IPL 2024: ರಾಜಸ್ಥಾನ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಕಿಂಗ್ ಕೊಹ್ಲಿ..!

|

Updated on: Apr 06, 2024 | 9:39 PM

IPL 2024 Virat Kohli: ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 19ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್​ಸಿಬಿ ಆರಂಭಿಕ ಆಟಗಾರ ವಿರಾಟ್ ಕೊಹ್ಲಿಗೆ ಈ ಲೀಗ್​ನ ಚೊಚ್ಚಲ ಶತಕ ಬಾರಿಸಿದ್ದಾರೆ.

1 / 7
ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 19ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್​ಸಿಬಿ ಆರಂಭಿಕ ಆಟಗಾರ ವಿರಾಟ್ ಕೊಹ್ಲಿಗೆ ಈ ಲೀಗ್​ನ ಚೊಚ್ಚಲ ಶತಕ ಬಾರಿಸಿದ್ದಾರೆ.

2 / 7
ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 72 ಎಸೆತಗಳಲ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ ಅಂದರೆ, ಕೊನೆಯವರೆಗೂ ಔಟಾಗದೆ ಉಳಿದು 113 ರನ್ ಕಲೆಹಾಕಿದರು.

3 / 7
ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಗೆ ಇದು 8ನೇ ಶತಕವಾಗಿದ್ದು, ಈ ಶತಕ ಸಿಡಿಸುವ ಮೂಲಕ ಕೊಹ್ಲಿ, ಐಪಿಎಲ್​ನಲ್ಲಿ ಅಧಿಕ ಶತಕ ಸಿಡಿಸಿದವರ ಪಟ್ಟಿಯಲ್ಲಿ ತಮ್ಮ ಪಾರುಪತ್ಯವನ್ನು ಮುಂದುವರೆಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಕ್ರಿಸ್ ಗೇಲ್ 6 ಶತಕ ಬಾರಿಸಿದ್ದಾರೆ.

4 / 7
ಇದಲ್ಲದೆ ಈ ಪಂದ್ಯ ನಡೆಯುತ್ತಿರುವ ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿಗೆ ಇದು ಮೊದಲ ಐಪಿಎಲ್ ಶತಕವಾಗಿದೆ.

5 / 7
ಹಾಗೆಯೇ ಐಪಿಎಲ್​ನಲ್ಲಿ 8ನೇ ಶತಕ ಬಾರಿಸಿರುವ ವಿರಾಟ್ ಕೊಹ್ಲಿ ಇದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೊಚ್ಚಲ ಶತಕವಾಗಿದೆ.

6 / 7
ಅಲ್ಲದೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ನಾಯಕ ಫಾಫ್ ಡುಪ್ಲೆಸಿಸ್ ಜೊತೆಗೂಡಿ ಮೊದಲ ವಿಕೆಟ್​ಗೆ 125 ರನ್​ಗಳ ಜೊತೆಯಾಟ ಕೂಡ ಹಂಚಿಕೊಂಡರು. ಈ ಸೀಸನ್​ನಲ್ಲಿ ಈ ಇಬ್ಬರಿಂದ ದಾಖಲಾದ ಅತ್ಯಧಿಕ ಜೊತೆಯಾಟ ಕೂಡ ಇದಾಗಿತ್ತು.

7 / 7
ಇನ್ನು ಈ ಪಂದ್ಯದ ಬಗ್ಗೆ ಹೇಳುವುದಾದರೆ.. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿತು. ಈ ಮೂಲಕ ರಾಜಸ್ಥಾನ ತಂಡಕ್ಕೆ 184 ರನ್​ಗಳ ಟಾರ್ಗೆಟ್ ನೀಡಿದೆ.

Published On - 9:05 pm, Sat, 6 April 24