- TV9 Kannada Kannada News Photos Cricket Photos IPL 2024 rajasthan royals named keshav maharaj prasid krishna's replacement
IPL 2024: ಲೀಗ್ ಮಧ್ಯದಲ್ಲಿ ರಾಜಸ್ಥಾನಕ್ಕೆ ಬಂದ ಮಹಾರಾಜ
IPL 2024: 17ನೇ ಆವೃತ್ತಿಯ ಐಪಿಎಲ್ ಆರಂಭವಾಗಿ ವಾರಕ್ಕೂ ಹೆಚ್ಚು ಸಮಯ ಕಳೆದಿದೆ. ಈಗಾಗಲೇ ಎಲ್ಲಾ ತಂಡಗಳು ತಲಾ ಒಂದೊಂದು ಪಂದ್ಯವನ್ನಾಡಿದ್ದು, ಇದೀಗ ಎರಡನೇ ಪಂದ್ಯಗಳನ್ನು ಆಡುತ್ತಿವೆ. ಈ ನಡುವೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದಕ್ಷಿಣ ಆಫ್ರಿಕಾ ಆಟಗಾರನ ಎಂಟ್ರಿಯಾಗಿದೆ.
Updated on: Mar 28, 2024 | 11:00 PM

17ನೇ ಆವೃತ್ತಿಯ ಐಪಿಎಲ್ ಆರಂಭವಾಗಿ ವಾರಕ್ಕೂ ಹೆಚ್ಚು ಸಮಯ ಕಳೆದಿದೆ. ಈಗಾಗಲೇ ಎಲ್ಲಾ ತಂಡಗಳು ತಲಾ ಒಂದೊಂದು ಪಂದ್ಯವನ್ನಾಡಿದ್ದು, ಇದೀಗ ಎರಡನೇ ಪಂದ್ಯಗಳನ್ನು ಆಡುತ್ತಿವೆ. ಈ ನಡುವೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ದಕ್ಷಿಣ ಆಫ್ರಿಕಾ ಆಟಗಾರನ ಎಂಟ್ರಿಯಾಗಿದೆ.

ವಾಸ್ತವವಾಗಿ ಗಾಯದಿಂದಾಗಿ ಈ ಸೀಸನ್ನಿಂದ ಹೊರಗುಳಿದಿದ್ದ ಪ್ರಸಿದ್ಧ್ ಕೃಷ್ಣ ಅವರ ಬದಲಿಯಾಗಿ ದಕ್ಷಿಣ ಆಫ್ರಿಕಾದ ಸ್ಟಾರ್ ಬೌಲರ್ ಕೇಶವ್ ಮಹಾರಾಜ್ ಅವರನ್ನು ರಾಜಸ್ಥಾನ್ ರಾಯಲ್ಸ್ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿದೆ.

ಮೂಲ ಬೆಲೆ 50 ಲಕ್ಷ ರೂಗಳಿಗೆ ತಂಡ ಸೇರಿಕೊಂಡಿರುವ ಕೇಶವ್ ಮಹಾರಾಜ್ ಇನ್ನು ಮುಂದೆ ಐಪಿಎಲ್ನಲ್ಲಿ ರಾಜಸ್ಥಾನ್ ಪರ ಕಣಕ್ಕಿಳಿಯಲ್ಲಿದ್ದಾರೆ. ಎಡಗೈ ಸ್ಪಿನ್ ಬೌಲಿಂಗ್ ಮಾಡುವ ಮಹಾರಾಜ್, ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನಲ್ಲಿ ಭಾರತೀಯ ಪಿಚ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

ವಿಶ್ವಕಪ್‌ನಲ್ಲಿ ಆಡಿದ 10 ಪಂದ್ಯಗಳಲ್ಲಿ ಕೇಶವ್ 15 ವಿಕೆಟ್‌ಗಳನ್ನು ಪಡೆದಿದ್ದರು. ಅಲ್ಲದೆ ಈ ವರ್ಷದ ಆರಂಭದಲ್ಲಿ ನಡೆದ SA20 ನಲ್ಲಿ, ಮಹಾರಾಜ್, ಸೂಪರ್ ಜೈಂಟ್ಸ್ ಫ್ರಾಂಚೈಸ್ ಪರ ಕಣಕ್ಕಿಳಿದಿದ್ದರು. ಅಲ್ಲಿ ಆಡಿದ್ದ 13 ಪಂದ್ಯಗಳಲ್ಲಿ 15 ವಿಕೆಟ್‌ಗಳನ್ನು ಕಬಳಿಸಿದ್ದರು.

ಅನುಭವಿ ಕೇಶವ್ ಮಹಾರಾಜ್ ಇದುವರೆಗೆ ದಕ್ಷಿಣ ಆಫ್ರಿಕಾ ಪರ 27 ಟಿ20, 44 ಏಕದಿನ ಮತ್ತು 50 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 237 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೆ 159 ಟಿ20 ಪಂದ್ಯಗಳನ್ನು ಆಡಿರುವ ಅವರು 130 ವಿಕೆಟ್‌ಗಳನ್ನು ಪಡೆದಿದ್ದಾ

ರಾಜಸ್ಥಾನ್ ರಾಯಲ್ಸ್ ತಂಡ: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್, ರಿಯಾನ್ ಪರಾಗ್, ನವದೀಪ್ ಸೈನಿ, ಧ್ರುವ ಜುರೆಲ್, ಟ್ರೆಂಟ್ ಬೌಲ್ಟ್, ಡೊನೊವನ್ ಫೆರೇರಾ, ಕುಲದೀಪ್ ಸೇನ್, ಕುನಾಲ್ ರಾಥೋರ್, ಅವೇಶ್ ಖಾನ್, ರೋವ್ಮನ್ ಪೊವೆಲ್, ಶುಭಂ ದುಬೆ, ಟಾಮ್ ಕೊಹ್ಲರ್-ಕಾಡ್ಮೋರ್, ಅಬಿದ್ ಮುಷ್ತಾಕ್, ನಾಂದ್ರೆ ಬರ್ಗರ್, ಕೇಶವ್ ಮಹಾರಾಜ್.

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



