬೆನ್ನಟ್ಟಿದ ಟೈಟಾನ್ಸ್ ಪರ ಶುಭ್‌ಮನ್ ಗಿಲ್ 44 ಎಸೆತಗಳಲ್ಲಿ 72 ರನ್ ಗಳಿಸಿದರೆ ರಾಹುಲ್ ತೆವಾಟಿಯಾ (11 ಎಸೆತಗಳಲ್ಲಿ 22) ಮತ್ತು ರಶೀದ್ ಖಾನ್ (11 ಎಸೆತಗಳಲ್ಲಿ 24*) ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

6 / 6
Follow us
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ

ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್

ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ

ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್