IPL 2024: ಐಪಿಎಲ್‌ನಲ್ಲಿ ದಾಖಲೆಯ 7ನೇ ಬಾರಿಗೆ ಈ ಸಾಧನೆ ಮಾಡಿದ ವಿರಾಟ್ ಕೊಹ್ಲಿ..!

|

Updated on: Apr 28, 2024 | 9:30 PM

IPL 2024 Virat Kohli: ಗುಜರಾತ್ ಟೈಟಾನ್ಸ್ ವಿರುದ್ಧ ಅಜೇಯ 70 ರನ್​ಗಳ ಇನ್ನಿಂಗ್ಸ್ ಆಡಿದ ಕೊಹ್ಲಿ, ಈ70 ರನ್‌ಗಳ ಇನ್ನಿಂಗ್ಸ್‌ನೊಂದಿಗೆ ಈ ಐಪಿಎಲ್ ಸೀಸನ್‌ನಲ್ಲಿ 500 ರನ್ ಪೂರೈಸಿದ್ದಾರೆ. ಇದರೊಂದಿಗೆ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ತನ್ನ ಪಾರುಪತ್ಯವನ್ನು ಮುಂದುವರೆಸಿದ್ದಾರೆ.

1 / 6
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಈ ಸೀಸನ್​ನಲ್ಲಿ ತನ್ನ ಅದ್ಭುತ ಫಾರ್ಮ್​ ಮುಂದುವರೆಸಿದ್ದಾರೆ. ಈ ಪಂದ್ಯದಲ್ಲಿ ಕೇವಲ 44 ಎಸೆತಗಳನ್ನು ಎದುರಿಸಿದ ವಿರಾಟ್ 6 ಬೌಂಡರಿ ಮತ್ತು 3 ಸಿಕ್ಸರ್‌ ಸಹಿತ 70 ರನ್‌ಗಳ ಇನಿಂಗ್ಸ್‌ ಆಡಿದರು.

2 / 6
ಗುಜರಾತ್ ಟೈಟಾನ್ಸ್ ವಿರುದ್ಧ ಅಜೇಯ 70 ರನ್​ಗಳ ಇನ್ನಿಂಗ್ಸ್ ಆಡಿದ ಕೊಹ್ಲಿ, ಈ70 ರನ್‌ಗಳ ಇನ್ನಿಂಗ್ಸ್‌ನೊಂದಿಗೆ ಈ ಐಪಿಎಲ್ ಸೀಸನ್‌ನಲ್ಲಿ 500 ರನ್ ಪೂರೈಸಿದ್ದಾರೆ. ಇದರೊಂದಿಗೆ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ತನ್ನ ಪಾರುಪತ್ಯವನ್ನು ಮುಂದುವರೆಸಿದ್ದಾರೆ. ಹಾಗೆಯೇ ಈ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಇತಿಹಾಸ ಕೂಡ ಸೃಷ್ಟಿಸಿದ್ದಾರೆ.

3 / 6
ಪ್ರಸ್ತುತ ಈ ಸೀಸನ್‌ನಲ್ಲಿ 10 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 500 ರನ್​ಗಳ ಗಡಿ ದಾಟಿದ್ದಾರೆ. ಇದರೊಂದಿಗೆ ಐಪಿಎಲ್​ ಅಧಿಕ ಬಾರಿ 500 ರನ್​ಗಳ ಗಡಿ ದಾಟಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.

4 / 6
ಇದುವರೆಗೆ ನಡೆದಿರುವ 17 ಆವೃತ್ತಿಗಳ ಪೈಕಿ ವಿರಾಟ್ ಕೊಹ್ಲಿ 7 ಸೀಸನ್​ಗಳಲ್ಲಿ 500 ರನ್​ಗಳ ಗಡಿ ದಾಟಿದ್ದಾರೆ. ಇದರೊಂದಿಗೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ 500 ಪ್ಲಸ್ ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಕೊಹ್ಲಿ ಆಸ್ಟ್ರೇಲಿಯಾದ ಆಟಗಾರ ಡೇವಿಡ್ ವಾರ್ನರ್ ಅವರನ್ನು ಸರಿಗಟ್ಟಿದ್ದಾರೆ.

5 / 6
ವಾರ್ನರ್ ಐಪಿಎಲ್‌ನಲ್ಲಿ 7 ಬಾರಿ 500 ಪ್ಲಸ್ ರನ್ ಗಳಿಸಿದ್ದಾರೆ. ವಾರ್ನರ್ ನಂತರ ಈ ಸಾಧನೆ ಮಾಡಿದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

6 / 6
ಈ ಪಂದ್ಯದಲ್ಲಿ ಕೊಹ್ಲಿ ಅಜೇಯ ಅರ್ಧಶತಕ ಸಿಡಿಸಿದಲ್ಲದೆ ವಿಲ್ ಜ್ಯಾಕ್ಸ್ ಅವರೊಂದಿಗೆ ಕೇವಲ 74 ಎಸೆತಗಳಲ್ಲಿ 166 ರನ್​ಗಳ ದಾಖಲೆಯ ಅಜೇಯ ಜೊತೆಯಾಟವನ್ನು ನಡೆಸಿದರು. ಕೊಹ್ಲಿಯಂತೆಯೇ ಅಜೇಯರಾಗಿ ಉಳಿದ ಜ್ಯಾಕ್ಸ್​ ಕೂಡ ಐಪಿಎಲ್‌ನಲ್ಲಿ ತಮ್ಮ ಚೊಚ್ಚಲ ಶತಕ ಸಿಡಿಸಿ ಮಿಂಚಿದರು.

Published On - 9:28 pm, Sun, 28 April 24