IPL 2024: ಐತಿಹಾಸಿಕ ಪಂದ್ಯದಲ್ಲಿ ಎರಡೆರಡು ದಾಖಲೆ ಬರೆದ ರೋಹಿತ್ ಶರ್ಮಾ..!

|

Updated on: Apr 18, 2024 | 10:11 PM

IPL 2024: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ವಿಶೇಷ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅಲ್ಲದೆ ಈ ಪಂದ್ಯದಲ್ಲೇ ಎರಡೆರಡು ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

1 / 6
ಪಂಜಾಬ್​ನ ಮುಲ್ಲನ್‌ಪುರದ ಮಹಾರಾಜ ಯದ್ವೇಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ವಿಶೇಷ ಮೈಲಿಗಲ್ಲು ಸ್ಥಾಪಿಸಿದ್ದಾರೆ.

2 / 6
ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯ ರೋಹಿತ್ ಶರ್ಮಾಗೆ ಐಪಿಎಲ್‌ನಲ್ಲಿ 250ನೇ ಪಂದ್ಯವಾಗಿದೆ. ಈ ಮೂಲಕ ರೋಹಿತ್ ಐಪಿಎಲ್‌ನಲ್ಲಿ 250 ಪಂದ್ಯಗಳನ್ನಾಡಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ರೋಹಿತ್​ಗಿಂತ ಮೊದಲ ಎಂಎಸ್ ಧೋನಿ ಈ ಮೈಲಿಗಲ್ಲು ಸ್ಥಾಪಿಸಿದ್ದರು.

3 / 6
ಇನ್ನು ಈ ಐತಿಹಾಸಿಕ ಪಂದ್ಯದಲ್ಲಿ 25 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 36 ರನ್ ಬಾರಿಸಿದರು. ಈ ವೇಳೆ 3 ಸಿಕ್ಸರ್ ಬಾರಿಸಿದ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್‌ ಪರ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ನಿರ್ಮಿಸಿದರು.

4 / 6
ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ ಇದುವರೆಗೆ 224 ಸಿಕ್ಸರ್ ಸಿಡಿಸಿದ್ದಾರೆ. ಈ ಮೊದಲು ಈ ದಾಖಲೆ ಕೀರಾನ್ ಪೊಲಾರ್ಡ್ ಹೆಸರಿನಲ್ಲಿತ್ತು. ಮುಂಬೈ ತಂಡದ ಪರ ಕೀರಾನ್ ಪೊಲಾರ್ಡ್ ಐಪಿಎಲ್‌ನಲ್ಲಿ 223 ಸಿಕ್ಸರ್‌ಗಳನ್ನು ಬಾರಿಸಿದ್ದರು.

5 / 6
ಇದಲ್ಲದೆ ಈ ಪಂದ್ಯದಲ್ಲಿ 36 ರನ್​ಗಳ ಇನ್ನಿಂಗ್ಸ್ ಆಡಿದ ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 6500 ರನ್ ಪೂರೈಸಿದರು. ಇದರೊಂದಿಗೆ ಐಪಿಎಲ್‌ನಲ್ಲಿ 6500 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದಾರೆ.

6 / 6
ರೋಹಿತ್​ಗಿಂತ ಮೊದಲು ವಿರಾಟ್ ಕೊಹ್ಲಿ, ಶಿಖರ್ ಧವನ್ ಮತ್ತು ಡೇವಿಡ್ ವಾರ್ನರ್ ಮಾತ್ರ ಐಪಿಎಲ್​ನಲ್ಲಿ 6500 ರನ್​ಗಳ ಗಡಿ ದಾಟಿದ ಸಾಧನೆ ಮಾಡಿದ್ದರು. ಪ್ರಸ್ತುತ ಐಪಿಎಲ್‌ನಲ್ಲಿ ಅಧಿಕ ರನ್ ಬಾರಿಸಿರುವವರ ಪಟ್ಟಿಯಲ್ಲಿ 7624 ರನ್ ಬಾರಿಸಿರುವ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ.