IPL 2024: ಮುಂಬೈ ಇಂಡಿಯನ್ಸ್​ಗೆ ಬಿಗ್ ಶಾಕ್: ಆರಂಭಿಕ ಪಂದ್ಯಗಳಿಗೆ ಸ್ಟಾರ್ ಆಟಗಾರ ಅಲಭ್ಯ?

| Updated By: ಝಾಹಿರ್ ಯೂಸುಫ್

Updated on: Mar 12, 2024 | 1:53 PM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ 2024 (ಐಪಿಎಲ್) ಮಾರ್ಚ್ 22 ರಿಂದ ಶುರುವಾಗಲಿದೆ. ಈ ಟೂರ್ನಿಯ 5ನೇ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಐಪಿಎಲ್ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಹಾಗೆಯೇ ತನ್ನ 2ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯಗಳಿಗೆ ಪ್ರಮುಖ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಹೊಸ ಚಿಂತೆ ಶುರುವಾಗಿದೆ. ತಂಡದ ಪ್ರಮುಖ ಆಟಗಾರ ಸೂರ್ಯಕುಮಾರ್ ಯಾದವ್ (Suryakumar Yadav) ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

2 / 6
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿ ವೇಳೆ ಸೂರ್ಯಕುಮಾರ್ ಯಾದವ್ ಗಾಯಗೊಂಡಿದ್ದರು. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್ ಟೆಸ್ಟ್​ಗೆ ಒಳಗಾಗಿರುವ ಸೂರ್ಯಕುಮಾರ್ ಯಾದವ್ ಸಂಪೂರ್ಣ ಫಿಟ್ ಆಗಿಲ್ಲ ಎಂದು ವರದಿಯಾಗಿದೆ.

3 / 6
ಹೀಗಾಗಿ ಮುಂಬೈ ಇಂಡಿಯನ್ಸ್ ತಂಡದ ಮೊದಲ ಎರಡು ಪಂದ್ಯಗಳಿಂದ ಸೂರ್ಯಕುಮಾರ್ ಯಾದವ್ ಹೊರಗುಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ. ಇದಾಗ್ಯೂ ಮೂರನೇ ಪಂದ್ಯಕ್ಕೂ ಮುನ್ನ ಅವರು ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

4 / 6
ಸೂರ್ಯಕುಮಾರ್ ಯಾದವ್ ಸದ್ಯ ಫಿಟ್​ನೆಸ್​ ಕಸರತ್ತಿನಲ್ಲಿ ತೊಡಗಿಸಿಕೊಂಡಿದ್ದಾರೆ. ಖಂಡಿತವಾಗಿಯೂ ಅವರು ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಮುಂಬೈ ಇಂಡಿಯನ್ಸ್ ತಂಡದ ಮೊದಲೆರಡು ಪಂದ್ಯಕ್ಕೂ ಮುನ್ನ NCA ಅವರಿಗೆ ಅನುಮತಿ ನೀಡುವುದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಾಗಿ ಮೊದಲೆರಡು ಪಂದ್ಯಗಳಿಂದ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

5 / 6
ಅದರಂತೆ ಸೂರ್ಯಕುಮಾರ್ ಯಾದವ್ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದು, ಇದು ಮುಂಬೈ ಇಂಡಿಯನ್ಸ್ ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡುವ ಸಾಧ್ಯತೆ ಹೆಚ್ಚಿ. ಈ ಹಿನ್ನಡೆಯನ್ನು ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ತಂಡ ಹೇಗೆ ಸರಿದೂಗಿಸಲಿದೆ ಎಂಬುದನ್ನು ಕಾದು ನೋಡೇಬೇಕಷ್ಟೇ.

6 / 6
ಮುಂಬೈ ಇಂಡಿಯನ್ಸ್ ತಂಡ​: ಹಾರ್ದಿಕ್ ಪಾಂಡ್ಯ (ನಾಯಕ) ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್. ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್ ,ರೊಮಾರಿಯೋ ಶೆಫರ್ಡ್, ರೊಮಾರಿಯೋ ಶೆಫರ್ಡ್. ಜೆರಾಲ್ಡ್ ಕೋಟ್ಝಿ , ದಿಲ್ಶನ್ ಮಧುಶಂಕ , ಶ್ರೇಯಸ್ ಗೋಪಾಲ್ , ನುವಾನ್ ತುಷಾರ , ನಮನ್ ಧೀರ್ , ಅನ್ಶುಲ್ ಕಾಂಬೋಜ್ , ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.

Published On - 1:52 pm, Tue, 12 March 24