IPL 2024: CSK vs RCB: ಮೊದಲ ಪಂದ್ಯದಲ್ಲೇ ಮದಗಜಗಳ ಕಾಳಗ?
IPL 2024 Schedule: ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಪಂದ್ಯವು ಮಾರ್ಚ್ 22 ರಂದು ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ ಎಂದು ವರದಿಯಾಗಿದೆ. ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಂದು ಬಿಡುಗಡೆಯಾಗಲಿದ್ದು, ಇದಕ್ಕೂ ಮುನ್ನ CSK vs RCB ತಂಡಗಳು ಮುಖಾಮುಖಿಯಾಗುವ ಸುದ್ದಿ ಹೊರಬಿದ್ದಿದೆ.
Updated on: Feb 22, 2024 | 10:39 AM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 (IPL 2024) ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK ತಂಡ ಕಣಕ್ಕಿಳಿಯುವುದು ಖಚಿತ. ಆದರೆ ಎದುರಾಳಿ ಯಾರು ಎಂಬುದೇ ಈಗ ಪ್ರಶ್ನೆ.

ಈ ಹಿಂದೆ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ ಎನ್ನಲಾಗಿತ್ತು. ಆದರೀಗ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲು ಗುಜರಾತ್ ಟೈಟಾನ್ಸ್ ತಂಡ ಹಿಂದೇಟು ಹಾಕಿದೆ ಎನ್ನಲಾಗುತ್ತಿದೆ.

ಹೀಗಾಗಿ ಸೀಸನ್-17 ರ ಉದ್ಘಾಟನಾ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸೆಣಸಲಿದೆ ಎಂದು IANS ವರದಿ ಮಾಡಿದೆ.

ಇತ್ತ ಮೊದಲ ಪಂದ್ಯದಲ್ಲಿ CSK vs RCB ಮುಖಾಮುಖಿಯಾದರೆ, ಆರಂಭದಲ್ಲೇ ಐಪಿಎಲ್ ಕ್ರೇಜ್ ತಾರಕ್ಕೇರಲಿದೆ. ಹೀಗಾಗಿಯೇ ಮೊದಲ ಪಂದ್ಯದಲ್ಲೇ ಮದಗಜಗಳನ್ನು ಕಣಕ್ಕಿಳಿಸಲು ಐಪಿಎಲ್ ಆಡಳಿತ ಮಂಡಳಿ ಕೂಡ ಪ್ಲ್ಯಾನ್ ರೂಪಿಸಿದೆ. ಅದರಂತೆ ಈ ಬಾರಿಯ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಹಾಗೂ ಸಿಎಸ್ಕೆ ತಂಡಗಳು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

CSK ಮತ್ತು RCB ತಂಡಗಳು ಇದುವರೆಗೆ 30 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ 20 ಬಾರಿ ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ಸಲ ಜಯ ಸಾಧಿಸಿದೆ. ಇಲ್ಲಿ ಸಿಎಸ್ಕೆ ತಂಡ ಮೇಲುಗೈ ಹೊಂದಿದ್ದರೂ ಆರ್ಸಿಬಿ ತಂಡ ಹಲವು ಬಾರಿ ವಿರೋಚಿತವಾಗಿ ಸೋಲೊಪ್ಪಿಕೊಂಡಿರುವುದು ಇಲ್ಲಿ ಉಲ್ಲೇಖಾರ್ಹ.

ಇನ್ನು ಕಳೆದ ಸೀಸನ್ನಲ್ಲಿ ಆಡಲಾದ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ಆರ್ಸಿಬಿ ಕೇವಲ 8 ರನ್ಗಳಿಂದ ಸೋಲೊಪ್ಪಿಕೊಂಡಿತ್ತು. ಹೀಗಾಗಿ ಈ ಬಾರಿ ಕೂಡ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.
