IPL 2024: RCB ತಂಡದ ಇಂಪ್ಯಾಕ್ಟ್ ಪ್ಲೇಯರ್ಸ್ ಯಾರು?
TV9 Web | Updated By: ಝಾಹಿರ್ ಯೂಸುಫ್
Updated on:
Mar 13, 2024 | 2:53 PM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 17ನೇ ಸೀಸನ್ ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. 10 ತಂಡಗಳ ನಡುವಣ ಈ ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ IPL 2024 ಕ್ಕೆ ಚಾಲನೆ ಸಿಗಲಿದೆ.
1 / 8
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು 25 ಸದಸ್ಯರ ಬಳಗದೊಂದಿಗೆ ಅಣಿಯಾಗಿದೆ. ಈ ಬಳಗದಲ್ಲಿ 8 ಬ್ಯಾಟರ್ಗಳಿದ್ದರೆ, 7 ಆಲ್ರೌಂಡರ್ಗಳು ಹಾಗೂ 10 ಬೌಲರ್ಗಳಿದ್ದಾರೆ.
2 / 8
ಇವರಲ್ಲಿ ಆರ್ಸಿಬಿ ಪರ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯುವವರು ಯಾರು ಎಂಬ ಪ್ರಶ್ನೆ ಮೂಡುವುದು ಸಹಜ. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಆರ್ಸಿಬಿ ತಂಡದಲ್ಲಿ 7 ಆಲ್ರೌಂಡರ್ಗಳಿರುವುದು. ಹೀಗಾಗಿ ಇಲ್ಲಿ ಬ್ಯಾಟರ್ಗಳ ಬದಲಿಗೆ ಬೌಲರ್ಗಳು ಇಂಪ್ಯಾಕ್ಟ್ ಪ್ಲೇಯರ್ಗಳು ಕಣಕ್ಕಿಳಿಯಲಿದ್ದಾರೆ ಎನ್ನಬಹುದು.
3 / 8
ಆರ್ಸಿಬಿ ತಂಡದ ಟಾಪ್-4 ಬ್ಯಾಟರ್ಗಳಲ್ಲಿ ರಜತ್ ಪಾಟಿದಾರ್ ಕಾಣಿಸಿಕೊಳ್ಳುವುದು ಖಚಿತ. ಹೀಗಾಗಿ ಅವರ ಬದಲಿಗೆ ಬೌಲರ್ರೊಬ್ಬರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.
4 / 8
ಇಲ್ಲಿ ಇಂಪ್ಯಾಕ್ಟ್ ಪ್ಲೇಯರ್ಗಳಾಗಿ ಆರ್ಸಿಬಿ ಮಹಿಪಾಲ್ ಲೋಮ್ರರ್, ಅನೂಜ್ ರಾವತ್, ಆಕಾಶ್ ದೀಪ್, ಯಶ್ ದಯಾಳ್ ಮತ್ತು ಕರ್ಣ್ ಶರ್ಮಾ ಅವರನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಸೀಸನ್ನಲ್ಲೂ ಆರ್ಸಿಬಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಅನೂಜ್ ರಾವತ್ ಹಾಗೂ ಕರ್ಣ್ ಶರ್ಮಾ ಅವರನ್ನೇ ಹೆಚ್ಚಿನ ಪಂದ್ಯಗಳಲ್ಲಿ ಕಣಕ್ಕಿಳಿಸಿತ್ತು.
5 / 8
ಅಂದರೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬ್ಯಾಟರ್ ಕಣಕ್ಕಿಳಿಯಬೇಕಿದ್ದರೆ ಅನೂಜ್ ರಾವತ್ ಅಥವಾ ಮಹಿಪಾಲ್ ಲೋಮ್ರರ್ ಅವರನ್ನು ಬಳಸಿಕೊಳ್ಳಬಹುದು. ಹಾಗೆಯೇ ಬೌಲರ್ನನ್ನು ಇಂಪ್ಯಾಕ್ ಪ್ಲೇಯರ್ ಆಗಿ ಬಳಸಿಕೊಳ್ಳಲು ಬಯಸಿದರೆ ಆಕಾಶ್ ದೀಪ್, ಯಶ್ ದಯಾಳ್ ಅಥವಾ ಕರ್ಣ್ ಶರ್ಮಾಗೆ ಚಾನ್ಸ್ ನೀಡಬಹುದು.
6 / 8
ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ವಿದೇಶಿ ಆಟಗಾರನನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಳಸಿಕೊಳ್ಳಬೇಕಿದ್ದರೆ, ಆರ್ಸಿಬಿ ಪ್ಲೇಯಿಂಗ್ ಇಲೆವೆನ್ನಲ್ಲಿ ಮೂರು ಅಥವಾ ಅದಕ್ಕಿಂತ ಕಡಿಮೆ ಫಾರಿನ್ ಪ್ಲೇಯರ್ಸ್ಗೆ ಅವಕಾಶ ನೀಡಬೇಕಾಗುತ್ತದೆ.
7 / 8
ಆದರೆ ಕಳೆದ ಸೀಸನ್ನಲ್ಲಿ ಆರ್ಸಿಬಿ ಅಂತಹ ಯಾವುದೇ ದುಸ್ಸಾಹಸಕ್ಕೆ ಕೈ ಹಾಕಿಲ್ಲ. ಹೀಗಾಗಿ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಲ್ವರು ವಿದೇಶಿ ಆಟಗಾರರೊಂದಿಗೆ ಕಣಕ್ಕಿಳಿಯಲಿದೆ. ಅಲ್ಲದೆ ಭಾರತೀಯ ಆಟಗಾರರನ್ನು ಇಂಪ್ಯಾಕ್ ಪ್ಲೇಯರ್ ಆಗಿ ಬಳಸಿಕೊಳ್ಳಲಿದೆ ಎನ್ನಬಹುದು.
8 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.