AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಅಭಿಷೇಕ್- ಹೆಡ್ ಜೋಡಿ..!

IPL 2024: ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಮೊದಲ 6 ಓವರ್​ಗಳ ಅಂತ್ಯಕ್ಕೆ ಅಂದರೆ ಪವರ್ ಪ್ಲೇ ಅಂತ್ಯಕ್ಕೆ ಬರೋಬ್ಬರಿ 125 ರನ್ ಕಲೆಹಾಕಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಮೊದಲ 6 ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ತಂಡ ಎಂಬ ದಾಖಲೆಯನ್ನು ಸೃಷ್ಟಿಸಿದರು.

ಪೃಥ್ವಿಶಂಕರ
|

Updated on: Apr 20, 2024 | 10:38 PM

Share
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 266 ರನ್ ಕಲೆಹಾಕಿತು. ಅಲ್ಲದೆ ಪವರ್ ಪ್ಲೇನಲ್ಲಿ ಬರೋಬ್ಬರಿ 125 ರನ್ ಬಾರಿಸಿ ವಿಶ್ವ ದಾಖಲೆ ಕೂಡ ನಿರ್ಮಿಸಿತು.

1 / 6
ಹೈದರಾಬಾದ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಎಂದಿನಂತೆ ಸ್ಫೋಟಕ ಬ್ಯಾಟಿಂಗ್ ನಡೆಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ಇಬ್ಬರು ಮೊದಲ ಓವರ್​ನಿಂದಲೇ ಬೌಂಡರಿ, ಸಿಕ್ಸರ್​ಗಳ ಮಳೆಗರೆದು, ತಂಡವನ್ನು ಮೊದಲ 5 ಓವರ್​ಗಳಲ್ಲಿ ಶತಕದ ಗಡಿ ದಾಟಿಸಿದರು.

2 / 6
ಅಲ್ಲದೆ ಈ ಇಬ್ಬರು ಮೊದಲ 6 ಓವರ್​ಗಳ ಅಂತ್ಯಕ್ಕೆ ಅಂದರೆ ಪವರ್ ಪ್ಲೇ ಅಂತ್ಯಕ್ಕೆ ಬರೋಬ್ಬರಿ 125 ರನ್ ಕಲೆಹಾಕಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಮೊದಲ 6 ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ತಂಡ ಎಂಬ ದಾಖಲೆಯನ್ನು ಸೃಷ್ಟಿಸಿದರು.

3 / 6
ಇದಕ್ಕೂ ಮುನ್ನ ಟಿ20 ಬ್ಲಾಸ್ಟ್​ನಲ್ಲಿ ಡರ್ಹಾಮ್ ತಂಡದ ವಿರುದ್ಧ 2017 ರಲ್ಲಿ ನಾಟಿಂಗ್ಹ್ಯಾಮ್ಶೈರ್ ತಂಡ ಮೊದಲ 6 ಓವರ್​ಗಳಲ್ಲಿ 106 ರನ್ ಕಲೆಹಾಕಿ ಈ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿತ್ತು. ಇದೀಗ ಆ ದಾಖಲೆ ಸನ್ ಹೈದರಾಬಾದ್ ತಂಡದ ಪಾಲಾಗಿದೆ.

4 / 6
ಈ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಫಾರ್ಮ್​ನಲ್ಲಿದೆ. ಈಗಾಗಲೇ ಈ ತಂಡ ಮೂರು ಪಂದ್ಯಗಳಲ್ಲಿ 250+ ರನ್ ಕಲೆಹಾಕಿದೆ. ಮೊದಲು ಮುಂಬೈ ಇಂಡಿಯನ್ಸ್ ವಿರುದ್ಧ 277 ರನ್ ಬಾರಿಸಿದ್ದರೆ, ಆ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 287 ರನ್ ಬಾರಿಸಿತ್ತು. ಇದೀಗ ಡೆಲ್ಲಿ ವಿರುದ್ಧ 266 ರನ್ ಕಲೆಹಾಕಿದೆ.

5 / 6
ಈ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಮೊದಲ ವಿಕೆಟ್‌ಗೆ ಕೇವಲ 38 ಎಸೆತಗಳಲ್ಲಿ 131 ರನ್ ಜೊತೆಯಾಟ ನೀಡಿದರು. ಅಂತಿಮವಾಗಿ ಹೆಡ್ ಕೇವಲ 32 ಎಸೆತಗಳಲ್ಲಿ 11 ಬೌಂಡರಿ ಹಾಗೂ 6 ಸಿಕ್ಸರ್‌ಗಳ ಸಹಿತ 89 ರನ್‌ಗಳ ಇನಿಂಗ್ಸ್‌ ಆಡಿದರೆ ಅಭಿಷೇಕ್ 12 ಎಸೆತಗಳಲ್ಲಿ 49 ರನ್​ಗಳ ಕಾಣಿಕೆ ನೀಡಿದರು.

6 / 6
Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!

ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!

ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ

2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!

ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ

ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ

ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?

ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !

ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!

1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!