AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದಕ್ಕೆ ಕಾರಣ ಬಹಿರಂಗ

IPL 2024 Rohit Sharma: ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲು ಕಾರಣ ಏನು ಎಂಬುದು ಬಹಿರಂಗಗೊಂಡಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಅನುಭವಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಈ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಪೃಥ್ವಿಶಂಕರ
|

Updated on: May 04, 2024 | 4:47 PM

Share
ಶುಕ್ರವಾರ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 51 ನೇ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್  24 ರನ್‌ಗಳಿಂದ ಮಣಿಸಿತು. ಈ ಗೆಲುವಿನೊಂದಿಗೆ ಕೆಕೆಆರ್ ಪ್ಲೇಆಫ್‌ಗೆ ಸನಿಹವಾದರೆ, ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್‌ ಹಾದಿ ಮತ್ತಷ್ಟು ಕಠಿಣವಾಗಿದೆ.

1 / 7
ಇನ್ನು ಈ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಆಡುವ ಹನ್ನೊಂದರ ಬಳಗದಲ್ಲಿ ಆಯ್ಕೆ ಮಾಡಿರಲಿಲ್ಲ. ಬದಲಿಗೆ ರೋಹಿತ್​ರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸಲಾಗಿತ್ತು. ಮೊದಲಿಗೆ ರೋಹಿತ್​ರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿಸಿದ್ದಕ್ಕೆ ತಂಡದ ನಾಯಕ ಹಾಗೂ ಆಡಳಿತ ಮಂಡಳಿ ವಿರುದ್ಧ ಅಭಿಮಾನಿಗಳು ಗರಂ ಆಗಿದ್ದರು.

2 / 7
ತಂಡವನ್ನು ದಾಖಲೆಯ ಐದೈದು ಬಾರಿ ಚಾಂಪಿಯನ್ ಮಾಡಿದ್ದ ರೋಹಿತ್ ಶರ್ಮಾರನ್ನು ಮುಂಬೈ ಫ್ರಾಂಚೈಸಿ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅಭಿಮಾನಿಗಳು ದೂರಿದ್ದರು. ಅಲ್ಲದೆ ನಾಯಕ ಹಾರ್ದಿಕ್ ಪಾಂಡ್ಯರ ಈ ನಿರ್ಧಾರದ ವಿರುದ್ಧವೂ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದರು.

3 / 7
ಆದರೀಗ ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲು ಕಾರಣ ಏನು ಎಂಬುದು ಬಹಿರಂಗಗೊಂಡಿದೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಅನುಭವಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಈ ನಿರ್ಧಾರದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ.

4 / 7
ಪಂದ್ಯ ಮುಗಿದ ಬಳಿಕ ಮಾತನಾಡಿದ ತಂಡದ ಪಿಯೂಷ್ ಚಾವ್ಲಾ, ರೋಹಿತ್ ಶರ್ಮಾ ಬೆನ್ನು ನೋವಿನ ಕಾರಣ ಮುಖ್ಯ ತಂಡದಲ್ಲಿ ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರನ್ನು ಕೇವಲ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬ್ಯಾಟಿಂಗ್​ಗೆ ಇಳಿಸಲಾಯಿತು ಎಂದಿದ್ದಾರೆ.

5 / 7
ಇನ್ನು ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದ್ದ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲಿ ಕಮಾಲ್ ಮಾಡಲಿಲ್ಲ. ಆಡಿದ 12 ಎಸೆತಗಳಲ್ಲಿ 1 ಸಿಕ್ಸರ್ ನೆರವಿನಿಂದ ಕೇವಲ 11 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

6 / 7
ವಾಸ್ತವವಾಗಿ ಈ ಸೀಸನ್​ನಲ್ಲಿ ರೋಹಿತ್ ಶರ್ಮಾ ಅವರ ಫಾರ್ಮ್​ ಉತ್ತಮವಾಗಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 4, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8, ರಾಜಸ್ಥಾನ ರಾಯಲ್ಸ್ ವಿರುದ್ಧ 6 ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ 36 ರನ್ ಗಳಿಸಿದರು. ರೋಹಿತ್ ಶರ್ಮಾ ಇದುವರೆಗೆ ಆಡಿರುವ 11 ಪಂದ್ಯಗಳಲ್ಲಿ 32.60 ಸರಾಸರಿ 326 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 1 ಶತಕವೂ ಸೇರಿದೆ.

7 / 7
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ

ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ

ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್

ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್

Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು