IPL 2024: ಅಜೇಯ ಆಟ; ವಾರ್ನರ್ ಹಿಂದಿಕ್ಕಿ, ಧವನ್ ಹಿಂದೆ ಬಿದ್ದ ಕಿಂಗ್ ಕೊಹ್ಲಿ..!

IPL 2024: ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 59 ಎಸೆತಗಳಲ್ಲಿ ಅಜೇಯ 83 ರನ್ ಗಳಿಸಿದಲ್ಲದೆ ಐಪಿಎಲ್ ಇತಿಹಾಸದಲ್ಲಿ 16 ನೇ ಬಾರಿಗೆ ಆರಂಭಿಕರಾಗಿ ಅಜೇಯರಾಗಿ ಪೆವಿಲಿಯನ್​ಗೆ ಮರಳಿದರು. ಈ ವಿಷಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ಓಪನರ್ ಡೇವಿಡ್ ವಾರ್ನರ್ ಅವರನ್ನು ಹಿಂದಿಕ್ಕಿದರು.

ಪೃಥ್ವಿಶಂಕರ
|

Updated on: Mar 30, 2024 | 5:24 PM

ಭಾರತದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕ್ರಿಕೆಟ್ ಅಖಾಡಕ್ಕಿಳಿದಾಗಲೆಲ್ಲ ಒಂದಿಲ್ಲೊಂದು ಹೊಸ ದಾಖಲೆಗಳು ಅವರ ಖಾತೆ ಸೇರುತ್ತವೆ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಐಪಿಎಲ್‌ನಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದು, ಕೊನೆಯವರೆಗೂ ಅಜೇಯರಾಗಿ ಉಳಿಯುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ.

1 / 6
ಟೀಂ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಕೊಹ್ಲಿ ಐಪಿಎಲ್‌ನಲ್ಲಿ ಮಾತ್ರ ನಾಯಕ ಫಾಫ್ ಡುಪ್ಲೆಸಿಸ್ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಈ ಜೋಡಿ ಐಪಿಎಲ್‌ನ ಅತ್ಯಂತ ಯಶಸ್ವಿ ಆರಂಭಿಕ ಜೋಡಿಗಳಲ್ಲಿ ಒಂದಾಗಿದೆ. ಇದೀಗ ಆರಂಭಿಕ ಬ್ಯಾಟ್ಸ್​ಮನ್ ಆಗಿ ಕೊಹ್ಲಿ ಹೆಸರಿಗೆ ವಿಶೇಷ ಸಾಧನೆಯೊಂದು ಸೇರ್ಪಡೆಯಾಗಿದೆ.

2 / 6
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 59 ಎಸೆತಗಳಲ್ಲಿ ಅಜೇಯ 83 ರನ್ ಗಳಿಸಿದಲ್ಲದೆ ಐಪಿಎಲ್ ಇತಿಹಾಸದಲ್ಲಿ 16 ನೇ ಬಾರಿಗೆ ಆರಂಭಿಕರಾಗಿ ಅಜೇಯರಾಗಿ ಪೆವಿಲಿಯನ್​ಗೆ ಮರಳಿದರು. ಈ ವಿಷಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ಆಸ್ಟ್ರೇಲಿಯನ್ ಓಪನರ್ ಡೇವಿಡ್ ವಾರ್ನರ್ ಅವರನ್ನು ಹಿಂದಿಕ್ಕಿದರು.

3 / 6
ವಾರ್ನರ್ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಒಟ್ಟು 15 ಬಾರಿ ಅಜೇಯರಾಗಿ ಉಳಿದಿದ್ದಾರೆ. 15 ಬಾರಿ ಓಪನರ್ ಆಗಿ ಅಜೇಯರಾಗಿ ಉಳಿದಿರುವ ವಾರ್ನರ್ ಜೊತೆಗೆ ಆರ್​ಸಿಬಿ ಮಾಜಿ ಓಪನರ್ ಕ್ರಿಸ್ ಗೇಲ್ ಕೂಡ ಈ ಪಟ್ಟಿಯಲ್ಲಿದ್ದಾರೆ.

4 / 6
ಅಗ್ರಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಅವರು 23 ಬಾರಿ ಅಜೇಯರಾಗಿ ಉಳಿಯುವ ಮೂಲಕ ಈ ದಾಖಲೆಯನ್ನು ತನ್ನ ಖಾತೆಯಲ್ಲಿ ಉಳಿಸಿಕೊಂಡಿದ್ದಾರೆ. ಇದೀಗ ಧವನ್​ರನ್ನು ಹಿಂದಿಕ್ಕಲು ಕೊಹ್ಲಿ ಇನ್ನು 7 ಪಂದ್ಯಗಳಲ್ಲಿ ಅಜೇಯರಾಗಿ ಉಳಿಯಬೇಕಿದೆ.

5 / 6
ಇದಲ್ಲದೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಆರ್‌ಸಿಬಿ ಪರ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾದರು. ಈ ವಿಷಯದಲ್ಲಿ ಅವರು ಕ್ರಿಸ್ ಗೇಲ್ (239) ಮತ್ತು ಎಬಿ ಡಿವಿಲಿಯರ್ಸ್ (238) ಅವರನ್ನು ಹಿಂದಿಕ್ಕಿದ್ದಾರೆ. ಕೊಹ್ಲಿ ತಮ್ಮ ಹೆಸರಿನಲ್ಲಿ 241 ಸಿಕ್ಸರ್‌ಗಳನ್ನು ದಾಖಲಿಸಿದ್ದಾರೆ.

6 / 6
Follow us
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!