- Kannada News Photo gallery Cricket photos IPL 2024 RCB Schedule 2024 Timings, Dates, Venues Details in kannada
IPL 2024: ಮೊದಲಾರ್ಧದ ಐಪಿಎಲ್ನಲ್ಲಿ ಆರ್ಸಿಬಿ ಎಷ್ಟು ಪಂದ್ಯಗಳನ್ನು ಆಡಲಿದೆ? ಇಲ್ಲಿದೆ ವೇಳಾಪಟ್ಟಿ
RCB IPL 2024 Schedule: ಮಾರ್ಚ್ 21 ರಿಂದ ಆರಂಭವಾಗಲಿರುವ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲೇ ಆರ್ಸಿಬಿ ಕಣಕ್ಕಿಳಿಯವುದನ್ನು ನಾವು ಕಾಣಬಹುದಾಗಿದೆ. ಮೊದಲಾರ್ಧದಲ್ಲಿ ನಡೆಯುವ ಒಟ್ಟು 21 ಪಂದ್ಯಗಳಲ್ಲಿ ಆರ್ಸಿಬಿ ತಂಡ ಐದು ಪಂದ್ಯಗಳನ್ನು ಆಡಲಿದೆ. ಅದರ ಪೂರ್ಣ ವಿವರ ಇಲ್ಲಿದೆ.
Updated on: Feb 22, 2024 | 6:28 PM

ಐಪಿಎಲ್ 2024 ರ ಮೊದಲಾರ್ಧದ ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಅದರಂತೆ 17 ದಿನಗಳ ಕಾಲ ನಡೆಯುವ ಮೊದಲಾರ್ಧದಲ್ಲಿ ಒಟ್ಟು 21 ಪಂದ್ಯಗಳು ನಡೆಯಲ್ಲಿವೆ. ಈ 21 ಪಂದ್ಯಗಳ ಪೈಕಿ ಆರ್ಸಿಬಿ ತಂಡ ಬರೋಬ್ಬರಿ 5 ಪಂದ್ಯಗಳನ್ನು ಆಡಲಿದೆ.

ಮಾರ್ಚ್ 21 ರಿಂದ ಆರಂಭವಾಗಲಿರುವ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲೇ ಆರ್ಸಿಬಿ ಕಣಕ್ಕಿಳಿಯವುದನ್ನು ನಾವು ಕಾಣಬಹುದಾಗಿದೆ. ಅದರಂತೆ ಲೀಗ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಮಿಳು ನಾಡಿನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ತನ್ನ ಎರಡನೇ ಪಂದ್ಯವನ್ನು ಮಾರ್ಚ್ 25 ರಂದು ಆಡಲಿರುವ ಆರ್ಸಿಬಿ, ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಬೆಂಗಳೂರಿನಲ್ಲಿ ಎದುರಿಸಲಿದೆ. ಈ ಪಂದ್ಯ ಕೂಡ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಮಾರ್ಚ್ 29 ರಂದು ಕೆಕೆಆರ್ ವಿರುದ್ಧ ಆರ್ಸಿಬಿ ತನ್ನ ಮೂರನೇ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ಬೆಂಗಳೂರಿನಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಈ ಪಂದ್ಯ ಕೂಡ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಏಪ್ರಿಲ್ 2 ರಂದು ನಾಲ್ಕನೇ ಪಂದ್ಯವನ್ನಾಡಲಿರುವ ಆರ್ಸಿಬಿಗೆ, ಲಕ್ನೋ ಸೂಪರ್ ಜೈಂಟ್ಸ್ ತಂಡ ಎದುರಾಗಲಿದೆ. ಈ ಪಂದ್ಯ ಕೂಡ ಬೆಂಗಳೂರಿನಲ್ಲಿ ನಡೆಯಲ್ಲಿದ್ದು, ಸಂಜೆ 7.30 ಕ್ಕೆ ಪಂದ್ಯ ಆರಂಭವಾಗಲಿದೆ.

ಮೊದಲಾರ್ಧದ ಐಪಿಎಲ್ನಲ್ಲಿ ತನ್ನ ಕೊನೆಯ ಪಂದ್ಯವನ್ನು ಆರ್ಸಿಬಿ ಏಪ್ರಿಲ್ 6 ರಂದು ರಾಜಸ್ಥಾನ್ ವಿರುದ್ಧ ಆಡಲಿದೆ. ಉಭಯ ತಂಡಗಳ ಈ ಕಾದಾಟಕ್ಕೆ ಜೈಪುರ ಮೈದಾನ ಆತಿಥ್ಯವಹಿಸಲಿದೆ. ಈ ಪಂದ್ಯ ಕೂಡ ಸಂಜೆ 7.30 ಕ್ಕೆ ಪಂದ್ಯ ಆರಂಭವಾಗಲಿದೆ.



















