AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡಕ್ಕೆ ಹೊಸ ಆಟಗಾರ ಎಂಟ್ರಿ..?

IPL 2024: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 22 ರಿಂದ ಶುರುವಾಗುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಮಹತ್ವದ ಬದಲಾಗಲಿದೆ ಎಂದು ತಿಳಿದು ಬಂದಿದೆ. ಅಂದರೆ ಆರ್​ಸಿಬಿ ತಂಡದಿಂದ ಇಂಗ್ಲೆಂಡ್ ಆಟಗಾರ ರೀಸ್ ಟೋಪ್ಲಿ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

TV9 Web
| Updated By: Digi Tech Desk|

Updated on:Feb 14, 2024 | 3:05 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 (IPL 2024) ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಏಕೆಂದರೆ ಆರ್​ಸಿಬಿ ತಂಡದಲ್ಲಿದ್ದ ಪ್ರಮುಖ ವೇಗಿ ರೀಸ್ ಟೋಪ್ಲಿ ಈ ಬಾರಿಯ ಐಪಿಎಲ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

1 / 7
ಗಾಯದ ಸಮಸ್ಯೆಯ ಕಾರಣ ರೀಸ್ ಟೋಪ್ಲಿಗೆ ಫ್ರಾಂಚೈಸಿ ಲೀಗ್ ಕ್ರಿಕೆಟ್ ಆಡದಂತೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಸೂಚಿಸಿದೆ. ಹೀಗಾಗಿಯೇ ಅವರು ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹೊರಗುಳಿದ್ದಾರೆ. ಇದರ ಬೆನ್ನಲ್ಲೇ ಟೋಪ್ಲಿಗೆ ಐಪಿಎಲ್ ಆಡಲು  ನಿರಾಕ್ಷೇಪಣಾ ಪ್ರಮಾಣಪತ್ರ ದೊರೆಯುವುದು ಅನುಮಾನ ಎನ್ನಲಾಗಿತ್ತು. ಇದೀಗ ಟೋಪ್ಲಿ ಬದಲಿಗೆ ಆರ್​ಸಿಬಿ ಮತ್ತೋರ್ವ ಆಟಗಾರನಿಗೆ ಮಣೆಹಾಕಿದೆ ಎಂದು ತಿಳಿದು ಬಂದಿದೆ.

2 / 7
ಪ್ರಸ್ತುತ ಮಾಹಿತಿ ಪ್ರಕಾರ, ರೀಸ್ ಟೋಪ್ಲಿ ಬದಲಿ ಆಟಗಾರನಾಗಿ ಕ್ರಿಸ್ ಜೋರ್ಡನ್ ಅವರನ್ನು ​ಆರ್​ಸಿಬಿ ಫ್ರಾಂಚೈಸಿ ಆಯ್ಕೆ ಮಾಡಿಕೊಂಡಿದೆ. ಅದರಂತೆ ಐಪಿಎಲ್ ಸೀಸನ್-17 ರಲ್ಲಿ ಆರ್​ಸಿಬಿ ಪರ ಇಂಗ್ಲೆಂಡ್ ಆಟಗಾರ ಜೋರ್ಡನ್ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

3 / 7
ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕ್ರಿಸ್ ಜೋರ್ಡನ್ 1.50 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರ ಖರೀದಿಗೆ ಯಾವುದೇ ಫ್ರಾಂಚೈಸಿ ಮುಂದಾಗಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಐಪಿಎಲ್​ಗೆ ರಿಎಂಟ್ರಿ ಕೊಡಲು ಜೋರ್ಡನ್ ಸಜ್ಜಾಗಿದ್ದಾರೆ.

4 / 7
ವಿಶೇಷ ಎಂದರೆ ಕ್ರಿಸ್ ಜೋರ್ಡನ್ 2016 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದರು. ಈ ವೇಳೆ 9 ಪಂದ್ಯಗಳಿಂದ ಒಟ್ಟು 12 ವಿಕೆಟ್​ಗಳನ್ನು ಕಬಳಿಸಿದ್ದರು. ಇದಾಗ್ಯೂ 2017 ರಲ್ಲಿ ಅವರನ್ನು ಆರ್​ಸಿಬಿ ತಂಡದಿಂದ ಕೈ ಬಿಡಲಾಗಿತ್ತು.

5 / 7
ಆ ಬಳಿಕ 2017 ಮತ್ತು 2018 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಕಣಕ್ಕಿಳಿದಿದ್ದರು. 2019 ರಲ್ಲಿ ಹರಾಜಾಗದೇ ಉಳಿದ ಜೋರ್ಡನ್ 2020 ಮತ್ತು 2021 ರಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು.

6 / 7
ಹಾಗೆಯೇ 2023 ರಲ್ಲಿ ಜೋಫ್ರಾ ಆರ್ಚರ್ ಅವರ ಬದಲಿ ಆಟಗಾರನಾಗಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಯ್ಕೆಯಾಗಿದ್ದರು. ಇದೀಗ ಮತ್ತೊಮ್ಮೆ ಬದಲಿ ಆಟಗಾರನಾಗಿ ಕ್ರಿಸ್ ಜೋರ್ಡನ್ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.

7 / 7

Published On - 9:31 am, Tue, 13 February 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ