- Kannada News Photo gallery Cricket photos IPL 2024 Why Rohit Sharma played as Impact Player in MI vs KKR? Piyush Chawla reveals reason
IPL 2024: ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದಕ್ಕೆ ಕಾರಣ ಬಹಿರಂಗ
IPL 2024 Rohit Sharma: ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲು ಕಾರಣ ಏನು ಎಂಬುದು ಬಹಿರಂಗಗೊಂಡಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಅನುಭವಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಈ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ.
Updated on: May 04, 2024 | 4:47 PM

ಶುಕ್ರವಾರ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 51 ನೇ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ 24 ರನ್‌ಗಳಿಂದ ಮಣಿಸಿತು. ಈ ಗೆಲುವಿನೊಂದಿಗೆ ಕೆಕೆಆರ್ ಪ್ಲೇಆಫ್‌ಗೆ ಸನಿಹವಾದರೆ, ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದೆ.

ಇನ್ನು ಈ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಆಡುವ ಹನ್ನೊಂದರ ಬಳಗದಲ್ಲಿ ಆಯ್ಕೆ ಮಾಡಿರಲಿಲ್ಲ. ಬದಲಿಗೆ ರೋಹಿತ್ರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸಲಾಗಿತ್ತು. ಮೊದಲಿಗೆ ರೋಹಿತ್ರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿಸಿದ್ದಕ್ಕೆ ತಂಡದ ನಾಯಕ ಹಾಗೂ ಆಡಳಿತ ಮಂಡಳಿ ವಿರುದ್ಧ ಅಭಿಮಾನಿಗಳು ಗರಂ ಆಗಿದ್ದರು.

ತಂಡವನ್ನು ದಾಖಲೆಯ ಐದೈದು ಬಾರಿ ಚಾಂಪಿಯನ್ ಮಾಡಿದ್ದ ರೋಹಿತ್ ಶರ್ಮಾರನ್ನು ಮುಂಬೈ ಫ್ರಾಂಚೈಸಿ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅಭಿಮಾನಿಗಳು ದೂರಿದ್ದರು. ಅಲ್ಲದೆ ನಾಯಕ ಹಾರ್ದಿಕ್ ಪಾಂಡ್ಯರ ಈ ನಿರ್ಧಾರದ ವಿರುದ್ಧವೂ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದರು.

ಆದರೀಗ ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲು ಕಾರಣ ಏನು ಎಂಬುದು ಬಹಿರಂಗಗೊಂಡಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಅನುಭವಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಈ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಪಿಯೂಷ್ ಚಾವ್ಲಾ, ರೋಹಿತ್ ಶರ್ಮಾ ಬೆನ್ನು ನೋವಿನ ಕಾರಣ ಮುಖ್ಯ ತಂಡದಲ್ಲಿ ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರನ್ನು ಕೇವಲ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬ್ಯಾಟಿಂಗ್ಗೆ ಇಳಿಸಲಾಯಿತು ಎಂದಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದ್ದ ರೋಹಿತ್ ಶರ್ಮಾ ಬ್ಯಾಟಿಂಗ್ನಲ್ಲಿ ಕಮಾಲ್ ಮಾಡಲಿಲ್ಲ. ಆಡಿದ 12 ಎಸೆತಗಳಲ್ಲಿ 1 ಸಿಕ್ಸರ್ ನೆರವಿನಿಂದ ಕೇವಲ 11 ರನ್ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ವಾಸ್ತವವಾಗಿ ಈ ಸೀಸನ್ನಲ್ಲಿ ರೋಹಿತ್ ಶರ್ಮಾ ಅವರ ಫಾರ್ಮ್ ಉತ್ತಮವಾಗಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 4, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8, ರಾಜಸ್ಥಾನ ರಾಯಲ್ಸ್ ವಿರುದ್ಧ 6 ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ 36 ರನ್ ಗಳಿಸಿದರು. ರೋಹಿತ್ ಶರ್ಮಾ ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ 32.60 ಸರಾಸರಿ 326 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 1 ಶತಕವೂ ಸೇರಿದೆ.




