IPL 2024: 13 ವರ್ಷಗಳ ಹಳೆಯ ದಾಖಲೆ ಮುರಿದ ಯುಜ್ವೇಂದ್ರ ಚಹಾಲ್..!

|

Updated on: Apr 11, 2024 | 6:36 PM

IPL 2024: ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ, ಯುಜ್ವೇಂದ್ರ ಚಹಾಲ್ ತಮ್ಮ 4 ಓವರ್‌ಗಳಲ್ಲಿ 43 ರನ್ ನೀಡಿ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಚಹಲ್ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ನಾಯಕ ಶೇನ್ ವಾರ್ನ್ ಅವರ 13 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು.

1 / 8
17ನೇ ಆವೃತ್ತಿಯ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್, ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 10 ವಿಕೆಟ್ಗಳನ್ನು ಪಡೆದು ಪ್ರಸ್ತುತ ಪರ್ಪಲ್ ಕ್ಯಾಪ್ ಅನ್ನು ತನ್ನ ಬಳಿಯೇ ಇರಿಸಿಕೊಂಡಿದ್ದಾರೆ.

2 / 8
ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ, ಯುಜ್ವೇಂದ್ರ ಚಹಾಲ್ ತಮ್ಮ 4 ಓವರ್‌ಗಳಲ್ಲಿ 43 ರನ್ ನೀಡಿ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಚಹಲ್ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ನಾಯಕ ಶೇನ್ ವಾರ್ನ್ ಅವರ 13 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು.

3 / 8
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿರುವ ಯುಜ್ವೇಂದ್ರ ಚಾಹಲ್ ಇದೀಗ ರಾಜಸ್ಥಾನ ರಾಯಲ್ಸ್ ಪರ ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.

4 / 8
2022 ರ ಐಪಿಎಲ್​ನಿಂದ ರಾಜಸ್ಥಾನ ತಂಡದ ಪರ ಆಡುತ್ತಿರುವ ಚಾಹಲ್ ಅಂದಿನಿಂದ ಈ ತಂಡದ ಪರ 36 ಪಂದ್ಯಗಳನ್ನು ಆಡಿದ್ದು 58 ವಿಕೆಟ್​ಗಳನ್ನು ಪಡೆದಿದ್ದಾರೆ. ಈ ಮೂಲಕ ತಂಡದ ಮಾಜಿ ನಾಯಕ ಶೇನ್ ವಾರ್ನ್ ಅವರ ದಾಖಲೆಯನ್ನು ಮುರಿದಿದ್ದಾರೆ.

5 / 8
2008 ರಿಂದ 2011 ರವರೆಗೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕನಾಗಿ ಆಡಿದ್ದ ಶೇನ್ ವಾರ್ನ್ ಈ ತಂಡದ ಪರ ಆಡಿದ್ದ 55 ಪಂದ್ಯಗಳಲ್ಲಿ 57 ವಿಕೆಟ್ ಪಡೆದಿದ್ದರು. ಈ ಮೂಲಕ ಈ ತಂಡದ ಪರ ಅಧಿಕ ವಿಕೆಟ್ ಪಡೆದ ಬೌಲರ್​ಗಳ ಪೈಕಿ ಮೂರನೇ ಸ್ಥಾನದಲ್ಲಿದ್ದರು. ಇದೀಗ ಆ ಸ್ಥಾನವನ್ನು ಚಾಹಲ್ ಆಕ್ರಮಿಸಿಕೊಂಡಿದ್ದಾರೆ.

6 / 8
ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಪ್ರಸ್ತುತ 76 ಪಂದ್ಯಗಳಲ್ಲಿ 65 ವಿಕೆಟ್ ಪಡೆದಿರುವ ಸಿದ್ಧಾರ್ಥ್ ತ್ರಿವೇದಿ ಹೆಸರಿನಲ್ಲಿದೆ. ಎರಡನೇ ಸ್ಥಾನದಲ್ಲಿ ಶೇನ್ ವ್ಯಾಟ್ಸನ್ 78 ಪಂದ್ಯಗಳಲ್ಲಿ 61 ವಿಕೆಟ್ ಪಡೆದಿದ್ದಾರೆ.

7 / 8
ಯುಜುವೇಂದ್ರ ಚಹಾಲ್ ಪ್ರಸ್ತುತ ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇದುವರೆಗೆ 150 ಪಂದ್ಯಗಳನ್ನಾಡಿರುವ ಚಾಹಲ್ 21.25 ಸರಾಸರಿಯಲ್ಲಿ 197 ವಿಕೆಟ್‌ಗಳನ್ನು ಪಡೆದಿದ್ದಾರೆ.

8 / 8
ಮುಂದಿನ ಪಂದ್ಯಗಳಲ್ಲಿ ಚಹಾಲ್ ಇನ್ನು ಕೇವಲ 3 ವಿಕೆಟ್​ಗಳನ್ನು ಪಡೆದರೆ, ಐಪಿಎಲ್​ನಲ್ಲಿ 200 ವಿಕೆಟ್‌ಗಳನ್ನು ಪೂರೈಸಿಲಿದ್ದಾರೆ. ಚಹಾಲ್ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾದರೆ, ಐಪಿಎಲ್‌ನಲ್ಲಿ ಈ ಇತಿಹಾಸ ನಿರ್ಮಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.