IPL 2024: ಒಂದೇ ಪಂದ್ಯದಲ್ಲಿ 4 ದಾಖಲೆ ಮೇಲೆ ಕಣ್ಣಿಟ್ಟ ಕಿಂಗ್ ಕೊಹ್ಲಿ..!
IPL 2024 Virat Kohli: ಐಪಿಎಲ್ನ 19ನೇ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಇದುವರೆಗೆ ಆರ್‌ಸಿಬಿ ಪರ ಅದ್ಭುತ ಪ್ರದರ್ಶನ ನೀಡುತ್ತಿರುವ ಏಕೈಕ ಆಟಗಾರ ವಿರಾಟ್ ಕೊಹ್ಲಿ, ಒಂದಲ್ಲ, ಎರಡಲ್ಲ ಬರೋಬ್ಬರಿ ಮೂರು ದಾಖಲೆ ಸೃಷ್ಟಿಸುವ ಸನಿಹದಲ್ಲಿದ್ದಾರೆ.
1 / 8
ಐಪಿಎಲ್ನ 19ನೇ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಇದುವರೆಗೆ ಆರ್‌ಸಿಬಿ ಪರ ಅದ್ಭುತ ಪ್ರದರ್ಶನ ನೀಡುತ್ತಿರುವ ಏಕೈಕ ಆಟಗಾರ ವಿರಾಟ್ ಕೊಹ್ಲಿ, ಒಂದಲ್ಲ, ಎರಡಲ್ಲ ಬರೋಬ್ಬರಿ ಮೂರು ದಾಖಲೆ ಸೃಷ್ಟಿಸುವ ಸನಿಹದಲ್ಲಿದ್ದಾರೆ.
2 / 8
ವಿರಾಟ್ ಕೊಹ್ಲಿ ಇದುವರೆಗೆ ಆಡಿರುವ 4 ಪಂದ್ಯಗಳಲ್ಲಿ 67.67 ಸರಾಸರಿಯಲ್ಲಿ 203 ರನ್ ಬಾರಿಸಿದ್ದು, ಆರೆಂಜ್ ಕ್ಯಾಪ್ ಹೋಲ್ಡರ್ ಎನಿಸಿಕೊಂಡಿದ್ದಾರೆ. ಹೀಗಾಗಿ ತಮ್ಮ ಲಯವನ್ನು ಕೊಹ್ಲಿ ಇಂದಿನ ಪಂದ್ಯದಲ್ಲೂ ಮುಂದುವರೆಸಿದರೆ ಪ್ರಮುಖವಾಗಿ ಮೂರು ದಾಖಲೆಗಳು ಸೃಷ್ಟಿಯಾಗಲಿವೆ.
3 / 8
ಅದರಲ್ಲಿ ಮೊದಲನೆಯದ್ದು, ಕೊಹ್ಲಿ ಇಂದಿನ ಪಂದ್ಯದಲ್ಲಿ ಕೇವಲ 34 ರನ್ ಕಲೆಹಾಕಿದರೆ, ಐಪಿಎಲ್‌ನಲ್ಲಿ 7500 ರನ್ ಪೂರೈಸಲಿದ್ದಾರೆ. ಇದುವರೆಗೆ ಕೊಹ್ಲಿ ಐಪಿಎಲ್‌ನಲ್ಲಿ ಆಡಿರುವ 241 ಪಂದ್ಯಗಳಲ್ಲಿ 7466 ರನ್ ಬಾರಿಸಿದ್ದು, ಐಪಿಎಲ್‌ನಲ್ಲಿ ಅಧಿಕ ರನ್ ಬಾರಿಸಿರುವ ಆಟಗಾರ ಎಂಬ ದಾಖಲೆ ಕೊಹ್ಲಿ ಹೆಸರಿನಲ್ಲಿದೆ.
4 / 8
ಇದಲ್ಲದೆ ಈ ಪಂದ್ಯದಲ್ಲಿ ಕೊಹ್ಲಿ 8 ಸಿಕ್ಸರ್ಗಳನ್ನು ಸಿಡಿಸಿದರೆ, ಐಪಿಎಲ್‌ನಲ್ಲಿ 250 ಸಿಕ್ಸರ್ಗಳನ್ನು ಪೂರೈಸಲಿದ್ದಾರೆ. ಇದರೊಂದಿಗೆ ಐಪಿಎಲ್‌ನಲ್ಲಿ 250 ಸಿಕ್ಸರ್ ಸಿಡಿಸಿರುವ ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್ ಮತ್ತು ರೋಹಿತ್ ಶರ್ಮಾ ನಂತರ ಈ ಸಾಧನೆ ಮಾಡಿದ ನಾಲ್ಕನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಆದರೆ ಈ ದಾಖಲೆ ಈ ಪಂದ್ಯದಲ್ಲಿ ಸೃಷ್ಟಿಯಾಗುವ ಸಾಧ್ಯತೆಗಳು ತೀರ ವಿರಳ.
5 / 8
ಹಾಗೆಯೇ ಈ ಪಂದ್ಯದಲ್ಲಿ ಕೊಹ್ಲಿ ಬಿಗ್ ಇನ್ನಿಂಗ್ಸ್ ಆಡುವಲ್ಲಿ ಯಶಸ್ವಿಯಾದರೆ ಅಂದರೆ ಈ ಪಂದ್ಯದಲ್ಲಿ ಕೊಹ್ಲಿ 62 ರನ್ ಸಿಡಿಸಿದರೆ, ರಾಜಸ್ಥಾನ್ ರಾಯಲ್ಸ್ ವಿರುದ್ಧ ಅಧಿಕ ರನ್ ಬಾರಿಸಿರುವ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ. ಕೊಹ್ಲಿ ರಾಜಸ್ಥಾನ್ ವಿರುದ್ಧ ಇದುವರೆಗೆ 29 ಪಂದ್ಯಗಳಲ್ಲಿ 618 ರನ್ ಬಾರಿಸಿದ್ದಾರೆ.
6 / 8
ಪ್ರಸ್ತುತ, ರಾಜಸ್ಥಾನ ರಾಯಲ್ಸ್ ವಿರುದ್ಧ ಐಪಿಎಲ್‌ನಲ್ಲಿ 679 ರನ್ ಬಾರಿಸಿರುವ ಶಿಖರ್ ಧವನ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಕೊಹ್ಲಿ ಪ್ರಸ್ತುತ 5ನೇ ಸ್ಥಾನದಲ್ಲಿದ್ದು, ಕೊಹ್ಲಿಗಿಂತ ಮೇಲೆ ಎಬಿ ಡಿವಿಲಿಯರ್ಸ್, ಕೆಎಲ್ ರಾಹುಲ್, ಸುರೇಶ್ ರೈನಾ ಮತ್ತು ದಿನೇಶ್ ಕಾರ್ತಿಕ್ ಇದ್ದಾರೆ.
7 / 8
ಇನ್ನು ಐಪಿಎಲ್ ಆರಂಭವಾದಾಗಿನಿಂದಲೂ ಆರ್‌ಸಿಬಿ ಪರ ಆಡುತ್ತಿರುವ ವಿರಾಟ್ ಇಂದಿನ ಪಂದ್ಯದಲ್ಲಿ 110 ರನ್ ಸಿಡಿಸಲು ಸಾಧ್ಯವಾದರೆ ಟಿ20 ಕ್ರಿಕೆಟ್ನಲ್ಲಿ ಏಕೈಕ ತಂಡದ ಪರ 8000 ಕ್ಕೂ ಅಧಿಕ ರನ್ ಬಾರಿಸಿದ ಆಟಗಾರ ಎನಿಸಿಕೊಳ್ಳಲಿದ್ದಾರೆ.
8 / 8
ಇಲ್ಲಿಯವರೆಗೆ ಕೊಹ್ಲಿ, ಆರ್‌ಸಿಬಿ ಪರ 241 ಪಂದ್ಯ ಮತ್ತು ಚಾಂಪಿಯನ್ಸ್ ಲೀಗ್‌ನಲ್ಲಿ 15 ಪಂದ್ಯಗಳನ್ನು ಆಡಿದ್ದಾರೆ. ಒಟ್ಟಾರೆಯಾಗಿ ಆರ್‌ಸಿಬಿ ಪರ 256 ಪಂದ್ಯಗಳನ್ನಾಡಿರುವ ವಿರಾಟ್, 37.75 ಸರಾಸರಿಯಲ್ಲಿ 7890 ರನ್ ಬಾರಿಸಿದ್ದಾರೆ. ಇದೀಗ ಈ ತಂಡದ ಪರ 8000 ರನ್‌ಗಳ ಗಡಿಯನ್ನು ಮುಟ್ಟಲು ಕೊಹ್ಲಿಗೆ ಇನ್ನೂ 110 ರನ್‌ಗಳ ಅಗತ್ಯವಿದೆ.