IPL 2024: ಐಪಿಎಲ್ ಯಾವಾಗ ಶುರು? ಇಲ್ಲಿದೆ ಉತ್ತರ

IPL 2024 Auction: ಈ ಬಾರಿಯ ಐಪಿಎಲ್​ಗಾಗಿ ಡಿಸೆಂಬರ್ 19 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ದುಬೈನಲ್ಲಿ ನಡೆಯಲಿರುವ ಈ ಮಿನಿ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇತ್ತ 10 ತಂಡಗಳಲ್ಲಿ ಒಟ್ಟು 77 ಸ್ಲಾಟ್​ಗಳು ಮಾತ್ರ ಖಾಲಿಯಿದ್ದು, ಹೀಗಾಗಿ ಕೆಲವೇ ಕೆಲವು ಆಟಗಾರರಿಗೆ ಮಾತ್ರ ಅವಕಾಶ ದೊರೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 10, 2023 | 5:38 PM

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಯಾವಾಗ ಶುರು? ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಈ ಬಾರಿಯ ಐಪಿಎಲ್​ ಮಾರ್ಚ್​ ತಿಂಗಳಾಂತ್ಯದಲ್ಲಿ ಶುರುವಾಗಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

1 / 5
ಐಪಿಎಲ್ ಸೀಸನ್ 17 ಮಾರ್ಚ್ ಅಂತ್ಯದಲ್ಲಿ ಪ್ರಾರಂಭವಾಗಲಿದೆ. ಹಾಗೆಯೇ ಮೇ ತಿಂಗಳಾಂತ್ಯ ಅಥವಾ ಜೂನ್ ಮೊದಲ ವಾರದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ.

2 / 5
ಇದಾಗ್ಯೂ ಡೇಟ್ ಫಿಕ್ಸ್ ಮಾಡಲಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಮುಂಬರುವ ಲೋಕಸಭಾ ಚುನಾವಣೆ. ಚುನಾವಣಾ ಆಯೋಗ ಎಲೆಕ್ಷನ್ ದಿನಾಂಕವನ್ನು ಘೋಷಿಸಿದ ಬಳಿಕವಷ್ಟೇ ಐಪಿಎಲ್ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. ಹೀಗಾಗಿ ಚುನಾವಣಾ ಘೋಷಣೆಗಾಗಿ ಐಪಿಎಲ್​ ಗವರ್ನರ್ ಕೌನ್ಸಿಲ್ ಕಾಯುತ್ತಿದೆ.

3 / 5
ಇನ್ನು ಈ ಬಾರಿಯ ಐಪಿಎಲ್​ಗಾಗಿ ಡಿಸೆಂಬರ್ 19 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ದುಬೈನಲ್ಲಿ ನಡೆಯಲಿರುವ ಈ ಮಿನಿ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ.

4 / 5
ಐಪಿಎಲ್​ಗೆ ಹೆಸರು ನೀಡಿರುವ 1166 ಆಟಗಾರರ ಪಟ್ಟಿಯನ್ನು ಶೀಘ್ರದಲ್ಲೇ ಶಾರ್ಟ್ ಲೀಸ್ಟ್ ಮಾಡಲಾಗುತ್ತದೆ. ಹೀಗೆ ಶಾರ್ಟ್ ಲೀಸ್ಟ್ ಮಾಡಿದ ಫೈನಲ್ ಪಟ್ಟಿಯನ್ನು ಪ್ರಕಟಿಸಲಿದ್ದು, ಇದರಲ್ಲಿ ಕಾಣಿಸಿಕೊಂಡ ಆಟಗಾರರ ಹೆಸರು ಮಾತ್ರ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ.

5 / 5
Follow us