IPL 2024: ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ ರನ್ ಮಷಿನ್ ಕಿಂಗ್ ಕೊಹ್ಲಿ..!
IPL 2024 Virat Kohli: ಐಪಿಎಲ್ 2024 ರ 41 ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿದ್ದವು. ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಸಿಬಿ ಬ್ಯಾಟರ್ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಟಿಸಿದ್ದಾರೆ.
1 / 7
ಐಪಿಎಲ್ 2024 ರ 41 ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿದ್ದವು. ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಸಿಬಿ ಬ್ಯಾಟರ್ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಟಿಸಿದ್ದಾರೆ.
2 / 7
ಈ ಪಂದ್ಯದಲ್ಲಿ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 21 ರನ್ ಬಾರಿಸಿದ ಕೂಡಲೇ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದರು.
3 / 7
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 21 ರನ್ ಬಾರಿಸಿದ ತಕ್ಷಣ ಈ ಸೀಸನ್ನಲ್ಲಿ 400 ರನ್ ಪೂರೈಸಿದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ 10 ಸೀಸನ್‌ಗಳಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
4 / 7
ಇದಕ್ಕೂ ಮುನ್ನ ಈ ದಾಖಲೆ ಮಾಜಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ಹೆಸರಿನಲ್ಲಿತ್ತು. ಮಿಸ್ಟರ್ ಐಪಿಎಲ್ ಖ್ಯಾತಿಯ ರೈನಾ 9 ಸೀಸನ್‌ಗಳಲ್ಲಿ ಈ ಸಾಧನೆ ಮಾಡಿದ್ದರು.
5 / 7
ಇದಲ್ಲದೇ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ 4000 ರನ್ ಪೂರೈಸಿದ್ದಾರೆ. ಇದರೊಂದಿಗೆ ಐಪಿಎಲ್‌ನಲ್ಲಿ 4000 ರನ್ ಗಳಿಸಿದ ನಾಲ್ಕನೇ ಆರಂಭಿಕ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
6 / 7
ಇದಕ್ಕೂ ಮುನ್ನ ಶಿಖರ್ ಧವನ್, ಡೇವಿಡ್ ವಾರ್ನರ್ ಮತ್ತು ಕ್ರಿಸ್ ಗೇಲ್ ಈ ಸಾಧನೆ ಮಾಡಿದ್ದರು.
7 / 7
ಈ ಪಂದ್ಯದಲ್ಲಿ ಕೊಹ್ಲಿ 43 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 51 ರನ್ ಬಾರಿಸಿದರು. ಆದರೆ ಪವರ್‌ಪ್ಲೇ ನಂತರ ಕೊಹ್ಲಿ ತುಂಬಾ ನಿಧಾನವಾಗಿ ಬ್ಯಾಟ್ ಮಾಡಿದರು. ಈ ಅವಧಿಯಲ್ಲಿ ಕೊಹ್ಲಿಗೆ 1 ಬೌಂಡರಿ ಕೂಡ ಹೊಡೆಯಲು ಸಾಧ್ಯವಾಗಲಿಲ್ಲ. ಪವರ್‌ಪ್ಲೇಯಲ್ಲಿ ವಿರಾಟ್ 18 ಎಸೆತಗಳಲ್ಲಿ ಕೇವಲ 32 ರನ್ ಬಾರಿಸಿದರು.