148 ರನ್ಗಳ ಗುರಿ ಪಡೆದ ಆರ್ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ (64) ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭ ಒದಗಿಸಿದ್ದರು. ಈ ಪಂದ್ಯದಲ್ಲಿ 27 ಎಸೆತಗಳನ್ನು ಎದುರಿಸಿದ ಕೊಹ್ಲಿ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 42 ರನ್ ಬಾರಿಸಿದರು. ಈ 42 ರನ್ಗಳೊಂದಿಗೆ ಕಿಂಗ್ ಕೊಹ್ಲಿ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.