IPL 2024: ಮೊದಲ ಭಾರತೀಯ; 3 ದಾಖಲೆಗಳ ಮೇಲೆ ಕಣ್ಣಿಟ್ಟ ರೋಹಿತ್ ಶರ್ಮಾ..!
IPL 2024, Rohit sharma: ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಇಂದು ತನ್ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಇನ್ನು ಇದೇ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಒಂದಲ್ಲ, ಎರಡಲ್ಲ.. ಮೂರು ಮೂರು ದಾಖಲೆ ಬರೆಯುವ ಸನಿಹದಲ್ಲಿದ್ದಾರೆ.
1 / 7
ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಇಂದು ತನ್ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಇನ್ನು ಇದೇ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಒಂದಲ್ಲ, ಎರಡಲ್ಲ.. ಮೂರು ಮೂರು ದಾಖಲೆ ಬರೆಯುವ ಸನಿಹದಲ್ಲಿದ್ದಾರೆ.
2 / 7
ಕ್ರೀಸ್ಗಿಳಿದರೆ ಸಿಕ್ಸರ್ ಸಿಡಿಸುವುದರಲ್ಲಿ ಪಂಟರ್ ಎನಿಸಿಕೊಂಡಿರುವ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ 487 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಹಾಗಾಗಿ ಐಪಿಎಲ್‌ನ ಈ ಸೀಸನ್ನಲ್ಲಿ ಅವರು ಇನ್ನೂ 13 ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾದರೆ, ಟಿ20 ಸ್ವರೂಪದಲ್ಲಿ 500 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
3 / 7
ಇಲ್ಲಿಯವರೆಗೆ, ಟಿ20 ಕ್ರಿಕೆಟ್‌ನಲ್ಲಿ 500 ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಕೇವಲ 3 ಆಟಗಾರರು ಯಶಸ್ವಿಯಾಗಿದ್ದಾರೆ. ಅದರಲ್ಲಿ ಒಬ್ಬರು ಕ್ರಿಸ್ ಗೇಲ್, ಈ ವಿಂಡೀಸ್ ದೈತ್ಯ ಇದುವರೆಗೆ 1065 ಸಿಕ್ಸರ್ ಬಾರಿಸಿ ಮೊದಲ ಸ್ಥಾನದಲ್ಲಿದ್ದಾರೆ.
4 / 7
ಎರಡು ಹಾಗೂ ಮೂರನೇ ಸ್ಥಾನದಲ್ಲೂ ವಿಂಡೀಸ್ ಆಟಗಾರರಿದ್ದು, ಕೀರಾನ್ ಪೊಲಾರ್ಡ್ 860 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಮೂರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ಆಲ್‌ರೌಂಡರ್ ಆಂಡ್ರೆ ರಸೆಲ್ ಇದ್ದಾರೆ.
5 / 7
ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ಇದುವರೆಗೆ 243 ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ ಅವರು ಮುಂಬೈ ಇಂಡಿಯನ್ಸ್‌ಗಾಗಿ 198 ಪಂದ್ಯಗಳನ್ನು ಆಡಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ರೋಹಿತ್ ಇನ್ನೂ 2 ಪಂದ್ಯಗಳನ್ನು ಆಡುವ ಮೂಲಕ ಐಪಿಎಲ್‌ನಲ್ಲಿ 200 ಪಂದ್ಯಗಳನ್ನು ಆಡಿದ ಮುಂಬೈ ಇಂಡಿಯನ್ಸ್‌ನ ಮೊದಲ ಆಟಗಾರನಾಗಲಿದ್ದಾರೆ.
6 / 7
ರೋಹಿತ್ ತಮ್ಮ ಐಪಿಎಲ್ ವೃತ್ತಿಜೀವನದ ಮೊದಲ 3 ಸೀಸನ್ಗಳನ್ನು ಡೆಕ್ಕನ್ ಚಾರ್ಜರ್ಸ್ ತಂಡದ ಪರ ಆಡಿದ್ದರು. ಈ ತಂಡದ ಪರ ರೋಹಿತ್ ಒಟ್ಟು 45 ಪಂದ್ಯಗಳನ್ನು ಆಡಿದ್ದರು.
7 / 7
ಒಟ್ಟು 109 ಕ್ಯಾಚ್‌ಗಳನ್ನು ಪಡೆದಿರುವ ಸುರೇಶ್ ರೈನಾ ಹೆಸರಿನಲ್ಲಿ ಐಪಿಎಲ್‌ನಲ್ಲಿ ಇದುವರೆಗೆ ಅತಿ ಹೆಚ್ಚು ಕ್ಯಾಚ್‌ಗಳ ದಾಖಲೆ ಇದೆ. ಆದರೆ ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ 98 ಕ್ಯಾಚ್‌ಗಳನ್ನು ತೆಗೆದುಕೊಂಡಿದ್ದಾರೆ. ಇದೀಗ ಕ್ಯಾಚ್‌ಗಳ ಶತಕ ಪೂರೈಸಲು ರೋಹಿತ್ಗೆ 2 ಕ್ಯಾಚ್ಗಳಷ್ಟೇ ಬೇಕಾಗಿದೆ. ಇದು ಸಾಧ್ಯವಾದರೆ, ಈ ಸಾಧನೆ ಮಾಡಿದ ನಾಲ್ಕನೇ ಆಟಗಾರ ಎಂಬ ದಾಖಲೆಯನ್ನು ರೋಹಿತ್ ಬರೆಯಲ್ಲಿದ್ದಾರೆ.
Published On - 4:32 pm, Sun, 24 March 24