Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸರ್ಫರಾಝ್ ಖಾನ್ ಐಪಿಎಲ್​ಗೆ ಎಂಟ್ರಿ?

Sarfaraz Khan: IPL ​ನಲ್ಲಿ ಆರ್​ಸಿಬಿ, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರ ಒಟ್ಟು 50 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸರ್ಫರಾಝ್ ಖಾನ್ ಒಂದು ಅರ್ಧಶತಕದೊಂದಿಗೆ 585 ರನ್ ಮಾತ್ರ ಕಲೆಹಾಕಿದ್ದಾರೆ. ಇದಾಗ್ಯೂ ಈ ಬಾರಿಯ ಹರಾಜಿನಲ್ಲಿ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸರ್ಫರಾಝ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Feb 20, 2024 | 3:30 PM

ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಸರ್ಫರಾಝ್​ ಖಾನ್​ಗೆ (Sarfaraz Khan) ಅದೃಷ್ಟ ಖುಲಾಯಿಸುವ ಲಕ್ಷಣಗಳು ಕಾಣಿಸುತ್ತಿದೆ. ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಬಿಕರಿಯಾಗದೇ ಉಳಿದಿದ್ದ ಯುವ ಆಟಗಾರನ ಖರೀದಿಗೆ ಇದೀಗ ಪ್ರಮುಖ ಫ್ರಾಂಚೈಸಿಯೊಂದು ಮುಂದಾಗಿದೆ ಎಂದು ವರದಿಯಾಗಿದೆ.

1 / 7
ಹೌದು, ಸರ್ಫರಾಝ್ ಖಾನ್ ಅವರ ಖರೀದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಆಸಕ್ತಿವಹಿಸಿದೆ. ಕೆಕೆಆರ್​ ತಂಡದ ಮೆಂಟರ್ ಆಗಿರುವ ಗೌತಮ್ ಗಂಭೀರ್ ಯುವ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡುವಂತೆ ಸೂಚಿಸಿದ್ದಾರೆ ಎಂದು ಪಶ್ಚಿಮ ಬಂಗಾಳದ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ.

2 / 7
ಪ್ರಸ್ತುತ ಕೆಕೆಆರ್ ತಂಡದಲ್ಲಿ ಒಟ್ಟು 23 ಆಟಗಾರರಿದ್ದಾರೆ. ಐಪಿಎಲ್ ನಿಯಮದ ಪ್ರಕಾರ ಒಟ್ಟು 25 ಆಟಗಾರರನ್ನು ಖರೀದಿಸಬಹುದು. ಇತ್ತ ಹರಾಜು ಮೊತ್ತದಲ್ಲಿ 1.35 ಕೋಟಿ ರೂ. ಉಳಿಸಿಕೊಂಡಿರುವ ಕೆಕೆಆರ್ ತಂಡಕ್ಕೆ ಇಬ್ಬರು ಭಾರತೀಯ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ.

3 / 7
ಇದೀಗ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಸರ್ಫರಾಝ್ ಖಾನ್ ಅವರನ್ನು ಆಯ್ಕೆ ಮಾಡುವಂತೆ ಗೌತಮ್ ಗಂಭೀರ್ ಸೂಚಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಕೆಕೆಆರ್ ತಂಡದಲ್ಲಿ ಏಕೈಕ ಭಾರತೀಯ ವಿಕೆಟ್ ಕೀಪರ್ ಇರುವುದು.

4 / 7
ಅಂದರೆ ತಂಡದಲ್ಲಿ ಭಾರತೀಯ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕೆಎಸ್ ಭರತ್ ಮಾತ್ರ ಇದ್ದಾರೆ. ಇತ್ತ ಸರ್ಫರಾಝ್ ಖಾನ್ ಕೂಡ ವಿಕೆಟ್ ಕೀಪರ್ ಬ್ಯಾಟರ್. ಇದೀಗ ಹೆಚ್ಚುವರಿ ವಿಕೆಟ್ ಕೀಪರ್ ಆಯ್ಕೆಗೆ ಮುಂದಾಗಿರುವ ಕೆಕೆಆರ್ ಫ್ರಾಂಚೈಸಿ ಸರ್ಫರಾಝ್ ಖರೀದಿಗೆ ಹೆಚ್ಚಿನ ಆಸಕ್ತಿವ ಹೊಂದಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

5 / 7
ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಸರ್ಫರಾಝ್ ಖಾನ್ 4 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ ಕೇವಲ 53 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿರುವ ಸರ್ಫರಾಝ್ 138 ಎಸೆತಗಳಲ್ಲಿ ಒಟ್ಟು 130 ರನ್ ಬಾರಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

6 / 7
ಅದರಂತೆ ಇದೀಗ ಕೆಕೆಆರ್ ಫ್ರಾಂಚೈಸಿಯು ಸರ್ಫರಾಝ್ ಖಾನ್ ಅವರ ಖರೀದಿಗೆ ಆಸಕ್ತಿ ಹೊಂದಿದೆ ಎಂದು ವರದಿಯಾಗಿದೆ. ಹೀಗಾಗಿ ಐಪಿಎಲ್ ಆರಂಭಕ್ಕೂ ಮುನ್ನ ಯುವ ದಾಂಡಿಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪಾಲಾದರೂ ಅಚ್ಚರಿಪಡಬೇಕಿಲ್ಲ.

7 / 7
Follow us
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್

ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ

ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ

ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ

ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ

ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ

ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು

ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್

ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್

VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ