IPL 2024: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ವಿರಾಟ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: May 05, 2024 | 11:08 AM

IPL 2024 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 52ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 147 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 13.4 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ವಿರಾಟ್ ಕೊಹ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 52ನೇ ಪಂದ್ಯದಲ್ಲಿ ಆರ್​ಸಿಬಿ ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಕೇವಲ 147 ರನ್​ಗಳಿಸಲಷ್ಟೇ ಶಕ್ತರಾದರು.

2 / 6
148 ರನ್​ಗಳ ಗುರಿ ಪಡೆದ ಆರ್​ಸಿಬಿ ತಂಡಕ್ಕೆ ಫಾಫ್ ಡುಪ್ಲೆಸಿಸ್ (64) ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭ ಒದಗಿಸಿದ್ದರು. ಈ ಪಂದ್ಯದಲ್ಲಿ 27 ಎಸೆತಗಳನ್ನು ಎದುರಿಸಿದ ಕೊಹ್ಲಿ 4 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 42 ರನ್ ಬಾರಿಸಿದರು. ಈ 42 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 6
ಐಪಿಎಲ್​ ಇತಿಹಾಸದಲ್ಲಿ ಗೆದ್ದ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 42 ರನ್​ ಬಾರಿಸುವುದರೊಂದಿಗೆ ಕೊಹ್ಲಿ ಜಯಭೇರಿ ಬಾರಿಸಿದ ಪಂದ್ಯಗಳಲ್ಲಿ ಒಟ್ಟು 4 ಸಾವಿರ ರನ್​ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡರು.

4 / 6
ಈ ಮೂಲಕ ಐಪಿಎಲ್ ಗೆಲುವಿನಲ್ಲಿ 4 ಸಾವಿರ ರನ್​ಗಳ ಕೊಡುಗೆ ನೀಡಿದ ಪ್ರಥಮ ಬ್ಯಾಟರ್ ಹಾಗೂ ಗೆಲುವಿನ ಪಂದ್ಯಗಳಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

5 / 6
ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿದರೆ ಗೆಲುವಿನಲ್ಲಿ ಅತೀ ಹೆಚ್ಚು ರನ್​ಗಳ ಕೊಡುಗೆ ನೀಡಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಶಿಖರ್ ಧವನ್ (3945) ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ರೋಹಿತ್ ಶರ್ಮಾ (3918) ಹಾಗೂ ಡೇವಿಡ್ ವಾರ್ನರ್ (3710) ಕ್ರಮವಾಗಿ 3ನೇ ಮತ್ತು 4ನೇ ಸ್ಥಾನಗಳಲ್ಲಿದ್ದಾರೆ.

6 / 6
ಐಪಿಎಲ್​ನಲ್ಲಿ 240 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ವಿರಾಟ್ ಕೊಹ್ಲಿ 5952 ಎಸೆತಗಳನ್ನು ಎದುರಿಸಿ 7805 ರನ್ ಕಲೆಹಾಕಿದ್ದಾರೆ. ಈ ವೇಳೆ 8 ಶತಕ ಹಾಗೂ 54 ಅರ್ಧಶತಕಗಳನ್ನು ಸಿಡಿಸಿ ಮಿಂಚಿದ್ದಾರೆ. ಈ 7805 ರನ್​ಗಳಲ್ಲಿ 4 ಸಾವಿರಕ್ಕೂ ಅಧಿಕ ರನ್​ಗಳು ಗೆಲುವಿನ ಪಂದ್ಯಗಳಲ್ಲಿ ಮೂಡಿಬಂದಿರುವುದು ವಿಶೇಷ.