IPL 2024: ಅಜೇಯ ಆಟ; ವಾರ್ನರ್ ಹಿಂದಿಕ್ಕಿ, ಧವನ್ ಹಿಂದೆ ಬಿದ್ದ ಕಿಂಗ್ ಕೊಹ್ಲಿ..!
IPL 2024: ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 59 ಎಸೆತಗಳಲ್ಲಿ ಅಜೇಯ 83 ರನ್ ಗಳಿಸಿದಲ್ಲದೆ ಐಪಿಎಲ್ ಇತಿಹಾಸದಲ್ಲಿ 16 ನೇ ಬಾರಿಗೆ ಆರಂಭಿಕರಾಗಿ ಅಜೇಯರಾಗಿ ಪೆವಿಲಿಯನ್ಗೆ ಮರಳಿದರು. ಈ ವಿಷಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ಓಪನರ್ ಡೇವಿಡ್ ವಾರ್ನರ್ ಅವರನ್ನು ಹಿಂದಿಕ್ಕಿದರು.
1 / 6
ಭಾರತದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕ್ರಿಕೆಟ್ ಅಖಾಡಕ್ಕಿಳಿದಾಗಲೆಲ್ಲ ಒಂದಿಲ್ಲೊಂದು ಹೊಸ ದಾಖಲೆಗಳು ಅವರ ಖಾತೆ ಸೇರುತ್ತವೆ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಐಪಿಎಲ್‌ನಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದು, ಕೊನೆಯವರೆಗೂ ಅಜೇಯರಾಗಿ ಉಳಿಯುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ.
2 / 6
ಟೀಂ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಕೊಹ್ಲಿ ಐಪಿಎಲ್‌ನಲ್ಲಿ ಮಾತ್ರ ನಾಯಕ ಫಾಫ್ ಡುಪ್ಲೆಸಿಸ್ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿಯುತ್ತಾರೆ. ಇತ್ತೀಚಿನ ದಿನಗಳಲ್ಲಿ ಈ ಜೋಡಿ ಐಪಿಎಲ್‌ನ ಅತ್ಯಂತ ಯಶಸ್ವಿ ಆರಂಭಿಕ ಜೋಡಿಗಳಲ್ಲಿ ಒಂದಾಗಿದೆ. ಇದೀಗ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಕೊಹ್ಲಿ ಹೆಸರಿಗೆ ವಿಶೇಷ ಸಾಧನೆಯೊಂದು ಸೇರ್ಪಡೆಯಾಗಿದೆ.
3 / 6
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 59 ಎಸೆತಗಳಲ್ಲಿ ಅಜೇಯ 83 ರನ್ ಗಳಿಸಿದಲ್ಲದೆ ಐಪಿಎಲ್ ಇತಿಹಾಸದಲ್ಲಿ 16 ನೇ ಬಾರಿಗೆ ಆರಂಭಿಕರಾಗಿ ಅಜೇಯರಾಗಿ ಪೆವಿಲಿಯನ್ಗೆ ಮರಳಿದರು. ಈ ವಿಷಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ಆಸ್ಟ್ರೇಲಿಯನ್ ಓಪನರ್ ಡೇವಿಡ್ ವಾರ್ನರ್ ಅವರನ್ನು ಹಿಂದಿಕ್ಕಿದರು.
4 / 6
ವಾರ್ನರ್ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಒಟ್ಟು 15 ಬಾರಿ ಅಜೇಯರಾಗಿ ಉಳಿದಿದ್ದಾರೆ. 15 ಬಾರಿ ಓಪನರ್ ಆಗಿ ಅಜೇಯರಾಗಿ ಉಳಿದಿರುವ ವಾರ್ನರ್ ಜೊತೆಗೆ ಆರ್‌ಸಿಬಿ ಮಾಜಿ ಓಪನರ್ ಕ್ರಿಸ್ ಗೇಲ್ ಕೂಡ ಈ ಪಟ್ಟಿಯಲ್ಲಿದ್ದಾರೆ.
5 / 6
ಅಗ್ರಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಅವರು 23 ಬಾರಿ ಅಜೇಯರಾಗಿ ಉಳಿಯುವ ಮೂಲಕ ಈ ದಾಖಲೆಯನ್ನು ತನ್ನ ಖಾತೆಯಲ್ಲಿ ಉಳಿಸಿಕೊಂಡಿದ್ದಾರೆ. ಇದೀಗ ಧವನ್ರನ್ನು ಹಿಂದಿಕ್ಕಲು ಕೊಹ್ಲಿ ಇನ್ನು 7 ಪಂದ್ಯಗಳಲ್ಲಿ ಅಜೇಯರಾಗಿ ಉಳಿಯಬೇಕಿದೆ.
6 / 6
ಇದಲ್ಲದೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಆರ್‌ಸಿಬಿ ಪರ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾದರು. ಈ ವಿಷಯದಲ್ಲಿ ಅವರು ಕ್ರಿಸ್ ಗೇಲ್ (239) ಮತ್ತು ಎಬಿ ಡಿವಿಲಿಯರ್ಸ್ (238) ಅವರನ್ನು ಹಿಂದಿಕ್ಕಿದ್ದಾರೆ. ಕೊಹ್ಲಿ ತಮ್ಮ ಹೆಸರಿನಲ್ಲಿ 241 ಸಿಕ್ಸರ್‌ಗಳನ್ನು ದಾಖಲಿಸಿದ್ದಾರೆ.