AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ವಿವಾದಿತ ತೀರ್ಪಿಗೆ ಬಲಿಯಾದರೂ ವಿಶ್ವದಾಖಲೆ ಬರೆದ ಕೊಹ್ಲಿ..!

IPL 2024 Virat Kohli: ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಆರಂಭದ ಹೊರತಾಗಿಯೂ ವಿವಾದಿತ ತೀರ್ಪಿನಿಂದಾಗಿ ಕೊಹ್ಲಿ ತಮ್ಮ ವಿಕೆಟ್ ಕಳೆದುಕೊಳ್ಳಬೇಕಾಯಿತು. ಆದರೂ ಕೊಹ್ಲಿ ತಮ್ಮ ಅಲ್ಪ ಇನ್ನಿಂಗ್ಸ್​ನಲ್ಲಿ 2 ಸಿಕ್ಸರ್ ಬಾರಿಸುವ ಮೂಲಕ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಪೃಥ್ವಿಶಂಕರ
|

Updated on: Apr 21, 2024 | 10:37 PM

Share
ಕೋಲ್ಕತ್ತಾ ನೈಟ್ ರೈಸರ್ಸ್ ವಿರುದ್ಧದ ಪಂದ್ಯದಲ್ಲಿ 1 ರನ್​ಗಳ ಸೋಲಿನೊಂದಿಗೆ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7ನೇ ಸೋಲು ಅನುಭವಿಸಿದ್ದಂತ್ತಾಗಿದೆ. ಇದರೊಂದಿಗೆ ಆರ್​ಸಿಬಿಯ ಪ್ಲೇಆಫ್‌ ಕನಸು ಭಗ್ನಗೊಂಡಿದೆ.

1 / 8
ಅದಾಗ್ಯೂ ತಂಡದ ಪರ ಆರಂಭದಿಂದಲೂ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರೆಂಜ್ ಕ್ಯಾಪನ್ನು ತನ್ನಲ್ಲೇ ಉಳಿಸಿಕೊಂಡಿರುವ ವಿರಾಟ್ ಕೊಹ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಟಿ20 ಮಾದರಿಯಲ್ಲಿ ಇದುವರೆಗೆ ಯಾವ ಆಟಗಾರನು ಮಾಡದ ದಾಖಲೆಯನ್ನು ನಿರ್ಮಿಸಿದ್ದಾರೆ.

2 / 8
ವಾಸ್ತವವಾಗಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಆರಂಭದ ಹೊರತಾಗಿಯೂ ವಿವಾದಿತ ತೀರ್ಪಿನಿಂದಾಗಿ ಕೊಹ್ಲಿ ತಮ್ಮ ವಿಕೆಟ್ ಕಳೆದುಕೊಳ್ಳಬೇಕಾಯಿತು. ಆದರೂ ಕೊಹ್ಲಿ ತಮ್ಮ ಅಲ್ಪ ಇನ್ನಿಂಗ್ಸ್​ನಲ್ಲಿ  2 ಸಿಕ್ಸರ್ ಬಾರಿಸುವ ಮೂಲಕ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ.

3 / 8
ಈ ಪಂದ್ಯದಲ್ಲಿ 7 ಎಸೆತಗಳನ್ನು ಎದುರಿಸಿದ ಕೊಹ್ಲಿ 18 ರನ್ ಬಾರಿಸಿದರು. ಇದರಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಸೇರಿದ್ದವು. ಈ ಎರಡು ಸಿಕ್ಸರ್​ಗಳೊಂದಿಗೆ ಕೊಹ್ಲಿ ಐಪಿಎಲ್​ನಲ್ಲಿ 250 ಸಿಕ್ಸರ್​ಗಳ ಗಡಿ ಕೂಡ ಮುಟ್ಟಿದರು. ಅಲ್ಲದೆ ಒಂದು ತಂಡದ ಪರವಾಗಿ ಅಧಿಕ ಸಿಕ್ಸರ್ ಸಿಡಿಸಿದ ವಿಶ್ವದಾಖಲೆಯನ್ನು ನಿರ್ಮಿಸಿದರು.

4 / 8
ಇದುವರೆಗೆ ಕೊಹ್ಲಿನ ಆರ್​ಸಿಬಿ ಪರ 264 ಸಿಕ್ಸರ್​ಗಳನ್ನು ಸಿಡಿಸಿದ್ದಾರೆ. ಇದರಲ್ಲಿ ಐಪಿಎಲ್‌ನಲ್ಲಿ ಮಾತ್ರ ಕೊಹ್ಲಿ ಬ್ಯಾಟ್​ನಿಂದ 250 ಸಿಕ್ಸರ್​ಗಳು ಸಿಡಿಸಿದ್ದರೆ, ಉಳಿದ 14 ಸಿಕ್ಸರ್​ಗಳನ್ನು ಆರ್​ಸಿಬಿ ಪರವಾಗಿಯೇ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾರಿಸಿದ್ದಾರೆ.

5 / 8
ಇದರೊಂದಿಗೆ ಕೊಹ್ಲಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ಪರ 264 ಸಿಕ್ಸರ್​ಗಳನ್ನು ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಇತಿಹಾಸ ನಿರ್ಮಿಸಿದ್ದಾರೆ. ಇದುವರೆಗೆ ಟಿ20 ಕ್ರಿಕೆಟ್‌ನಲ್ಲಿ ಯಾವುದೇ ಆಟಗಾರ ಒಂದು ತಂಡದ ಪರ ಇಷ್ಟು ಸಿಕ್ಸರ್ ಬಾರಿಸಿಲ್ಲ.

6 / 8
ಇದಲ್ಲದೆ ಕೇವಲ ಐಪಿಎಲ್​ನಲ್ಲಿ ಮಾತ್ರ 250 ಸಿಕ್ಸರ್​ಗಳನ್ನು ಪೂರೈಸುವ ಮೂಲಕ ಕೊಹ್ಲಿ, ಐಪಿಎಲ್‌ನಲ್ಲಿ 250 ಸಿಕ್ಸರ್‌ಗಳನ್ನು ಸಿಡಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕ್ರಿಸ್ ಗೇಲ್, ರೋಹಿತ್ ಶರ್ಮಾ ಮತ್ತು ಎಬಿ ಡಿವಿಲಿಯರ್ಸ್ ಈ ಸಾಧನೆ ಮಾಡಿದ್ದರು.

7 / 8
ಕ್ರಿಸ್ ಗೇಲ್ ಐಪಿಎಲ್‌ನಲ್ಲಿ 357 ಸಿಕ್ಸರ್‌ ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, 275 ಸಿಕ್ಸರ್ ಸಿಡಿಸಿರುವ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಎಬಿ ಡಿವಿಲಿಯರ್ಸ್ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 251 ಸಿಕ್ಸರ್‌ಗಳನ್ನು ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.

8 / 8
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ

ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ

ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು

ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ