IPL 2024: ವಿರಾಟ್ ಕೊಹ್ಲಿ ಆರ್​ಸಿಬಿ ಕ್ಯಾಂಪ್ ಸೇರುವುದು ಯಾವಾಗ?: ಹೊರಬಿತ್ತು ದೊಡ್ಡ ಸುದ್ದಿ

|

Updated on: Mar 14, 2024 | 7:27 AM

Virat Kohli, RCB 2024: ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಪ್ರತಿನಿಧಿಸುತ್ತಿರುವ ವಿರಾಟ್ ಕೊಹ್ಲಿಯ ಆಗಮನಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಬಂದಿರುವ ಮಾಹಿತಿಯ ಪ್ರಕಾರ, ಮಾರ್ಚ್ 17 ರ ಮೊದಲು ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ಶಿಬಿರವನ್ನು ಸೇರಿಕೊಳ್ಳಲಿದ್ದಾರೆ.

1 / 6
ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಜನವರಿಯಿಂದ ಕ್ರಿಕೆಟ್​ನಿಂದ ವಿರಾಮ ಪಡೆದಿದ್ದಾರೆ. ಭಾರತದ ದಂತಕಥೆ ಇಂಗ್ಲೆಂಡ್ ವಿರುದ್ಧದ ಆರಂಭಿಕ ಟೆಸ್ಟ್ ಪಂದ್ಯಕ್ಕಾಗಿ ಹೈದರಾಬಾದ್‌ಗೆ ಬಂದಿಳಿದಿದ್ದರು. ಆದರೆ, ನಂತರ ಮೊದಲ ಎರಡು ಟೆಸ್ಟ್‌ಗಳಿಂದ ಹಿಂದೆ ಸರಿದಿದ್ದರು. ಬಳಿಕ ಅವರು ಸಂಪೂರ್ಣ ಸರಣಿಗೆ ಅಲಭ್ಯರಾದರು. ಆ ಬಳಿಕ ಕೊಹ್ಲಿ ಕಮ್​ಬ್ಯಾಕ್ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲ.

2 / 6
ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಪ್ರತಿನಿಧಿಸುತ್ತಿರುವ ವಿರಾಟ್ ಕೊಹ್ಲಿಯ ಆಗಮನಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಬಂದಿರುವ ಮಾಹಿತಿಯ ಪ್ರಕಾರ ಆರ್‌ಸಿಬಿಯ ಮೊದಲ ಪಂದ್ಯದಿಂದ ಕೊಹ್ಲಿ ಲಭ್ಯವಾಗಲಿದ್ದು, ಅಭಿಮಾನಿಗಳಿಗೆ ಸಂತಸದ ಸುದ್ದಿ ಸಿಕ್ಕಿದೆ.

3 / 6
ಮಾರ್ಚ್ 17 ರ ಮೊದಲು ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ಶಿಬಿರವನ್ನು ಸೇರಿಕೊಳ್ಳಲಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಅವರು ಮಾರ್ಚ್ 19 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್​ಸಿಬಿ ಅನ್‌ಬಾಕ್ಸಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ಕೆಲ ಮಹತ್ವದ ಘೋಷಣೆ ಆಗುವ ಸಾಧ್ಯತೆ ಇದೆ.

4 / 6
ವಿರಾಟ್ ಕೊಹ್ಲಿ ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡುವ ಮೂಲಕ ಮೈದಾನದಕ್ಕೆ ಮರಳಲಿದ್ದಾರೆ. ಎಂಎಸ್ ಧೋನಿ ನೇತೃತ್ವದ ಸಿಎಸ್‌ಕೆ ಶುಕ್ರವಾರ (ಮಾರ್ಚ್ 22) ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಋತುವಿನ ಆರಂಭಿಕ ಪಂದ್ಯದಲ್ಲಿ ಆರ್‌ಸಿಬಿಯೊಂದಿಗೆ ಸೆಣೆಸಾಟ ನಡೆಸಲಿದೆ.

5 / 6
RCB ಮುಂದಿನ ಪಂದ್ಯ ಮಾರ್ಚ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ. ಫಾಫ್ ಡು ಪ್ಲೆಸಿಸ್ ನೇತೃತ್ವದ ತಂಡವು ಮಾರ್ಚ್ 29 ರಂದು ತಮ್ಮ ಮೂರನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಅನ್ನು ಎದುರಿಸಲಿದೆ. ಏಪ್ರಿಲ್‌ 2 ರಂದು ಲಕ್ನೋ ಸೂಪರ್ ಜೈಂಟ್ಸ್‌, ಏಪ್ರಿಲ್ 6 ರಂದು ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ. ಬಿಸಿಸಿಐ ಇದುವರೆಗೆ ಮೊದಲ 21 ಐಪಿಎಲ್ ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಿದೆ.

6 / 6
2008ರಲ್ಲಿ ಐಪಿಎಲ್‌ನ ಮೊದಲ ಸೀಸನ್‌ನಲ್ಲಿ ಕೊನೆಯ ಸ್ಥಾನ ಪಡೆದಿದ್ದ ಬೆಂಗಳೂರು, ಮುಂದಿನ ಸೀಸನ್‌ನಲ್ಲಿ ಫೈನಲ್‌ಗೆ ತಲುಪಿ ಸೋತಿತ್ತು. 2011ರಲ್ಲಿ ಮತ್ತೊಮ್ಮೆ ತಂಡ ಫೈನಲ್‌ನಲ್ಲಿ ಸೋತಿತ್ತು. ಅಂದಿನಿಂದ, ತಂಡವು ಎಂದಿಗೂ ಸ್ಥಿರವಾಗಿಲ್ಲ. 2016 ರಲ್ಲಿ ಒಮ್ಮೆ ಮಾತ್ರ ಫೈನಲ್‌ಗೆ ತಲುಪಿದೆ. ಈವರೆಗೆ ಕಪ್ ಗೆಲ್ಲದ ಕೆಲವೇ ತಂಡಗಳಲ್ಲಿ ಆರ್​ಸಿಬಿ ಕೂಡ ಒಂದಾಗಿದೆ.