- Kannada News Photo gallery Cricket photos IPL 2024 Travis Head Heinrich Klaasen dominating innings against rcb
IPL 2024: 102, 67 ರನ್; ಆರ್ಸಿಬಿಗೆ ಕಂಟಕವಾದ ಮಾಜಿ ಆರ್ಸಿಬಿ ಆಟಗಾರರು..!
IPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿದೆ.
Updated on: Apr 15, 2024 | 9:37 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿದೆ.

ಹೈದರಾಬಾದ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಡ್ ಹೆಡ್ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದರು. ಈ ಇಬ್ಬರು ಮೊದಲ ವಿಕೆಟ್ಗೆ 108 ರನ್ಗಳ ಜೊತೆಯಾಟ ನಡೆಸಿದರು. ಅಲ್ಲದೆ ಪವರ್ ಪ್ಲೇನಲ್ಲಿ ಈ ಇಬ್ಬರು 76 ರನ್ ಕಲೆಹಾಕಿದರು.

ಇದೇ ವೇಳೆ ಟ್ರಾವಿಸ್ ಹೆಡ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆ ನಂತರವೂ ತಣ್ಣಗಾಗದ ಹೆಡ್ ಮೈದಾನದಲ್ಲಿ ಬೌಂಡರಿ ಸಿಕ್ಸರ್ಗಳ ಮಳೆಗರೆದರು. ಇದರ ಫಲವಾಗಿ ಹೆಡ್ ಕೇವಲ 39 ಎಸೆತಗಳಲ್ಲಿ ಶತಕ ಪೂರೈಸಿದರು.

ಇದು ಐಪಿಎಲ್ ಇತಿಹಾಸದಲ್ಲೇ 4ನೇ ಅತಿ ವೇಗದ ಶತಕ ಎನಿಸಿಕೊಂಡಿತು. ಅಲ್ಲದೆ ಈ ಸೀಸನ್ನಲ್ಲಿ ಸಿಡಿದ ಮೊದಲ ವೇಗದ ಶತಕ ಎಂಬ ದಾಖಲೆಯನ್ನು ಹೆಡ್ ಸೃಷ್ಟಿಸಿದರು. ಅಂತಿಮವಾಗಿ ಹೆಡ್ 41 ಎಸೆತಗಳಲ್ಲಿ 102 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು.

ಇವರಲ್ಲದೆ ಹೆನ್ರಿಕ್ ಕ್ಲಾಸೆನ್ ಕೂಡ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ಕೇವಲ 31 ಎಸೆತಗಳಲ್ಲಿ 2 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 67 ರನ್ ಬಾರಿಸಿದರು. ವಾಸ್ತವವಾಗಿ ಆರ್ಸಿಬಿ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಈ ಇಬ್ಬರು ಮಾಜಿ ಆರ್ಸಿಬಿ ಆಟಗಾರರು ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿಯಾಗಿದೆ.

ಈ ಇಬ್ಬರ ಜೊತೆಗೆ ಕೊನೆಯಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದ ಐಡೆನ್ ಮಾರ್ಕ್ರಾಮ್ 17 ಎಸೆತಗಳಲ್ಲಿ 32 ರನ್ ಹಾಗೂ ಅಬ್ದುಲ್ ಸಮದ್ 10 ಎಸೆತಗಳಲ್ಲಿ 37 ರನ್ ಕಲೆಹಾಕಿ ತಂಡ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ಮೊತ್ತ ದಾಖಲಿಸಿದ ದಾಖಲೆ ಸೃಷ್ಟಿಸುವಂತೆ ಮಾಡಿದರು.

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More




