Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಆರ್​ಸಿಬಿ- ಗುಜರಾತ್ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

RCB vs GT IPL 2025 Match 14 Head-to-Head: ಐಪಿಎಲ್ 2025 ರ 14ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಸೀಸನ್​ನಲ್ಲಿ ಆರ್‌ಸಿಬಿ ಉತ್ತಮ ಪ್ರದರ್ಶನ ನೀಡುತ್ತಿದ್ದರೆ, ಗುಜರಾತ್​ಗೆ ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ಹೆಡ್-ಟು-ಹೆಡ್ ದಾಖಲೆಯಲ್ಲಿ ಆರ್‌ಸಿಬಿ ಮೇಲುಗೈ ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆ ಎಂಬುದು ಕುತೂಹಲಕಾರಿಯಾಗಿದೆ.

ಪೃಥ್ವಿಶಂಕರ
|

Updated on: Apr 01, 2025 | 8:59 PM

ಐಪಿಎಲ್ 2025 ರ 14 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಆರ್‌ಸಿಬಿಯ ತವರು ಮೈದಾನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ರಜತ್ ಪಾಟಿದಾರ್ ನಾಯಕತ್ವದಲ್ಲಿ, ಆರ್‌ಸಿಬಿ ಈ ಸೀಸನ್​ನಲ್ಲಿ ಉತ್ತಮ ಆರಂಭವನ್ನು ಮಾಡಿದೆ.

1 / 7
ಆರ್​ಸಿಬಿ ತಂಡವು ಇಲ್ಲಿಯವರೆಗೆ ಎರಡು ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆದ್ದಿದೆ. ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಲೀಗ್​ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿದ್ದ ಆರ್​​ಸಿಬಿ, ಆ ಬಳಿಕ ಚೆಪಾಕ್‌ನಲ್ಲಿ ನಡೆದ 2ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿತ್ತು

2 / 7
ಇತ್ತ ಗುಜರಾತ್ ಟೈಟಾನ್ಸ್‌ಗೆ ಇದುವರೆಗೆ ನಿರೀಕ್ಷೆಯಂತೆ ಆರಂಭ ಸಿಕ್ಕಿಲ್ಲ. ತನ್ನ ಮೊದಲ ಪಂದ್ಯವನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಆಡಿದ್ದ ಗುಜರಾತ್ 11 ರನ್‌ಗಳಿಂದ ಸೋಲನ್ನು ಅನುಭವಿಸಿತ್ತು. ಆದಾಗ್ಯೂ, ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 36 ರನ್‌ಗಳಿಂದ ಸೋಲಿಸುವ ಮೂಲಕ ಪುನರಾಗಮನ ಮಾಡಿತು. ಈಗ ಎರಡೂ ತಂಡಗಳು ಈ ಪಂದ್ಯವನ್ನು ಗೆಲ್ಲುವ ಮೂಲಕ ತಮ್ಮ ಗೆಲುವಿನ ಓಟವನ್ನು ಮುಂದುವರಿಸಲು ಬಯಸುತ್ತವೆ.

3 / 7
ಹೆಡ್ ಟು ಹೆಡ್ ದಾಖಲೆಯ ಬಗ್ಗೆ ಮಾತನಾಡಿದರೆ, ಉಭಯ ತಂಡಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೇಲುಗೈ ಸಾಧಿಸಿದೆ. ಐಪಿಎಲ್ ಇತಿಹಾಸದಲ್ಲಿ ಇಲ್ಲಿಯವರೆಗೆ, ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು 5 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಇವುಗಳಲ್ಲಿ ಆರ್‌ಸಿಬಿ 3 ಪಂದ್ಯಗಳನ್ನು ಗೆದ್ದಿದ್ದರೆ, ಜಿಟಿ 2 ಪಂದ್ಯಗಳನ್ನು ಗೆದ್ದಿದೆ.

Gt (1)

4 / 7
ಕಳೆದ ಸೀಸನ್​ನಲ್ಲಿ ಉಭಯ ತಂಡಗಳ ನಡುವೆ ಎರಡು ಪಂದ್ಯಗಳು ನಡೆದಿದ್ದು, ಎರಡರಲ್ಲೂ ಆರ್‌ಸಿಬಿ ಗೆಲುವು ಸಾಧಿಸಿತ್ತು. ಐಪಿಎಲ್ 2024 ರ ಮೊದಲ ಹಣಾಹಣಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿದ್ದು, ಅಲ್ಲಿ ಬೆಂಗಳೂರು ತಂಡ ಗುಜರಾತ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿತು. ಆ ನಂತರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಆರ್‌ಸಿಬಿ, ಜಿಟಿ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಈ ಬಾರಿ ಯಾವ ತಂಡ ಮೇಲುಗೈ ಸಾಧಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

5 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್‌ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಜಲ್‌ವುಡ್, ರಸಿಖ್ ದಾರ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ನುವಾನ್ ತುಷಾರ, ಮನೋಜ್ ಭಾಂಡಗೆ, ಜಾಕೋಬ್ ಬೆಥೆಲ್, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್.

6 / 7
ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್, ರಶೀದ್ ಖಾನ್, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ಜೋಸ್ ಬಟ್ಲರ್, ಮೊಹಮ್ಮದ್ ಸಿರಾಜ್, ಕಗಿಸೊ ರಬಾಡ, ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ಶೆರ್ಫೇನ್ ರುದರ್‌ಫೋರ್ಡ್, ಜೆರಾಲ್ಡ್ ಕೊಯೆಟ್ಜೆ, ಆರ್ ಸಾಯಿ ಕಿಶೋರ್, ಮಹಿಪಾಲ್ ಲೊಮ್ರೋರ್, ಗುರ್ನೂರ್ ಸಿಂಗ್ ಬ್ರಾರ್, ಮೊಹಮ್ಮದ್ ಅರ್ಷದ್ ಖಾನ್, ಇಶಾಂತ್ ಶರ್ಮಾ, ಕುಮಾರ್ ಕುಶಾಗ್ರಾ, ಮಾನವ್ ಸುತಾರ್, ಅನುಜ್ ರಾವತ್, ಜಯಂತ್ ಯಾದವ್, ಗ್ಲೆನ್ ಫಿಲಿಪ್ಸ್, ಕರೀಂ ಜನತ್, ಕುಲ್ವಂತ್ ಖೆಜುರ್ಲಿಯಾ.

7 / 7
Follow us
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ

ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ

ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ

ಬ್ರೆಜಿಲ್​ನಲ್ಲಿ ಆಕಾಶದಿಂದ ನೇರವಾಗಿ ರಸ್ತೆಗೆ ಇಳಿದ ವಿಮಾನ

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್

ಉತ್ತರಾಖಂಡ: ಹೊತ್ತಿ ಉರಿದ ರಾಸಾಯನಿಕ ಕಾರ್ಖಾನೆ, ಹಲವರು ಸಿಲುಕಿರುವ ಶಂಕೆ

ಅಕ್ಷರಾಭ್ಯಾಸಕ್ಕೆ ಯಾವ ದಿನ ಶುಭ ಮತ್ತು ಹೇಗೆ ಮಾಡಿಸಬೇಕು?

Daily Horoscope: ರಾಜಕೀಯ ವ್ಯಕ್ತಿಗಳಿಗೆ ಇಂದು ಉತ್ತಮ ದಿನ

ಧ್ರುವ ಸರ್ಜಾ ಫ್ಯಾನ್ಸ್ ರೀತಿಯೇ ಪ್ರಥಮ್ ಅಭಿಮಾನಿಗಳಿಂದ ವಿಚಿತ್ರ ಹಾಡು

ಮೆಟ್ರೋ ಕಂಬಗಳು, ಐತಿಹಾಸಿಕ ಕಟ್ಟಡಗಳಿಗೂ ದೀಪಾಲಂಕಾರ: ಡಿಕೆ ಶಿವಕುಮಾರ್