- Kannada News Photo gallery Cricket photos IPL 2024 Rohit Sharma equals Dinesh Karthik record for most ducks in IPL
IPL 2024: ನಾಚಿಕೆಗೇಡಿನ ಸಂಗತಿ; ಸೊನ್ನೆ ಸುತ್ತುವುದರಲ್ಲಿ ಹಿಟ್ಮ್ಯಾನ್ಗೆ ಅಗ್ರಸ್ಥಾನ..!
IPL 2024, Rohit Sharma: ಈ ಪಂದ್ಯದಲ್ಲಿ ರೋಹಿತ್ ಶರ್ಮಾ ತಾವು ಎದುರಿಸಿದ ಮೊದಲ ಎಸೆತದಲ್ಲೇ ಔಟಾದರು. ಈ ಮೂಲಕ ರೋಹಿತ್ ಐಪಿಎಲ್‌ನಲ್ಲಿ ಅತಿ ಹೆಚ್ಚು ಗೋಲ್ಡನ್ ಡಕ್‌ಗಳಿಗೆ ಔಟಾದ ನಾಚಿಕೆಗೇಡಿನ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.
Updated on: Apr 01, 2024 | 9:10 PM

17ನೇ ಆವೃತ್ತಿಯ ಐಪಿಎಲ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡ ಇದುವರೆಗೆ ಆಡಿರುವ ಎರಡೂ ಪಂದ್ಯಗಳನ್ನು ಸೋತಿದೆ. ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲೂ ಮುಂಬೈ ಹಿನ್ನಡೆ ಅನುಭವಿಸಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಮುಂಬೈ ತಂಡಕ್ಕೆ ವೇಗಿ ಟ್ರೆಂಟ್ ಬೌಲ್ಟ್ ಆರಂಭದಲ್ಲೇ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು. ಮೊದಲ ಓವರ್ನಲ್ಲೇ ನಾಯಕ ರೋಹಿತ್ ಶರ್ಮಾ ಹಾಗೂ ನಮನ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು.

ಆ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ರೂಪದಲ್ಲಿ ಬಂದ ಡೆವಾಲ್ಡ್ ಬ್ರೆವಿಸ್ ಕೂಡ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಮುಂಬೈನ ಟಾಪ್ ಮೂವರು ಬ್ಯಾಟರ್ಗಳು ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಇದರಲ್ಲಿ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಸೊನ್ನೆಗೆ ಔಟಾಗುವ ಮೂಲಕ ಐಪಿಎಲ್‌ನಲ್ಲಿ ಬೇಡದ ದಾಖಲೆಯೊಂದನ್ನು ಬರೆದಿದ್ದಾರೆ.

ಈ ಪಂದ್ಯದಲ್ಲಿ ರೋಹಿತ್ ಶರ್ಮಾ ತಾವು ಎದುರಿಸಿದ ಮೊದಲ ಎಸೆತದಲ್ಲೇ ಔಟಾದರು. ಈ ಮೂಲಕ ರೋಹಿತ್ ಐಪಿಎಲ್‌ನಲ್ಲಿ ಅತಿ ಹೆಚ್ಚು ಗೋಲ್ಡನ್ ಡಕ್‌ಗಳಿಗೆ ಔಟಾದ ನಾಚಿಕೆಗೇಡಿನ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ಇದುವರೆಗೆ 17 ಬಾರಿ ಗೋಲ್ಡನ್ ಡಕ್‌ನಲ್ಲಿ ಔಟಾಗಿದ್ದಾರೆ. ರೋಹಿತ್‌ಗಿಂತ ಮೊದಲು ಆರ್‌ಸಿಬಿಯ ದಿನೇಶ್ ಕಾರ್ತಿಕ್ ಕೂಡ ಐಪಿಎಲ್‌ನಲ್ಲಿ 17 ಬಾರಿ ಶೂನ್ಯಕ್ಕೆ ಔಟಾಗಿದ್ದು, ಜಂಟಿಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಈ ಇಬ್ಬರನ್ನು ಹೊರತುಪಡಿಸಿ ಅಧಿಕ ಬಾರಿ ಶೂನ್ಯಕ್ಕೆ ಔಟಾದ ಪಟ್ಟಿಯಲ್ಲಿ ಜಂಟಿಯಾಗಿ ನಾಲ್ವರು ಆಟಗಾರರು ಎರಡನೇ ಸ್ಥಾನದಲ್ಲಿದ್ದಾರೆ. ಅವರಲ್ಲಿ ಪಿಯೂಷ್ ಚಾವ್ಲಾ, ಮನದೀಪ್ ಸಿಂಗ್, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಸುನಿಲ್ ನರೈನ್ ತಲಾ 15 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.









