AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 3 ತಂಡಗಳಿಗೆ ಹೊಸ ನಾಯಕರುಗಳು

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಈ ಬಾರಿಯ ಐಪಿಎಲ್​ನಲ್ಲಿ ಮೂರು ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ. ಹಾಗೆಯೇ ಕಳೆದ ಬಾರಿ ನಾಯಕರುಗಳಾಗಿ ಕಾಣಿಸಿಕೊಂಡಿದ್ದ ರೋಹಿತ್ ಶರ್ಮಾ ಹಾಗೂ ಐಡೆನ್ ಮಾರ್ಕ್ರಾಮ್ ಈ ಬಾರಿ ಕೇವಲ ಬ್ಯಾಟರ್​ಗಳಾಗಿ ಕಣಕ್ಕಿಳಿಯಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 04, 2024 | 1:21 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಶುರುವಾಗಲು ಕೇವಲ ದಿನಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಎಲ್ಲಾ ತಂಡಗಳು ಸಿದ್ಧತೆಗಳು ಶುರು ಮಾಡಿಕೊಂಡಿದ್ದು, ಅದರ ಮೊದಲ ಭಾಗವಾಗಿ ಇದೀಗ ನಾಯಕರುಗಳನ್ನು ಫೈನಲ್ ಮಾಡಲಾಗಿದೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ 3 ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ.

1 / 7
ಕಳೆದ ಬಾರಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ಮುಂಬೈ ಇಂಡಿಯನ್ಸ್ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ಟ್ರೇಡ್ ಮಾಡಿಕೊಂಡಿದೆ.

2 / 7
ಈ ಟ್ರೇಡ್ ಪ್ರಕ್ರಿಯೆಯ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯರನ್ನು ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಆಗಿ ಘೋಷಿಸಿತು. ಅಂದರೆ ಕಳೆದ 10 ವರ್ಷಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ. ಅದರಂತೆ ಈ ಬಾರಿ ಮುಂಬೈ ಇಂಡಿಯನ್ಸ್ ಹಾರ್ದಿಕ್ ಪಾಂಡ್ಯ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿದೆ.

3 / 7
ಇತ್ತ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್​ಗೆ ಹೋದ ಬೆನ್ನಲ್ಲೇ, ಗುಜರಾತ್ ಟೈಟಾನ್ಸ್ ತಂಡವು ಶುಭ್​ಮನ್ ಗಿಲ್ ಅವರನ್ನು ಹೊಸ ನಾಯಕನನ್ನಾಗಿ ಘೋಷಿಸಿದೆ. ಅದರಂತೆ ಗಿಲ್ ಸಾರಥ್ಯದಲ್ಲಿ ಈ ಬಾರಿ ಗುಜರಾತ್ ಟೈಟಾನ್ಸ್ ತಂಡವು ಕಣಕ್ಕಿಳಿಯಲಿದೆ.

4 / 7
ಇನ್ನು ಸನ್​ರೈಸರ್ಸ್ ಹೈದರಾಬಾದ್ ತಂಡ ಕೂಡ ಐಪಿಎಲ್ ಸೀಸನ್​-17 ಗಾಗಿ ಹೊಸ ನಾಯಕನನ್ನು ಘೋಷಿಸಿದೆ. ಅದರಂತೆ ಈ ಬಾರಿ ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಸನ್​ರೈಸರ್ಸ್ ಪಡೆ ಕಣಕ್ಕಿಳಿಯಲಿದೆ.

5 / 7
ಐಪಿಎಲ್​ 2023 ರಲ್ಲಿ ಮುನ್ನಡೆಸಿದ್ದ ಐಡೆನ್ ಮಾರ್ಕ್ರಾಮ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದ್ದು, ಅವರ ಬದಲಿಗೆ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್​ಗೆ ಕಪ್ತಾನಗಿರಿ ನೀಡಲಾಗಿದೆ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಈ ಬಾರಿ ಕಮಿನ್ಸ್ ಸಾರಥ್ಯದಲ್ಲಿ ಮೈದಾನಕ್ಕಿಳಿಯಲಿದೆ.

6 / 7
ಇಂಡಿಯನ್​ ಪ್ರೀಮಿಯರ್ ಲೀಗ್​ನ 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇದರೊಂದಿಗೆ ಐಪಿಎಲ್ ಸೀಸನ್-17 ಗೆ ಚಾಲನೆ ಸಿಗಲಿದೆ.

7 / 7
Follow us
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು

ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ

ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು

ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ

VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್

ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ

Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?

horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ