IPL 2024: ಅತಿ ಹೆಚ್ಚು ಸಿಕ್ಸರ್; ಕ್ರಿಸ್ ಗೇಲ್ ದಾಖಲೆ ಮುರಿದ ಕಿಂಗ್ ಕೊಹ್ಲಿ..!

Updated on: Mar 29, 2024 | 10:23 PM

IPL 2024: ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಆರಂಭಿಕ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 83 ರನ್ ಕಲೆಹಾಕಿದರು. ಈ ಪಂದ್ಯದಲ್ಲಿ ಭರ್ಜರಿ 4 ಸಿಕ್ಸರ್ ಸಿಡಿಸಿದ ವಿರಾಟ್ ಕೊಹ್ಲಿ ಆರ್​ಸಿಬಿ ಪರ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಎಂಬ ದಾಖಲೆ ಕೂಡ ಬರೆದರು.

1 / 7
ಐಪಿಎಲ್ 2024ರ 10 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ತನ್ನ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಿಸುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 6 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿದೆ.

ಐಪಿಎಲ್ 2024ರ 10 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ತನ್ನ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಿಸುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 6 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿದೆ.

2 / 7

ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಆರಂಭಿಕ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 83 ರನ್ ಕಲೆಹಾಕಿದರು. ಈ ಪಂದ್ಯದಲ್ಲಿ ಭರ್ಜರಿ 4 ಸಿಕ್ಸರ್ ಸಿಡಿಸಿದ ವಿರಾಟ್ ಕೊಹ್ಲಿ ಆರ್​ಸಿಬಿ ಪರ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಎಂಬ ದಾಖಲೆ ಕೂಡ ಬರೆದರು

3 / 7

ಈ ಪಂದ್ಯದಲ್ಲಿ 4 ಸಿಕ್ಸರ್ ಸಿಡಿಸುವ ಮೂಲಕ ಕೊಹ್ಲಿ ಐಪಿಎಲ್​ನಲ್ಲಿ 241 ಸಿಕ್ಸರ್​ಗಳನ್ನು ಪೂರೈಸಿದರು. ಈ ಮೂಲಕ ಆರ್​ಸಿಬಿ ಪರ ಅತಿ ಹೆಚ್ಚು ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದ ಕ್ರಿಸ್ ಗೇಲ್ ದಾಖಲೆಯನ್ನು ಮುರಿದರು.

4 / 7

ವೆಸ್ಟ್ ಇಂಡೀಸ್​ ದೈತ್ಯ ಕ್ರಿಸ್ ಗೇಲ್ ಆರ್​ಸಿಬಿ ಪರ 239 ಸಿಕ್ಸರ್​ಗಳನ್ನು ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು. ಇದೀಗ ಆ ದಾಖಲೆ ಕೊಹ್ಲಿ ಪಾಲಾಗಿದೆ.

5 / 7

ಇದಲ್ಲದೆ ಕೊಹ್ಲಿ ಐಪಿಎಲ್​ನಲ್ಲಿ ಅಧಿಕ ಸಿಕ್ಸರ್ ಸಿಡಿಸಿದ ಆಟಗಾರರ ಪೈಕಿ ಎಂಎಸ್ ಧೋನಿಯನ್ನು ಹಿಂದಿಕ್ಕಿದ್ದಾರೆ. ಧೋನಿ 252 ಐಪಿಎಲ್ ಪಂದ್ಯಗಳ 218 ಇನ್ನಿಂಗ್ಸ್‌ಗಳಲ್ಲಿ 239 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಆದರೆ ವಿರಾಟ್ ಇದುವರೆಗೆ ಐಪಿಎಲ್‌ನ 240 ಪಂದ್ಯಗಳ 232 ಇನ್ನಿಂಗ್ಸ್‌ಗಳಲ್ಲಿ 241 ಸಿಕ್ಸರ್ ಸಿಡಿಸಿದ್ದಾರೆ.

6 / 7

ಈ ಮೂಲಕ ವಿರಾಟ್ ಲೀಗ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಐಪಿಎಲ್​ನಲ್ಲಿ ಅಧಿಕ ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ 357 ಸಿಕ್ಸರ್ ಸಿಡಿಸಿರುವ ಕ್ರಿಸ್ ಗೇಲ್ ಮೊದಲ ಸ್ಥಾನದಲ್ಲಿದ್ದಾರೆ.

7 / 7

ಎರಡನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್‌ನ ಮಾಜಿ ನಾಯಕ ರೋಹಿತ್ ಶರ್ಮಾ, 261 ಸಿಕ್ಸರ್ ಸಿಡಿಸಿದ್ದರೆ, ಮೂರನೇ ಸ್ಥಾನದಲ್ಲಿರುವ ಎಬಿ ಡಿವಿಲಿಯರ್ಸ್ 251 ಸಿಕ್ಸರ್​ ಸಿಡಿಸಿದ್ದಾರೆ.

Published On - 10:23 pm, Fri, 29 March 24

Loading...
Unable to load recommendations.
Follow Us