AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗುಜರಾತ್ ಟೈಟಾನ್ಸ್‌ ತಂಡಕ್ಕೆ ಸರ್ಫರಾಜ್ ಖಾನ್?

IPL 2024: ಟೀಂ ಇಂಡಿಯಾ ಪರ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಸಂಚಲನ ಮೂಡಿಸಿದ್ದ ಸರ್ಫರಾಜ್ ಖಾನ್ ಇದೀಗ 17ನೇ ಆವೃತ್ತಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಸರ್ಫರಾಜ್​ರನ್ನು ಯಾವ ತಂಡವೂ ಖರೀದಿಸಿರಲಿಲ್ಲ. ಆದರೀಗ ಅವರು ಗುಜರಾತ್ ಪರ ಆಡುವ ಸಾಧ್ಯತೆಗಳಿವೆ.

ಪೃಥ್ವಿಶಂಕರ
|

Updated on: Mar 17, 2024 | 8:04 PM

Share
 ಟೀಂ ಇಂಡಿಯಾ ಪರ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಸಂಚಲನ ಮೂಡಿಸಿದ್ದ ಸರ್ಫರಾಜ್ ಖಾನ್ ಇದೀಗ 17ನೇ ಆವೃತ್ತಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಐಪಿಎಲ್ ಮಿನಿ ಹರಾಜಿನಲ್ಲಿ ಸರ್ಫರಾಜ್​ರನ್ನು ಯಾವ ತಂಡವೂ ಖರೀದಿಸಿರಲಿಲ್ಲ. ಆದರೀಗ ಅವರು ಗುಜರಾತ್ ಪರ ಆಡುವ ಸಾಧ್ಯತೆಗಳಿವೆ.

1 / 6
2023ರ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಸರ್ಫರಾಜ್ ಅವರನ್ನು 2024 ರ ಹರಾಜಿಗೂ ಮುನ್ನ ಡೆಲ್ಲಿ ಫ್ರಾಂಚೈಸಿ ತಂಡದಿಂದ ಬಿಡುಗಡೆ ಮಾಡಿತ್ತು. ಆದರೆ ಇದೀಗ ಸರ್ಫರಾಜ್ ಖಾನ್ ಗುಜರಾತ್ ಟೈಟಾನ್ಸ್ ತಂಡಕ್ಕೆ ಬದಲಿ ಆಟಗಾರನಾಗಿ ಸೇರಿಕೊಳ್ಳಲಿದ್ದಾರೆ.

2 / 6
ಮಿನಿ ಹರಾಜಿನಲ್ಲಿ 3.6 ಕೋಟಿ ರೂ ನೀಡಿ ಖರೀದಿಸಿದ್ದ ಭಾರತದ ಯುವ ವಿಕೆಟ್ ಕೀಪರ್ ಬ್ಯಾಟರ್ ರಾಬಿನ್ ಮಿಂಜ್ ಕಳೆದ ಕೆಲವು ದಿನಗಳ ಹಿಂದೆ ಬೈಕ್ ಅಪಘಾತಕ್ಕೊಳಗಾಗಿದ್ದರು. ಅಪಘಾತದಲ್ಲಿ ಅವರಿಗೆ ಹೆಚ್ಚಿನ ಗಾಯಗಳಾಗಿಲ್ಲ ಎಂದು ವರದಿಯಾಗಿತ್ತು.

3 / 6
ಹೀಗಾಗಿ ರಾಬಿನ್ ಐಪಿಎಲ್ ಆರಂಭಕ್ಕೂ ಮುನ್ನ ಗುಜರಾತ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ರಾಬಿನ್ ಲಭ್ಯತೆಯ ಬಗ್ಗೆ ನಿನ್ನೆ ಮಾಹಿತಿ ನೀಡಿದ್ದ ತಂಡದ ಮುಖ್ಯ ಕೋಚ್ ಆಶಿಸ್ ನೆಹ್ರಾ, ರಾಬಿನ್ ಮಿಂಜ್ ಇಡೀ ಲೀಗ್​ನಿಂದ ಹೊರಗುಳಿದಿದ್ದಾರೆ ಎಂದಿದ್ದರು.

4 / 6
ಇದೀಗ ರಾಬಿನ್ ಮಿಂಜ್ ಅಲಭ್ಯತೆಯನ್ನು ಸರಿದೂಗಿಸಲು ನೋಡುತ್ತಿರುವ ಗುಜರಾತ್ ಫ್ರಾಂಚೈಸಿ, ಅವರ ಬದಲಿಗೆ ಸರ್ಫರಾಜ್ ಖಾನ್​ರನ್ನು ಕಣಕ್ಕಿಳಿಸಲು ಚಿಂತಿಸುತ್ತಿದೆ ಎಂದು ವರದಿಯಾಗಿದೆ. ಮತ್ತೊಂದೆಡೆ, ಸರ್ಫರಾಜ್ ಖಾನ್ ಕೂಡ ಐಪಿಎಲ್ 2024 ರ ಕರೆಗಾಗಿ ಕಾಯುತ್ತಿದ್ದಾರೆ. ಹರಾಜಿನಲ್ಲಿ ಮಾರಾಟವಾಗದೆ ಉಳಿದ ನಂತರವೂ, ಸರ್ಫರಾಜ್ ಖಾನ್ ಐಪಿಎಲ್‌ನಲ್ಲಿ ಆಡುವ ಭರವಸೆಯನ್ನು ಬಿಟ್ಟಿಲ್ಲ.

5 / 6
ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸರ್ಫರಾಜ್ ಖಾನ್ ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡುವ ಅವಕಾಶ ಪಡೆದಿದ್ದರು. ಈ ಸರಣಿಯಲ್ಲಿ ಸರ್ಫರಾಜ್ ಅವರ ಪ್ರದರ್ಶನ ಅತ್ಯುತ್ತಮವಾಗಿತ್ತು. ತಮ್ಮ ಚೊಚ್ಚಲ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಸರ್ಫರಾಜ್ ಅರ್ಧಶತಕ ಬಾರಿಸಿದ್ದರು.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ

ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ

ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ

ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ

ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು

ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್