Virat Kohli, IPL 2024: ಐಪಿಎಲ್‌ನಲ್ಲಿ ಇತಿಹಾಸ ಬರೆದ ಕಿಂಗ್ ಕೊಹ್ಲಿ..!
Virat Kohli, IPL 2024: ಈ ಪಂದ್ಯದಲ್ಲಿ ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ 29 ರನ್ ಬಾರಿಸಿದ ತಕ್ಷಣ ಐಪಿಎಲ್‌ನಲ್ಲಿ 8000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
1 / 7
ಇಂದು ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
2 / 7
ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಲು ಇಳಿದ ಆರ್‌ಸಿಬಿ ಪರ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ 29 ರನ್ ಬಾರಿಸಿದ ತಕ್ಷಣ ಐಪಿಎಲ್‌ನಲ್ಲಿ 8000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
3 / 7
ಈ ಮೂಲಕ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆಯೂ ವಿರಾಟ್ ಕೊಹ್ಲಿ ಹೆಸರಿನಲ್ಲಿ ದಾಖಲಾಗಿದೆ. ಅದಾಗ್ಯೂ ಈ ಪಂದ್ಯದಲ್ಲಿ ಕೊಹ್ಲಿ ಹೆಚ್ಚು ರನ್ ಕಲೆಹಾಕಲು ಸಾಧ್ಯವಾಗಲಿಲ್ಲ. ತಮ್ಮ ಇನ್ನಿಂಗ್ಸ್‌ನಲ್ಲಿ 24 ಎಸೆತಗಳನ್ನು ಎದುರಿಸಿದ ವಿರಾಟ್ 33 ರನ್ ಬಾರಿಸಿ ಔಟಾದರು.
4 / 7
ಈ ಪಟ್ಟಿಯಲ್ಲಿ ಶಿಖರ್ ಧವನ್ (6769 ರನ್) ಎರಡನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (6628 ರನ್) ಮೂರನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ (6565 ರನ್) ನಾಲ್ಕನೇ ಸ್ಥಾನದಲ್ಲಿ ಮತ್ತು ಸುರೇಶ್ ರೈನಾ (5528 ರನ್) 5 ನೇ ಸ್ಥಾನದಲ್ಲಿದ್ದಾರೆ.
5 / 7
ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ (5243) 6ನೇ, ಎಬಿ ಡಿವಿಲಿಯರ್ಸ್ (5162) 7ನೇ, ಕ್ರಿಸ್ ಗೇಲ್ (4965) 8ನೇ, ರಾಬಿನ್ ಉತ್ತಪ್ಪ (4952) 9ನೇ ಹಾಗೂ ದಿನೇಶ್ ಕಾರ್ತಿಕ್ (4831) 10ನೇ ಸ್ಥಾನದಲ್ಲಿದ್ದಾರೆ.
6 / 7
ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದ 252 ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, ಟಿ20 ಲೀಗ್‌ನಲ್ಲಿ ಒಂದು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ 6000 ರನ್‌ಗಳ ದಾಖಲೆಯನ್ನು ಪೂರ್ಣಗೊಳಿಸಿದ ನಂತರ, ಇಲ್ಲಿಯವರೆಗೆ ಯಾವುದೇ ಆಟಗಾರ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್‌ಗಳ ವಿಷಯದಲ್ಲಿ ಕೊಹ್ಲಿಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ.
7 / 7
ಇನ್ನು ಈ ಸೀಸನ್‌ನಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಆಡಿರುವ 15 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ 741 ರನ್ ಬಾರಿಸಿದ್ದಾರೆ. ಇದರೊಂದಿಗೆ ಒಂದು ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 5 ನೇ ಆಟಗಾರ ಎನಿಸಿಕೊಂಡಿದ್ದಾರೆ.