- Kannada News Photo gallery Cricket photos IPL 2024 Rohit Sharma completes 1500 plus boundaries in t20 cricket
IPL 2024: 1500 ಬೌಂಡರಿ; ಟಿ20 ಕ್ರಿಕೆಟ್‌ನಲ್ಲಿ ಹಿಟ್ಮ್ಯಾನ್ ನೂತನ ದಾಖಲೆ..!
IPL 2024 Rohit Sharma: ಈ ಪಂದ್ಯದಲ್ಲಿ ಮುಂಬೈ ಪರ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ರೋಹಿತ್ ಶರ್ಮಾ 27 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ ಸಹಿತ 49 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿ ಅಪರೂಪದ ದಾಖಲೆಯನ್ನು ನಿರ್ಮಿಸಿದರು.
Updated on: Apr 07, 2024 | 8:16 PM

ವಾಂಖೆಡೆಯಲ್ಲಿ ಸ್ಟೇಡಿಯಂನಲ್ಲಿ ಇಂದು ನಡೆದ 17ನೇ ಆವೃತ್ತಿಯ ಐಪಿಎಲ್ನ 20ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 29 ರನ್ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ ತಂಡ ಲೀಗ್ನಲ್ಲಿ ಮೊದಲ ಜಯ ದಾಖಲಿಸಿದೆ.

ಈ ಪಂದ್ಯದಲ್ಲಿ ಮುಂಬೈ ಪರ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ರೋಹಿತ್ ಶರ್ಮಾ 27 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ ಸಹಿತ 49 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿ ಅಪರೂಪದ ದಾಖಲೆಯನ್ನು ನಿರ್ಮಿಸಿದರು.

ರೋಹಿತ್ ಶರ್ಮಾ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಒಟ್ಟು 9 ಬೌಂಡರಿಗಳನ್ನು ಬಾರಿಸುವುದರೊಂದಿಗೆ ಟಿ20 ಕ್ರಿಕೆಟ್‌ನಲ್ಲಿ 1508 ಬೌಂಡರಿಗಳನ್ನು ಪೂರೈಸಿದ್ದಾರೆ. ಈ ಮೂಲಕ ರೋಹಿತ್ ಈ ಸ್ವರೂಪದಲ್ಲಿ 1500 ಕ್ಕೂ ಹೆಚ್ಚು ಬೌಂಡರಿಗಳನ್ನು ಬಾರಿಸಿದ ದಾಖಲೆಯನ್ನು ಹೊಂದಿರುವ ಮೊದಲ ಭಾರತೀಯ ಆಟಗಾರರಾಗಿದ್ದಾರೆ.

ರೋಹಿತ್ ನಂತರ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತೀಯ ಆಟಗಾರರ ಪೈಕಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ ಒಟ್ಟು 1486 ಬೌಂಡರಿಗಳನ್ನು ಬಾರಿಸಿದ್ದಾರೆ.

ವಿಶ್ವ ಕ್ರಿಕೆಟ್‌ನಲ್ಲಿ ಟಿ20 ಮಾದರಿಯಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ದಾಖಲೆಯನ್ನು ಗಮನಿಸಿದರೆ, ಇಲ್ಲಿಯವರೆಗೆ ಒಟ್ಟು 2196 ಬೌಂಡರಿಗಳನ್ನು ಬಾರಿಸಿರುವ ಕ್ರಿಸ್ ಗೇಲ್ ಮೊದಲ ಸ್ಥಾನದಲ್ಲಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್ನ ಮಾಜಿ ಆರಂಭಿಕ ಆಟಗಾರ ಅಲೆಕ್ಸ್ ಹೇಲ್ಸ್ ಟಿ20 ಮಾದರಿಯಲ್ಲಿ ಇದುವರೆಗೆ 1855 ಬೌಂಡರಿ ಬಾರಿಸಿದ್ದಾರೆ. ಮೂರನೇ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಇದ್ದು, ಇದುವರೆಗೆ ಅವರು ಈ ಸ್ವರೂಪದಲ್ಲಿ 1673 ಬೌಂಡರಿ ಬಾರಿಸಿದ್ದಾರೆ.




