IPL 2024: 29 ರನ್‌ ಅಷ್ಟೇ ಬೇಕು; ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ..!

IPL 2024: ಇಡೀ ಲೀಗ್​ನಲ್ಲಿ ತಂಡದ ಪರ ಬ್ಯಾಟಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ, ಲೀಗ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದು, ಆರೆಂಜ್ ಕ್ಯಾಪ್ ಗಿಟ್ಟಿಸಿಕೊಂಡಿದ್ದಾರೆ. ಇದೀಗ ಎಲಿಮಿನೇಟರ್ ಪಂದ್ಯದಲ್ಲಿ ಕೊಹ್ಲಿ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ನಿಂತಿದ್ದಾರೆ.

|

Updated on: May 21, 2024 | 6:19 PM

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಮೇ 22 ರಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನ ಆತಿಥ್ಯವಹಿಸುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಕ್ಯಾಲಿಫೈಯರ್ 1 ರಲ್ಲಿ ಸೋತ ತಂಡದ ವಿರುದ್ಧ ಕ್ವಾಲಿಫೈಯರ್ 2 ರಲ್ಲಿ ಎದುರಿಸಲಿದೆ.

1 / 7
ಈ ಪಂದ್ಯದಲ್ಲಿ ಸೋತ ತಂಡದ ಐಪಿಎಲ್ ಪಯಣ ಅಂತ್ಯವಾಗಿರುವುದರಿಂದ ಎರಡೂ ತಂಡಗಳಿಗೆ ಗೆಲುವು ಅವಶ್ಯಕವಾಗಿದೆ. ಅದರಲ್ಲೂ ಸತತ ಸೋಲುಗಳಿಂದ ಆರಂಭದಲ್ಲೇ ಲೀಗ್​ನಿಂದ ಹೊರಬೀಳುವ ಆತಂಕದಲ್ಲಿದ್ದ ಆರ್​ಸಿಬಿ, ಶತಪ್ರಯತ್ನ ಮಾಡಿ ಇದೀಗ ಪ್ಲೇಆಫ್‌ಗೆ ಎಂಟ್ರಿಕೊಟ್ಟಿರುವುದರಿಂದ ಈ ಪಂದ್ಯದ ಗೆಲುವಿನ ಫೇವರೇಟ್ ಎನಿಸಿಕೊಂಡಿದೆ.

2 / 7
ಇದಲ್ಲದೆ ಇಡೀ ಲೀಗ್​ನಲ್ಲಿ ತಂಡದ ಪರ ಬ್ಯಾಟಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ, ಲೀಗ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದು, ಆರೆಂಜ್ ಕ್ಯಾಪ್ ಗಿಟ್ಟಿಸಿಕೊಂಡಿದ್ದಾರೆ. ಇದೀಗ ಎಲಿಮಿನೇಟರ್ ಪಂದ್ಯದಲ್ಲಿ ಕೊಹ್ಲಿ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ನಿಂತಿದ್ದಾರೆ.

3 / 7
ವಿರಾಟ್ ಕೊಹ್ಲಿ ಐಪಿಎಲ್ ಆರಂಭದಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿದ್ದಾರೆ. ಹಲವು ವರ್ಷಗಳಿಂದ ಕೊಹ್ಲಿ ತಂಡದ ನಾಯಕತ್ವವನ್ನೂ ನಿರ್ವಹಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಕೊಹ್ಲಿ ಇದುವರೆಗೆ 251 ಪಂದ್ಯಗಳ 243 ಇನ್ನಿಂಗ್ಸ್‌ಗಳಲ್ಲಿ 7971 ರನ್ ಗಳಿಸಿದ್ದಾರೆ. ಪ್ರಸ್ತುತ, ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಕೂಡ ಆಗಿದ್ದಾರೆ.

4 / 7
ಇದೀಗ ಕೊಹ್ಲಿ ಐಪಿಎಲ್‌ನಲ್ಲಿ 8 ಸಾವಿರ ರನ್ ಪೂರೈಸಲು ಇನ್ನು 29 ರನ್‌ಗಳ ಅಂತರದಲ್ಲಿದ್ದಾರೆ. ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೊಹ್ಲಿ 29 ರನ್ ಬಾರಿಸಿದರೆ, ಐಪಿಎಲ್‌ನಲ್ಲಿ 8 ಸಾವಿರ ರನ್ ಪೂರೈಸಿದ ಮೊದಲ ಬ್ಯಾಟ್ಸ್‌ಮನ್ ಆಗಲಿದ್ದಾರೆ.

5 / 7
ಇದುವರೆಗೆ ಐಪಿಎಲ್‌ನಲ್ಲಿ ಈ ಸಾಧನೆ ಮಾಡಲು ಯಾವುದೇ ಬ್ಯಾಟ್ಸ್‌ಮನ್‌ಗೆ ಸಾಧ್ಯವಾಗಿಲ್ಲ. ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ 8 ಶತಕ ಮತ್ತು 50 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಇದಲ್ಲದೇ ಔಟಾಗದೆ 113 ರನ್ ಗಳಿಸಿರುವುದು ಅವರ ಅತ್ಯುತ್ತಮ ಸ್ಕೋರ್ ಆಗಿದೆ. ಐಪಿಎಲ್ ಇತಿಹಾಸದಲ್ಲಿ ಕೊಹ್ಲಿ 702 ಬೌಂಡರಿ ಹಾಗೂ 271 ಸಿಕ್ಸರ್ ಸಹ ಬಾರಿಸಿದ್ದಾರೆ.

6 / 7
ಇನ್ನು ಈ ಆವೃತ್ತಿಯಲ್ಲಿ ಕೊಹ್ಲಿ ಪ್ರದರ್ಶನ ನೋಡುವುದಾದರೆ.. ಇದುವರೆಗೆ ಆಡಿರುವ 14 ಪಂದ್ಯಗಳಲ್ಲಿ ಕೊಹ್ಲಿ 155 ಸ್ಟ್ರೈಕ್ ರೇಟ್​ನಲ್ಲಿ 708 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಕೊಹ್ಲಿ 59 ಬೌಂಡರಿ ಹಾಗೂ 37 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದೀಗ ಎಲಿಮಿನೇಟರ್ ಪಂದ್ಯದಲ್ಲೂ ಕೊಹ್ಲಿಯಿಂದ ತಂಡ ಅದೇ ರೀತಿಯ ಶ್ರೇಷ್ಠ ಪ್ರದರ್ಶನವನ್ನು ನಿರೀಕ್ಷಿಸಲಿದೆ.

7 / 7
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್

Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?

Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ

Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ

ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ

ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ

ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು

‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ

ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್