Rohit Sharma: ‘ನನಗೆ ಅದೊಂದು ಆಸೆ ಇದೆ’; ನಿವೃತ್ತಿ ಬಗ್ಗೆ ಮನದಾಳ ಬಿಚ್ಚಿಟ್ಟ ರೋಹಿತ್ ಶರ್ಮಾ

|

Updated on: Apr 12, 2024 | 10:32 PM

Rohit Sharma: ಸದ್ಯದ ಮಾಹಿತಿ ಪ್ರಕಾರ ರೋಹಿತ್ ಶರ್ಮಾ ಅವರೇ ಟೀಂ ಇಂಡಿಯಾವನ್ನು ಟಿ20 ವಿಶ್ವಕಪ್​ನಲ್ಲಿ ಮುನ್ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದೆಲ್ಲದರ ನಡುವೆ ಹಿಟ್​ಮ್ಯಾನ್ ತಮ್ಮ ನಿವೃತ್ತಿಯ ಬಗ್ಗೆ ಮುಕ್ತವಾಗಿ ಮಾತನಾಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

1 / 8
ಪ್ರಸ್ತುತ ನಡೆಯುತ್ತಿರುವ ಐಪಿಎಲ್ 17ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ಮಾಜಿ ನಾಯಕ ರೋಹಿತ್ ಶರ್ಮಾಗೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅದಾಗ್ಯೂ ಆರಂಭಿರಾಗಿ ತಂಡಕ್ಕೆ ಒದಗಿಸಬೇಕಾದ ಆರಂಭ ನೀಡುವಲ್ಲಿ ಕೊಂಚ ಮಟ್ಟಿಗೆ ರೋಹಿತ್ ಯಶಸ್ವಿಯಾಗಿದ್ದಾರೆ.

2 / 8
ಹೊಡಿಬಡಿ ಆಟಕ್ಕೆ ಹೆಸರುವಾಸಿಯಾಗಿರುವ ರೋಹಿತ್ ಬ್ಯಾಟ್ ಈ ಸೀಸನ್​ನಲ್ಲಿ ಕೊಂಚ ಮೌನಕ್ಕೆ ಶರಣಾಗಿದೆ. ಇದು ಮುಂಬೈ ತಂಡದ ಪಾಲಿಗೆ ಹಾಗೂ ಬಿಸಿಸಿಐ ಪಾಲಿಗೆ ಕೊಂಚ ತಲೆನೋವು ತಂದಿದೆ. ಏಕೆಂದರೆ ಐಪಿಎಲ್ ಮುಗಿದ ಕೂಡಲೇ ಟಿ20 ವಿಶ್ವಕಪ್ ಆರಂಭವಾಗಲಿದೆ.

3 / 8
ಸದ್ಯದ ಮಾಹಿತಿ ಪ್ರಕಾರ ರೋಹಿತ್ ಶರ್ಮಾ ಅವರೇ ಟೀಂ ಇಂಡಿಯಾವನ್ನು ಟಿ20 ವಿಶ್ವಕಪ್​ನಲ್ಲಿ ಮುನ್ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದೆಲ್ಲದರ ನಡುವೆ ಹಿಟ್​ಮ್ಯಾನ್ ತಮ್ಮ ನಿವೃತ್ತಿಯ ಬಗ್ಗೆ ಮುಕ್ತವಾಗಿ ಮಾತನಾಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

4 / 8
ವಾಸ್ತವವಾಗಿ ಟೀಂ ಇಂಡಿಯಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಸೋತ ಬಳಿಕ ರೋಹಿತ್ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಅದೆಲ್ಲವನ್ನು ಅಲ್ಲಗಳೆದಿದ್ದ ರೋಹಿತ್ ಮತ್ತೆ ತಂಡ ಸೇರಿಕೊಂಡಿದ್ದರು . ಇದೀಗ ಸ್ವತಃ ರೋಹಿತ್ ಶರ್ಮಾ ತಮ್ಮ ನಿವೃತ್ತಿಯ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು, ಎಷ್ಟು ದಿನ ಅಂತರಾಷ್ಟ್ರೀಯ ಕ್ರಿಕೆಟ್ ಆಡಲಿದ್ದೇನೆ ಎಂಬುದನ್ನು ಬಹಿರಂಗಪಡಿಸಿದ್ದಾರೆ.

5 / 8
ಪ್ರಸಿದ್ಧ ನಿರೂಪಕ ಗೌರವ್ ಕಪೂರ್ ಅವರ ಬ್ರೇಕ್‌ಫಾಸ್ಟ್ ವಿತ್ ಚಾಂಪಿಯನ್ಸ್ ಶೋನಲ್ಲಿ ನಿವೃತ್ತಿಯ ಬಗ್ಗೆ ಮುಕ್ತವಾಗಿ ಮಾತನಾಡಿದ ರೋಹಿತ್ ಶರ್ಮಾ, ‘ಈ ಎಲ್ಲ ವಿಷಯಗಳ ಬಗ್ಗೆ ನಾನು ಯೋಚಿಸುತ್ತಿಲ್ಲ. ಇದೀಗ ನಾನು ಚೆನ್ನಾಗಿ ಆಡುತ್ತಿದ್ದೇನೆ ಮತ್ತು ಇನ್ನೂ ಕೆಲವು ವರ್ಷಗಳ ಕಾಲ ನಾನು ಆಡುತ್ತೇನೆ.

6 / 8
ನಿಜವಾಗಿಯೂ ನನಗೆ ವಿಶ್ವಕಪ್ ಗೆಲ್ಲಬೇಕು ಎಂಬ ಆಸೆಯಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ 2025 ರಲ್ಲಿ ನಡೆಯಲಿದ್ದು, ಟೀಂ ಇಂಡಿಯಾ ಅದನ್ನು ಗೆಲ್ಲುವಲ್ಲಿ ಯಶಸ್ವಿಯಾಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ. ಈ ಮೂಲಕ ರೋಹಿತ್ 2025ರವರೆಗೆ ಆಡುವುದನ್ನು ಖಚಿತಪಡಿಸಿದ್ದಾರೆ.

7 / 8
ರೋಹಿತ್ ಶರ್ಮಾ ನಾಯಕತ್ವದಲ್ಲಿ, ಟೀಂ ಇಂಡಿಯಾ ಎರಡು ಪ್ರಮುಖ ಐಸಿಸಿ ಟೂರ್ನಿಗಳ ಫೈನಲ್‌ನಲ್ಲಿ ಸೋತಿದೆ. ಭಾರತವು ಮೊದಲು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಸೋಲನ್ನು ಎದುರಿಸಬೇಕಾಯಿತು. ನಂತರ 2023 ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಸೋಲನ್ನು ಎದುರಿಸಬೇಕಾಯಿತು.

8 / 8
ಇದೀಗ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮತ್ತೊಂದು ದೊಡ್ಡ ಐಸಿಸಿ ಟೂರ್ನಮೆಂಟ್ ಟಿ20 ವಿಶ್ವಕಪ್ ಆಡಲು ಟೀಂ ಇಂಡಿಯಾ ಸಜ್ಜಾಗಿದೆ. ರೋಹಿತ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಪಂದ್ಯಾವಳಿಯನ್ನು ಗೆಲ್ಲಲ್ಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.