Virat Kohli, IPL 2024: ಐಪಿಎಲ್​ನಲ್ಲಿ ಇತಿಹಾಸ ಬರೆದ ಕಿಂಗ್ ಕೊಹ್ಲಿ..!

Virat Kohli, IPL 2024: ಈ ಪಂದ್ಯದಲ್ಲಿ ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ 29 ರನ್ ಬಾರಿಸಿದ ತಕ್ಷಣ ಐಪಿಎಲ್‌ನಲ್ಲಿ 8000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪೃಥ್ವಿಶಂಕರ
|

Updated on: May 22, 2024 | 9:28 PM

ಇಂದು ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

1 / 7
ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಲು ಇಳಿದ ಆರ್‌ಸಿಬಿ ಪರ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ 29 ರನ್ ಬಾರಿಸಿದ ತಕ್ಷಣ ಐಪಿಎಲ್‌ನಲ್ಲಿ 8000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2 / 7
ಈ ಮೂಲಕ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆಯೂ ವಿರಾಟ್ ಕೊಹ್ಲಿ ಹೆಸರಿನಲ್ಲಿ ದಾಖಲಾಗಿದೆ. ಅದಾಗ್ಯೂ ಈ ಪಂದ್ಯದಲ್ಲಿ ಕೊಹ್ಲಿ ಹೆಚ್ಚು ರನ್ ಕಲೆಹಾಕಲು ಸಾಧ್ಯವಾಗಲಿಲ್ಲ. ತಮ್ಮ ಇನ್ನಿಂಗ್ಸ್‌ನಲ್ಲಿ 24 ಎಸೆತಗಳನ್ನು ಎದುರಿಸಿದ ವಿರಾಟ್ 33 ರನ್ ಬಾರಿಸಿ ಔಟಾದರು.

3 / 7
ಈ ಪಟ್ಟಿಯಲ್ಲಿ ಶಿಖರ್ ಧವನ್ (6769 ರನ್) ಎರಡನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (6628 ರನ್) ಮೂರನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ (6565 ರನ್) ನಾಲ್ಕನೇ ಸ್ಥಾನದಲ್ಲಿ ಮತ್ತು ಸುರೇಶ್ ರೈನಾ (5528 ರನ್) 5 ನೇ ಸ್ಥಾನದಲ್ಲಿದ್ದಾರೆ.

4 / 7
ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ (5243) 6ನೇ, ಎಬಿ ಡಿವಿಲಿಯರ್ಸ್ (5162) 7ನೇ, ಕ್ರಿಸ್ ಗೇಲ್ (4965) 8ನೇ, ರಾಬಿನ್ ಉತ್ತಪ್ಪ (4952) 9ನೇ ಹಾಗೂ ದಿನೇಶ್ ಕಾರ್ತಿಕ್ (4831) 10ನೇ ಸ್ಥಾನದಲ್ಲಿದ್ದಾರೆ.

5 / 7
ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದ 252 ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, ಟಿ20 ಲೀಗ್‌ನಲ್ಲಿ ಒಂದು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ 6000 ರನ್‌ಗಳ ದಾಖಲೆಯನ್ನು ಪೂರ್ಣಗೊಳಿಸಿದ ನಂತರ, ಇಲ್ಲಿಯವರೆಗೆ ಯಾವುದೇ ಆಟಗಾರ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್‌ಗಳ ವಿಷಯದಲ್ಲಿ ಕೊಹ್ಲಿಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ.

6 / 7
ಇನ್ನು ಈ ಸೀಸನ್‌ನಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಆಡಿರುವ 15 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ 741 ರನ್ ಬಾರಿಸಿದ್ದಾರೆ. ಇದರೊಂದಿಗೆ ಒಂದು ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 5 ನೇ ಆಟಗಾರ ಎನಿಸಿಕೊಂಡಿದ್ದಾರೆ.

7 / 7
Follow us
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ