- Kannada News Photo gallery Cricket photos IPL 2024 Virat Kohli breaks Suresh Rainas Record For Most Catches By An Indian In T20 Cricket
IPL 2024: ಟಿ20 ಕ್ರಿಕೆಟ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಕಿಂಗ್ ಕೊಹ್ಲಿ..!
IPL 2024 Virat Kohli: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ರ ಆರನೇ ಪಂದ್ಯದಲ್ಲಿ ಆರ್‌ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
Updated on: Mar 25, 2024 | 9:30 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ರ ಆರನೇ ಪಂದ್ಯದಲ್ಲಿ ಆರ್‌ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಪಂಜಾಬ್ ಹಾಗೂ ಆರ್ಸಿಬಿ ಮುಖಾಮುಖಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ಗೆ ವೇಗಿ ಮೊಹಮ್ಮದ್ ಸಿರಾಜ್, ಜಾನಿ ಬೈರ್‌ಸ್ಟೋವ್ ವಿಕೆಟ್ ಉರುಳಿಸಿ ಆರಂಭದಲ್ಲೇ ಆಘಾತ ನೀಡಿದರು. ಸಿರಾಜ್ ಎಸೆತವನ್ನು ಸಿಕ್ಸರ್ಗಟ್ಟುವ ಯತ್ನದಲ್ಲಿ ಬೈರ್‌ಸ್ಟೋವ್ ಕಿಂಗ್ ಕೊಹ್ಲಿಗೆ ಕ್ಯಾಚಿತ್ತು ನಿರ್ಗಮಿಸಿದರು.

ಬೈರ್‌ಸ್ಟೋವ್ ಅವರ ಈ ಕ್ಯಾಚ್ ತೆಗೆದುಕೊಳ್ಳುವ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 173 ನೇ ಕ್ಯಾಚ್ ಪೂರ್ಣಗೊಳಿಸಿದರು. ಇದರೊಂದಿಗೆ ಅವರು ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಭಾರತದ ಆಟಗಾರರ ಪೈಕಿ ಮೊದಲ ಸ್ಥಾನಕ್ಕೇರಿದ್ದಾರೆ.

ಈ ಹಿಂದೆ ಈ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿತ್ತು. ಸುರೇಶ್ ರೈನಾ ತಮ್ಮ ಟಿ20 ವೃತ್ತಿಜೀವನದಲ್ಲಿ 172 ಕ್ಯಾಚ್‌ಗಳನ್ನು ಪಡೆದಿದ್ದಾರೆ. ಇದೀಗ ರೈನಾ ದಾಖಲೆ ಮುರಿದ ಕೊಹ್ಲಿ ಮೊದಲ ಸ್ಥಾನಕ್ಕೇರಿದರೆ, 167 ಕ್ಯಾಚ್ ಹಿಡಿದಿರುವ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಇದುವರೆಗೆ 108 ಕ್ಯಾಚ್‌ಗಳನ್ನು ಪಡೆದಿದ್ದಾರೆ. ಇದೀಗ ಕೊಹ್ಲಿ ಈ ಆವೃತ್ತಿಯಲ್ಲಿ ಇನ್ನೇರಡು ಕ್ಯಾಚ್‌ಗಳನ್ನು ಹಿಡಿದರೆ, ಐಪಿಎಲ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದಿರುವ ಆಟಗಾರರ ಪೈಕಿ ಮೊದಲ ಸ್ಥಾನಕ್ಕೇರಲಿದ್ದಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದಿರುವ ದಾಖಲೆ ಮಾಜಿ ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ ಹೆಸರಿನಲ್ಲಿದೆ. ಸುರೇಶ್ ರೈನಾ ಐಪಿಎಲ್‌ನಲ್ಲಿ ಒಟ್ಟು 109 ಕ್ಯಾಚ್‌ಗಳನ್ನು ಪಡೆದಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಇನ್ನೂ 2 ಕ್ಯಾಚ್ ಹಿಡಿದರೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಈ ಪಟ್ಟಿಯಲ್ಲಿ ಸುರೇಶ್ ರೈನಾ ಮತ್ತು ವಿರಾಟ್ ನಂತರ ಕೀರಾನ್ ಪೊಲಾರ್ಡ್ ಮೂರನೇ ಸ್ಥಾನದಲ್ಲಿದ್ದು, ಅವರು ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಒಟ್ಟಾರೆ 103 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.




