- Kannada News Photo gallery Cricket photos IPL 2024 Yuzvendra Chahal broke Shane Warne's 13 year old record in ipl
IPL 2024: 13 ವರ್ಷಗಳ ಹಳೆಯ ದಾಖಲೆ ಮುರಿದ ಯುಜ್ವೇಂದ್ರ ಚಹಾಲ್..!
IPL 2024: ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ, ಯುಜ್ವೇಂದ್ರ ಚಹಾಲ್ ತಮ್ಮ 4 ಓವರ್‌ಗಳಲ್ಲಿ 43 ರನ್ ನೀಡಿ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಚಹಲ್ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ನಾಯಕ ಶೇನ್ ವಾರ್ನ್ ಅವರ 13 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು.
Updated on: Apr 11, 2024 | 6:36 PM

17ನೇ ಆವೃತ್ತಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್, ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 10 ವಿಕೆಟ್ಗಳನ್ನು ಪಡೆದು ಪ್ರಸ್ತುತ ಪರ್ಪಲ್ ಕ್ಯಾಪ್ ಅನ್ನು ತನ್ನ ಬಳಿಯೇ ಇರಿಸಿಕೊಂಡಿದ್ದಾರೆ.

ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ, ಯುಜ್ವೇಂದ್ರ ಚಹಾಲ್ ತಮ್ಮ 4 ಓವರ್‌ಗಳಲ್ಲಿ 43 ರನ್ ನೀಡಿ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಚಹಲ್ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ನಾಯಕ ಶೇನ್ ವಾರ್ನ್ ಅವರ 13 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು.

ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿರುವ ಯುಜ್ವೇಂದ್ರ ಚಾಹಲ್ ಇದೀಗ ರಾಜಸ್ಥಾನ ರಾಯಲ್ಸ್ ಪರ ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.

2022 ರ ಐಪಿಎಲ್ನಿಂದ ರಾಜಸ್ಥಾನ ತಂಡದ ಪರ ಆಡುತ್ತಿರುವ ಚಾಹಲ್ ಅಂದಿನಿಂದ ಈ ತಂಡದ ಪರ 36 ಪಂದ್ಯಗಳನ್ನು ಆಡಿದ್ದು 58 ವಿಕೆಟ್ಗಳನ್ನು ಪಡೆದಿದ್ದಾರೆ. ಈ ಮೂಲಕ ತಂಡದ ಮಾಜಿ ನಾಯಕ ಶೇನ್ ವಾರ್ನ್ ಅವರ ದಾಖಲೆಯನ್ನು ಮುರಿದಿದ್ದಾರೆ.

2008 ರಿಂದ 2011 ರವರೆಗೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನಾಗಿ ಆಡಿದ್ದ ಶೇನ್ ವಾರ್ನ್ ಈ ತಂಡದ ಪರ ಆಡಿದ್ದ 55 ಪಂದ್ಯಗಳಲ್ಲಿ 57 ವಿಕೆಟ್ ಪಡೆದಿದ್ದರು. ಈ ಮೂಲಕ ಈ ತಂಡದ ಪರ ಅಧಿಕ ವಿಕೆಟ್ ಪಡೆದ ಬೌಲರ್ಗಳ ಪೈಕಿ ಮೂರನೇ ಸ್ಥಾನದಲ್ಲಿದ್ದರು. ಇದೀಗ ಆ ಸ್ಥಾನವನ್ನು ಚಾಹಲ್ ಆಕ್ರಮಿಸಿಕೊಂಡಿದ್ದಾರೆ.

ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಪ್ರಸ್ತುತ 76 ಪಂದ್ಯಗಳಲ್ಲಿ 65 ವಿಕೆಟ್ ಪಡೆದಿರುವ ಸಿದ್ಧಾರ್ಥ್ ತ್ರಿವೇದಿ ಹೆಸರಿನಲ್ಲಿದೆ. ಎರಡನೇ ಸ್ಥಾನದಲ್ಲಿ ಶೇನ್ ವ್ಯಾಟ್ಸನ್ 78 ಪಂದ್ಯಗಳಲ್ಲಿ 61 ವಿಕೆಟ್ ಪಡೆದಿದ್ದಾರೆ.

ಯುಜುವೇಂದ್ರ ಚಹಾಲ್ ಪ್ರಸ್ತುತ ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇದುವರೆಗೆ 150 ಪಂದ್ಯಗಳನ್ನಾಡಿರುವ ಚಾಹಲ್ 21.25 ಸರಾಸರಿಯಲ್ಲಿ 197 ವಿಕೆಟ್‌ಗಳನ್ನು ಪಡೆದಿದ್ದಾರೆ.

ಮುಂದಿನ ಪಂದ್ಯಗಳಲ್ಲಿ ಚಹಾಲ್ ಇನ್ನು ಕೇವಲ 3 ವಿಕೆಟ್ಗಳನ್ನು ಪಡೆದರೆ, ಐಪಿಎಲ್‌ನಲ್ಲಿ 200 ವಿಕೆಟ್ಗಳನ್ನು ಪೂರೈಸಿಲಿದ್ದಾರೆ. ಚಹಾಲ್ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾದರೆ, ಐಪಿಎಲ್‌ನಲ್ಲಿ ಈ ಇತಿಹಾಸ ನಿರ್ಮಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.




