IPL 2024: ಕೆಕೆಆರ್ ವಿರುದ್ಧ ಹಸಿರು ಜೆರ್ಸಿ ತೊಡಲಿದೆ ಆರ್‌ಸಿಬಿ; ಇದರ ಹಿಂದಿನ ಉದ್ದೇಶವೇನು ಗೊತ್ತಾ?
IPL 2024 KKR vs RCB: ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ಗೋ ಗ್ರೀನ್ ಡೇ ಸಂಪ್ರದಾಯವನ್ನು ಮುಂದುವರಿಸಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ಹಸಿರು ಜೆರ್ಸಿ ಧರಿಸಿ ಮೈದಾನಕ್ಕಿಳಿಯಲಿದೆ. ಈ ವಿಚಾರವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ತನ್ನ ಅಭಿಮಾನಿಗಳಿಗೆ ಮಾಹಿತಿ ನೀಡಿದೆ.
1 / 7
17ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ತುಂಬಾ ಕಳಪೆಯಾಗಿದೆ. ತಂಡ ಇಲ್ಲಿಯವರೆಗೆ ಆಡಿದ 7 ಪಂದ್ಯಗಳಲ್ಲಿ 1 ಪಂದ್ಯದಲ್ಲಿ ಮಾತ್ರ ಗೆದ್ದಿದ್ದರೆ, 6 ಪಂದ್ಯಗಳಲ್ಲಿ ಸೋಲು ಕಂಡಿದೆ. ಸದ್ಯ ಬೆಂಗಳೂರು ತಂಡ 2 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.
2 / 7
ಈ ನಡುವೆ ಆರ್‌ಸಿಬಿ ತಂಡ ಮಹತ್ವದ ಘೋಷಣೆ ಮಾಡಿದ್ದು, ಮುಂದಿನ ಪಂದ್ಯದಲ್ಲಿ ಹೊಸ ಶೈಲಿಯಲ್ಲಿ ಕಾಣಿಸಿಕೊಳ್ಳಲಿದೆ. ಅಂದರೆ ಪ್ರತಿ ಬಾರಿಯಂತೆ ಈ ಬಾರಿಯೂ ಆರ್‌ಸಿಬಿ ಒಂದು ಪಂದ್ಯದಲ್ಲಿ ಹಸಿರು ಬಣ್ಣದ ಜೆರ್ಸಿ ತೊಟ್ಟು ಕಣಕ್ಕಿಳಿಯುತ್ತಿದೆ.
3 / 7
ಸತತ ಸೋಲುಗಳಿಂದ ಕಂಗೆಟ್ಟಿರುವ ಆರ್‌ಸಿಬಿ ತನ್ನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಇದೇ ಏಪ್ರಿಲ್ 21 ರಂದು ಅಂದರೆ ಮುಂದಿನ ಭಾನುವಾರದಂದು ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಎದುರಿಸಲಿದೆ.
4 / 7
ವಾಡಿಕೆಯಂತೆ ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ಗೋ ಗ್ರೀನ್ ಡೇ ಸಂಪ್ರದಾಯವನ್ನು ಮುಂದುವರಿಸಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ಹಸಿರು ಜೆರ್ಸಿ ಧರಿಸಿ ಮೈದಾನಕ್ಕಿಳಿಯಲಿದೆ. ಈ ವಿಚಾರವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ತನ್ನ ಅಭಿಮಾನಿಗಳಿಗೆ ಮಾಹಿತಿ ನೀಡಿದೆ.
5 / 7
ವಾಸ್ತವವಾಗಿ, 2011 ರ ಐಪಿಎಲ್ ಆವೃತ್ತಿಯಿಂದ ಆರ್‌ಸಿಬಿ ತಂಡ ಸೀಸನ್ನಲ್ಲಿ ಆಡುವ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ. ತನ್ನ ಅಭಿಮಾನಿಗಳಲ್ಲಿ ಸ್ವಚ್ಛ ಮತ್ತು ಹಸಿರು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆರ್‌ಸಿಬಿ ಈ ಹಸಿರು ಜೆರ್ಸಿಯನ್ನು ಧರಿಸಲಿದೆ.
6 / 7
ಅದರಂತೆ ಈ ಬಾರಿಯೂ ಆರ್‌ಸಿಬಿ ತಂಡ ಕೆಕೆಆರ್ ವಿರುದ್ಧ ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡಲಿದೆ. ತಂಡದ ಹೊಸ ಜೆರ್ಸಿ ಸಾಕಷ್ಟು ಆಕರ್ಷಕವಾಗಿದೆ. ಈ ಜೆರ್ಸಿಯ ಟೀ ಶರ್ಟ್‌ನಲ್ಲಿ ಹಸಿರು ಮತ್ತು ನೀಲಿ ಬಣ್ಣಗಳನ್ನು ಬಳಸಲಾಗಿದೆ.
7 / 7
ಆರ್‌ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಸೌರವ್ ಚೌಹಾಣ್, ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ವಿಲ್ ಜಾಕ್ಸ್, ಕ್ಯಾಮೆರಾನ್ ಗ್ರೀನ್, ಟಾಮ್ ಕರನ್, ಮನೋಜ್ ಭಾಂಡಗೆ, ಆಕಾಶ್ ದೀಪ್, ರಜತ್ ಪಾಟಿದಾರ್, ಯಶ್ ದಯಾಳ್, ವಿಜಯಕುಮಾರ್ ವೈಶಾಕ್, ರೀಸ್ ಟೋಪ್ಲೀ, ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಮೊಹಮ್ಮದ್ ಸಿರಾಜ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಮಯಾಂಕ್ ದಾಗರ್, ಸುಯ್ಯಶ್ ಪ್ರಭುದೇಸಾಯಿ.
Published On - 9:20 pm, Thu, 18 April 24