AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಶತಕದ ಇನ್ನಿಂಗ್ಸ್ ನಡುವೆಯೂ ಬೇಡದ ದಾಖಲೆ ಬರೆದ ರೋಹಿತ್ ಶರ್ಮಾ..!

IPL 2024: ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಪರ ಗೆಲುವಿಗಾಗಿ ಏಕಾಂಗಿ ಹೋರಾಟ ನಡೆಸಿದ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಬರೋಬ್ಬರಿ 12 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಶತಕ ಸಿಡಿಸಿದರು. ಅದಾಗ್ಯೂ ರೋಹಿತ್​ಗೆ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಪೃಥ್ವಿಶಂಕರ
|

Updated on: Apr 15, 2024 | 7:51 PM

Share
ಐಪಿಎಲ್ 2024 ರ 29ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್‌ ತಂಡವನ್ನು ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ಲೀಗ್​ನಲ್ಲಿ 4ನೇ ಗೆಲುವು ದಾಖಲಿಸಿದರೆ, ಇತ್ತ ಸೋತ ಮುಂಬೈ ಲೀಗ್​ನಲ್ಲಿ 4ನೇ ಸೋಲನುಭವಿಸಿ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲೇ ಮುಂದುವರೆಯುವಂತಾಯಿತು.

1 / 7
ಇನ್ನು ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಪರ ಗೆಲುವಿಗಾಗಿ ಏಕಾಂಗಿ ಹೋರಾಟ ನಡೆಸಿದ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಬರೋಬ್ಬರಿ 12 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಶತಕ ಸಿಡಿಸಿದರು. ಅದಾಗ್ಯೂ ರೋಹಿತ್​ಗೆ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

2 / 7
ಈ ಮೂಲಕ ಗುರಿ ಬೆನ್ನಟ್ಟುವಾಗ ಅಜೇಯ ಶತಕ ಸಿಡಿಸಿದ ಹೊರತಾಗಿಯೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯದ ಮೂರನೇ ಬ್ಯಾಟರ್ ಎಂಬ ಬೇಡದ ದಾಖಲೆಯನ್ನು ರೋಹಿತ್ ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

3 / 7
ರೋಹಿತ್‌ಗಿಂತ ಮೊದಲು, 2010ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುವಾಗ ಯೂಸುಫ್ ಪಠಾಣ್ ಕೇವಲ 37 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಆದರೆ ಅವರಿಗೆ ತಂಡವನ್ನು ಸೋಲಿನಿಂದ ಪಾರು ಮಾಡಲು ಪಠಾಣ್​ಗೆ ಸಾಧ್ಯವಾಗಿರಲಿಲ್ಲ.

4 / 7
ಇದಾದ ನಂತರ 2021ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ನ ಸಂಜು ಸ್ಯಾಮ್ಸನ್  63 ಎಸೆತಗಳಲ್ಲಿ 119 ರನ್ ಬಾರಿಸಿದ್ದರು. ಆದರೆ ಅವರ ತಂಡ ಗೆಲ್ಲುವಲ್ಲಿ ಯಶಸ್ವಿಯಾಗಿರಲಿಲ್ಲ. ಇದೀಗ ರೋಹಿತ್ ಶರ್ಮಾ ಈ ಪಟ್ಟಿಗೆ ಮೂರನೇಯವರಾಗಿ ಎಂಟ್ರಿಕೊಟ್ಟಿದ್ದಾರೆ.

5 / 7
ಸೋಲಿನ ಹೊರತಾಗಿಯೂ ರೋಹಿತ್ ಅವರ ಈ ಶತಕದ ಇನ್ನಿಂಗ್ಸ್ ಬಹಳ ವಿಶೇಷವಾಗಿತ್ತು. ಏಕೆಂದರೆ ಇದು ರೋಹಿತ್ ಶರ್ಮಾ ಅವರ ಐಪಿಎಲ್ ವೃತ್ತಿಜೀವನದಲ್ಲಿ ಎರಡನೇ ಶತಕವಾಗಿತ್ತು. 2012 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 109 ರನ್‌ಗಳ ಅಜೇಯ ಶತಕದ ಇನ್ನಿಂಗ್ಸ್ ಆಡಿದ್ದರು. ಆ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಂದ್ಯವನ್ನು 27 ರನ್‌ಗಳಿಂದ ಗೆದ್ದುಕೊಂಡಿತ್ತು.

6 / 7
ಪಂದ್ಯದ ವಿಚಾರಕ್ಕೆ ಬಂದರೆ.. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 206 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಮುಂಬೈ 186 ರನ್ ಕಲೆಹಾಕಲಷ್ಟೇ ಶಕ್ತವಾಗಿ 20 ರನ್​ಗಳಿಂದ ಸೋಲೊಪ್ಪಿಕೊಂಡಿತು. ಮುಂಬೈ ಪರ ಅಜೇಯ ಶತಕ ಸಿಡಿಸಿದ ರೋಹಿತ್ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ  ಅಜೇಯ 105 ರನ್ ಬಾರಿಸಿದರು.

7 / 7
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ

ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ