ವಾಸ್ತವವಾಗಿ ಟೀಂ ಇಂಡಿಯಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಸೋತ ಬಳಿಕ ರೋಹಿತ್ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಅದೆಲ್ಲವನ್ನು ಅಲ್ಲಗಳೆದಿದ್ದ ರೋಹಿತ್ ಮತ್ತೆ ತಂಡ ಸೇರಿಕೊಂಡಿದ್ದರು . ಇದೀಗ ಸ್ವತಃ ರೋಹಿತ್ ಶರ್ಮಾ ತಮ್ಮ ನಿವೃತ್ತಿಯ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು, ಎಷ್ಟು ದಿನ ಅಂತರಾಷ್ಟ್ರೀಯ ಕ್ರಿಕೆಟ್ ಆಡಲಿದ್ದೇನೆ ಎಂಬುದನ್ನು ಬಹಿರಂಗಪಡಿಸಿದ್ದಾರೆ.