- Kannada News Photo gallery Cricket photos IPL 2024 RR vs RCB Rajasthan Royals Royal Challengers Bengaluru Head to Head Record records in kannada
RR vs RCB Head To Head: ರಾಜಸ್ಥಾನ್ ವಿರುದ್ಧ ಪಾರುಪತ್ಯ ಮುಂದುವರೆಸುತ್ತಾ ಆರ್‌ಸಿಬಿ..?
RR vs RCB Head To Head: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಮುಖಾಮುಖಿ ವರದಿಯನ್ನು ನಾವು ನೋಡುವುದಾದರೆ, ಇಲ್ಲಿಯವರೆಗೆ ಎರಡು ತಂಡಗಳ ನಡುವೆ ಕಠಿಣ ಪೈಪೋಟಿ ನಡೆದಿರುವುದನ್ನು ನಾವು ಕಾಣಬಹುದಾಗಿದೆ. ಎರಡೂ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ 30 ಬಾರಿ ಮುಖಾಮುಖಿಯಾಗಿವೆ.
Updated on: Apr 05, 2024 | 6:35 PM

17ನೇ ಆವೃತ್ತಿಯ ಐಪಿಎಲ್ನ 19 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಕ್ರವಾರ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇಲ್ಲಿಯವರೆಗಿನ ಲೀಗ್‌ನಲ್ಲಿ ಉಭಯ ತಂಡಗಳ ಪ್ರದರ್ಶನವನ್ನು ಗಮನಿಸಿದರೆ, ರಾಜಸ್ಥಾನ್ ರಾಯಲ್ಸ್ ಎಲ್ಲಾ 3 ಪಂದ್ಯಗಳನ್ನು ಗೆದ್ದು ತಂಡವು ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಆರ್‌ಸಿಬಿ 4 ಪಂದ್ಯಗಳಲ್ಲಿ 1 ರಲ್ಲಿ ಮಾತ್ರ ಗೆದ್ದಿದ್ದು, 3 ರಲ್ಲಿ ಸೋಲು ಕಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಮುಖಾಮುಖಿ ವರದಿಯನ್ನು ನಾವು ನೋಡುವುದಾದರೆ, ಇಲ್ಲಿಯವರೆಗೆ ಎರಡು ತಂಡಗಳ ನಡುವೆ ಕಠಿಣ ಪೈಪೋಟಿ ನಡೆದಿರುವುದನ್ನು ನಾವು ಕಾಣಬಹುದಾಗಿದೆ. ಎರಡೂ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ 30 ಬಾರಿ ಮುಖಾಮುಖಿಯಾಗಿವೆ.

ಈ 30 ಮುಖಾಮುಖಿಯಲ್ಲಿ ಆರ್‌ಸಿಬಿ 15 ಪಂದ್ಯಗಳನ್ನು ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್ 12 ಪಂದ್ಯಗಳನ್ನು ಗೆದ್ದಿದೆ. 3 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಇದನ್ನು ಗಮನಿಸಿದರೆ, ಉಭಯರ ಮುಖಾಮುಖಿಯಲ್ಲಿ ಆರ್‌ಸಿಬಿ ಮೇಲುಗೈ ಸಾಧಿಸಿರುವುದನ್ನು ನಾವು ಕಾಣಬಹುದಾಗಿದೆ. ಹೀಗಾಗಿ ನಾಳಿನ ಪಂದ್ಯವನ್ನು ಗೆದ್ದು, ಆರ್‌ಸಿಬಿ ತನ್ನ ಲಯ ಕಂಡುಕೊಳ್ಳುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಇನ್ನು ಉಭಯ ತಂಡಗಳ ಕಳೆದ 5 ಮುಖಾಮುಖಿಯ ಬಗ್ಗೆ ಮಾತನಾಡುವುದಾದರೆ, ಇದರಲ್ಲೂ ಆರ್‌ಸಿಬಿ ಮೇಲುಗೈ ಸಾಧಿಸಿದೆ. ಇದರಲ್ಲಿ ಆರ್‌ಸಿಬಿ 3 ಪಂದ್ಯಗಳನ್ನು ಗೆದ್ದಿದ್ದರೆ, ರಾಜಸ್ಥಾನ 2 ಪಂದ್ಯಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ರಾಜಸ್ಥಾನ ಮತ್ತು ಆರ್‌ಸಿಬಿ ನಡುವಿನ ಹಣಾಹಣಿಯಲ್ಲಿ, ರಾಜಸ್ಥಾನ ಮೊದಲು ಬ್ಯಾಟಿಂಗ್ ಮಾಡುವಾಗ 5 ಮತ್ತು ಗುರಿಯನ್ನು ಬೆನ್ನಟ್ಟಿದ 7 ಪಂದ್ಯಗಳನ್ನು ಗೆದ್ದಿದೆ. ಇನ್ನೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲು ಬ್ಯಾಟಿಂಗ್ ಮಾಡುವಾಗ 5 ಪಂದ್ಯಗಳನ್ನು ಮತ್ತು ಗುರಿಯನ್ನು ಬೆನ್ನಟ್ಟುವಾಗ 10 ಪಂದ್ಯಗಳನ್ನು ಗೆದ್ದಿದೆ.

ಜೈಪುರ ಮೈದಾನದಲ್ಲಿ ಉಭಯ ತಂಡಗಳು 8 ಬಾರಿ ಮುಖಾಮುಖಿಯಾಗಿವೆ. ಈ ಮುಖಾಮುಖಿಯಲ್ಲಿ ಎರಡೂ ತಂಡಗಳು ತಲಾ 4 ಪಂದ್ಯಗಳನ್ನು ಗೆದ್ದಿವೆ. ರಾಜಸ್ಥಾನ ತನ್ನ ತವರು ಮೈದಾನ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ 54 ಪಂದ್ಯಗಳನ್ನು ಆಡಿದ್ದು, 35 ಪಂದ್ಯಗಳನ್ನು ಗೆದ್ದಿದ್ದರೆ, 19ಪಂದ್ಯಗಳಲ್ಲಿ ಸೋಲು ಕಂಡಿದೆ.




