IPL 2024: ಸೂರ್ಯನ ರನ್ ಶಿಕಾರಿ; ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು..!

Updated on: Apr 12, 2024 | 8:25 PM

IPL 2024, Suryakumar yadav: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 7000 ರನ್ ಗಳಿಸಿದ ನಾಲ್ಕನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 6
ಇಂಜುರಿಯಿಂದಾಗಿ ಐಪಿಎಲ್ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದ ಮುಂಬೈ ಇಂಡಿಯನ್ಸ್‌ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದೊಂದಿಗೆ 17ನೇ ಆವೃತ್ತಿಯ ಐಪಿಎಲ್​ಗೆ ಎಂಟ್ರಿಕೊಟ್ಟಿದ್ದರು. ಆದರೆ ಆ ಪಂದ್ಯದಲ್ಲಿ ಸೂರ್ಯನಿಗೆ ಖಾತೆಯನ್ನೂ ತೆರೆಯಲು ಸಾಧ್ಯವಾಗಿರಲಿಲ್ಲ.

ಇಂಜುರಿಯಿಂದಾಗಿ ಐಪಿಎಲ್ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದ ಮುಂಬೈ ಇಂಡಿಯನ್ಸ್‌ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದೊಂದಿಗೆ 17ನೇ ಆವೃತ್ತಿಯ ಐಪಿಎಲ್​ಗೆ ಎಂಟ್ರಿಕೊಟ್ಟಿದ್ದರು. ಆದರೆ ಆ ಪಂದ್ಯದಲ್ಲಿ ಸೂರ್ಯನಿಗೆ ಖಾತೆಯನ್ನೂ ತೆರೆಯಲು ಸಾಧ್ಯವಾಗಿರಲಿಲ್ಲ.

2 / 6

ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 7000 ರನ್ ಗಳಿಸಿದ ನಾಲ್ಕನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 6

ಟಿ20ಮಾದರಿಯಲ್ಲಿ ಇದುವರೆಗೆ 249ನೇ ಇನ್ನಿಂಗ್ಸ್‌ ಆಡಿರುವ ಸೂರ್ಯಕುಮಾರ್ ಯಾದವ್ 7000 ರನ್​ಗಳ ಗಡಿ ದಾಟಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ಎಂದಿನಂತೆ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

4 / 6

ಕೆಎಲ್ ರಾಹುಲ್ ತಮ್ಮ 197ನೇ ಇನ್ನಿಂಗ್ಸ್‌ನಲ್ಲಿ 7000 ರನ್‌ಗಳನ್ನು ಪೂರೈಸುವ ಮೂಲಕ ವೇಗವಾಗಿ 7000 ರನ್ ಪೂರೈಸಿದ ಭಾರತದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅಲ್ಲದೆ ವಿಶ್ವ ಕ್ರಿಕೆಟ್​ನಲ್ಲಿ ಬಾಬರ್ ಅಜಮ್ (187) ಮತ್ತು ಕ್ರಿಸ್ ಗೇಲ್ (192) ನಂತರ ಈ ಸಾಧನೆ ಮಾಡಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6

ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆರ್‌ಸಿಬಿಯ ಸ್ಫೋಟಕ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 222 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ಸಾಧಿಸಿದ್ದರು. ಮೂರನೇ ಸ್ಥಾನದಲ್ಲಿರುವ ಶಿಖರ್ ಧವನ್ 246 ಇನ್ನಿಂಗ್ಸ್‌ಗಳಲ್ಲಿ ಈ ದಾಖಲೆ ಮಾಡಿದ್ದಾರೆ.

6 / 6

ಇನ್ನು ಪಂದ್ಯದಲ್ಲಿ ಸೂರ್ಯನ ಆಟದ ಬಗ್ಗೆ ಹೇಳುವುದಾದರೆ.. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.ಅವರ ಇನ್ನಿಂಗ್ಸ್​ನಲ್ಲಿ ಐದು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳು ಸೇರಿದ್ದವು. ಅವರ ಇನ್ನಿಂಗ್ಸ್‌ನ ಆಧಾರದ ಮೇಲೆ ಮುಂಬೈ 27 ಎಸೆತಗಳು ಬಾಕಿ ಇರುವಂತೆಯೇ 197 ರನ್‌ಗಳ ಗುರಿಯನ್ನು ಸುಲಭವಾಗಿ ಸಾಧಿಸಿತು.

Loading...
Unable to load recommendations.
Follow Us