- Kannada News Photo gallery Cricket photos Kannada News | IPL 2024: RCB Captain 2024: Who will be rcb captain in IPL 2024
IPL 2024: ಮತ್ತೆ ಬದಲಾಗಲಿದೆಯಾ RCB ತಂಡದ ನಾಯಕತ್ವ..?
IPL 2024 News: ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತವರಿನಲ್ಲಿ 7 ಪಂದ್ಯಗಳನ್ನಾಡಿದೆ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ.
Updated on: Jun 04, 2023 | 8:29 PM

IPL 2024: ಕಳೆದ 16 ಸೀಸನ್ಗಳಿಂದ ಚಾಂಪಿಯನ್ ಪಟ್ಟ ಅಲಂಕರಿಸುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕನಸು ಮುಂದುವರೆದಿದೆ. ಪ್ರತಿ ಬಾರಿ ಈ ಸಲ ಕಪ್ ನಮ್ದೆ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆರಂಭಿಸುವ ಆರ್ಸಿಬಿ ಫೈನಲ್ ಪ್ರವೇಶಿಸದೇ 7 ವರ್ಷಗಳೇ ಕಳೆದಿವೆ.

ಅದರಲ್ಲೂ ಕಳೆದ ಸೀಸನ್ನಲ್ಲಿ ಆರ್ಸಿಬಿ 14 ಪಂದ್ಯಗಳಲ್ಲಿ ಗೆದ್ದಿದ್ದು ಕೇವಲ 7 ಮ್ಯಾಚ್ ಮಾತ್ರ. ಇದರ ಬೆನ್ನಲ್ಲೇ ಆರ್ಸಿಬಿ ತಂಡದ ನಾಯಕತ್ವದ ಬಗ್ಗೆ ಪ್ರಶ್ನೆಗಳೆದಿದ್ದವು. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತವರಿನಲ್ಲಿ ಆಡಿದ 7 ಪಂದ್ಯಗಳಲ್ಲಿ 4 ರಲ್ಲಿ ಸೋಲನುಭವಿಸಿತ್ತು.

ಪರಿಣಾಮ 2019 ರ ಬಳಿಕ ಆರ್ಸಿಬಿ ತಂಡವು ಮೊದಲ ಬಾರಿಗೆ ಲೀಗ್ ಹಂತದಿಂದಲೇ ಹೊರಬಿದ್ದಿತ್ತು. ಇದೇ ಕಾರಣದಿಂದಾಗಿ ಇದೀಗ ಈ ಬಾರಿಯ ಐಪಿಎಲ್ನಲ್ಲಿ ಫಾಫ್ ಡುಪ್ಲೆಸಿಸ್ ಅವರ ನಾಯಕತ್ವದಲ್ಲಿ ಆರ್ಸಿಬಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ.

ಏಕೆಂದರೆ ಡುಪ್ಲೆಸಿಸ್ ಕಳೆದ ಎರಡು ಸೀಸನ್ಗಳಿಂದ ಆರ್ಸಿಬಿ ತಂಡವನ್ನು ಮುನ್ನಡೆಸಿದ್ದಾರೆ. ಒಟ್ಟು 27 ಪಂದ್ಯಗಳಲ್ಲಿ ಫಾಫ್ ಸಾರಥ್ಯದಲ್ಲಿ ಕಣಕ್ಕಿಳಿದ ಆರ್ಸಿಬಿ ಗೆದ್ದಿರುವುದು ಕೇವಲ 14 ಪಂದ್ಯಗಳಲ್ಲಿ ಮಾತ್ರ. ಅಂದರೆ ಡುಪ್ಲೆಸಿಸ್ ನಾಯಕತ್ವದಲ್ಲಿ ಆರ್ಸಿಬಿ 13 ಪಂದ್ಯಗಳಲ್ಲಿ ಸೋತಿದೆ.

ಇನ್ನು ಡುಪ್ಲೆಸಿಸ್ ಅನುಪಸ್ಥಿತಿಯಲ್ಲಿ ಕಳೆದ ಸೀಸನ್ನಲ್ಲಿ ಆರ್ಸಿಬಿ ತಂಡವನ್ನು ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಮುನ್ನಡೆಸಿದ್ದರು. ಈ ವೇಳೆ ತಮ್ಮ ಹಿಂದಿನ ಆಕ್ರಮಣಶೀಲಾ ನಾಯಕತ್ವದೊಂದಿಗೆ ಗಮನ ಸೆಳೆದಿದ್ದರು. ಇದೇ ಕಾರಣದಿಂದಾಗಿ ಆರ್ಸಿಬಿ ಫ್ರಾಂಚೈಸಿ ಮತ್ತೆ ಕೊಹ್ಲಿಗೆ ನಾಯಕತ್ವ ನೀಡಲಿದೆಯಾ ಎಂಬ ಚರ್ಚೆ ಶುರುವಾಗಿದೆ.

ಆದರೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಂದರೆ ನಾಯಕನ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ಈ ಹಿಂದೆ ರಾಜೀನಾಮೆ ನೀಡಲು ತಿಳಿಸಿದ ಕಾರಣದಿಂದ ಇದೀಗ ಕೊಹ್ಲಿ ಸಂಪೂರ್ಣ ಮುಕ್ತರಾಗಿದ್ದಾರೆ.

ಇತ್ತ ಸತತ ಎರಡು ಸೀಸನ್ಗಳಲ್ಲಿ ಫಾಫ್ ಡುಪ್ಲೆಸಿಸ್ ತಂಡವನ್ನು ಮುನ್ನಡೆಸಿದರೂ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅತ್ತ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್ಸಿಬಿ 3 ಬಾರಿ ಪ್ಲೇಆಫ್ಸ್ ಪ್ರವೇಶಿಸಿದರೆ, ಒಂದು ಬಾರಿ ಫೈನಲ್ ಪಂದ್ಯವನ್ನಾಡಿದೆ.

ಆದರೀಗ ವಿರಾಟ್ ಕೊಹ್ಲಿ ಸಂಪೂರ್ಣ ಫ್ರೀಯಾಗಿದ್ದಾರೆ. ಟೀಮ್ ಇಂಡಿಯಾದ ಮೂರು ತಂಡಗಳ ನಾಯಕತ್ವವನ್ನು ತೊರೆದಿದ್ದಾರೆ. ಅಂದರೆ ನಾಯಕನ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ಈ ಹಿಂದೆ ರಾಜೀನಾಮೆ ನೀಡಲು ತಿಳಿಸಿದ ಕಾರಣದಿಂದ ಇದೀಗ ಕೊಹ್ಲಿ ಸಂಪೂರ್ಣ ಮುಕ್ತರಾಗಿದ್ದಾರೆ.

ಅತ್ತ 39 ವರ್ಷದ ಫಾಫ್ ಡುಪ್ಲೆಸಿಸ್ ನಿವೃತ್ತಿಯ ಅಂಚಿನಲ್ಲಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಈ ಬಾರಿಯ ಐಪಿಎಲ್ನಲ್ಲಿ ಮತ್ತೆ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡಿದರೂ ಅಚ್ಚರಿಪಡಬೇಕಿಲ್ಲ.

ಎಲ್ಲಾ ಕಾರಣಗಳಿಂದಾಗಿ ಆರ್ಸಿಬಿ ಫ್ರಾಂಚೈಸಿಯು ಮುಂದಿನ ಸೀಸನ್ ಐಪಿಎಲ್ನಲ್ಲಿ ಮತ್ತೆ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡಿದರೂ ಅಚ್ಚರಿಪಡಬೇಕಿಲ್ಲ.



















