ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಯಾವಾಗ ಶುರು? ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಈ ಬಾರಿಯ ಐಪಿಎಲ್ ಮಾರ್ಚ್ ತಿಂಗಳಾಂತ್ಯದಲ್ಲಿ ಶುರುವಾಗಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.
ಐಪಿಎಲ್ ಸೀಸನ್ 17 ಮಾರ್ಚ್ ಅಂತ್ಯದಲ್ಲಿ ಪ್ರಾರಂಭವಾಗಲಿದೆ. ಹಾಗೆಯೇ ಮೇ ತಿಂಗಳಾಂತ್ಯ ಅಥವಾ ಜೂನ್ ಮೊದಲ ವಾರದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಜಯ್ ಶಾ ಖಚಿತಪಡಿಸಿದ್ದಾರೆ.
ಇದಾಗ್ಯೂ ಡೇಟ್ ಫಿಕ್ಸ್ ಮಾಡಲಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಮುಂಬರುವ ಲೋಕಸಭಾ ಚುನಾವಣೆ. ಚುನಾವಣಾ ಆಯೋಗ ಎಲೆಕ್ಷನ್ ದಿನಾಂಕವನ್ನು ಘೋಷಿಸಿದ ಬಳಿಕವಷ್ಟೇ ಐಪಿಎಲ್ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. ಹೀಗಾಗಿ ಚುನಾವಣಾ ಘೋಷಣೆಗಾಗಿ ಐಪಿಎಲ್ ಗವರ್ನರ್ ಕೌನ್ಸಿಲ್ ಕಾಯುತ್ತಿದೆ.
ಇನ್ನು ಈ ಬಾರಿಯ ಐಪಿಎಲ್ಗಾಗಿ ಡಿಸೆಂಬರ್ 19 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ದುಬೈನಲ್ಲಿ ನಡೆಯಲಿರುವ ಈ ಮಿನಿ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ.
ಐಪಿಎಲ್ಗೆ ಹೆಸರು ನೀಡಿರುವ 1166 ಆಟಗಾರರ ಪಟ್ಟಿಯನ್ನು ಶೀಘ್ರದಲ್ಲೇ ಶಾರ್ಟ್ ಲೀಸ್ಟ್ ಮಾಡಲಾಗುತ್ತದೆ. ಹೀಗೆ ಶಾರ್ಟ್ ಲೀಸ್ಟ್ ಮಾಡಿದ ಫೈನಲ್ ಪಟ್ಟಿಯನ್ನು ಪ್ರಕಟಿಸಲಿದ್ದು, ಇದರಲ್ಲಿ ಕಾಣಿಸಿಕೊಂಡ ಆಟಗಾರರ ಹೆಸರು ಮಾತ್ರ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ.