IPL 2025: ಐಪಿಎಲ್ ಪ್ಲೇಆಫ್ ರೇಸ್ನಿಂದ ಹೊರಬಿದ್ದ 5 ತಂಡಗಳು
Ipl 2025 playoffs: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) ಪ್ಲೇಆಫ್ ರೇಸ್ ಮುಂದುವರೆದಿದೆ. ಈಗಾಗಲೇ 3 ತಂಡಗಳು ಪ್ಲೇಆಫ್ಗೆ ಎಂಟ್ರಿ ಕೊಟ್ಟರೆ, 5 ತಂಡಗಳು ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. ಇನ್ನು 2 ತಂಡಗಳ ನಡುವೆ ಪೈಪೋಟಿ ಮುಂದುವರೆದಿದ್ದು, ಈ ತಂಡಗಳಲ್ಲಿ ಒಂದು ಟೀಮ್ ಮುಂದಿನ ಹಂತಕ್ಕೇರಲಿದೆ.
Updated on: May 20, 2025 | 9:04 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ 61 ಪಂದ್ಯಗಳು ಮುಗಿದಿವೆ. ಈ ಆರವತ್ತೊಂದು ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಪ್ಲೇಆಫ್ ರೇಸ್ನಲ್ಲಿ ಉಳಿದರೆ, 5 ತಂಡಗಳು ಹೊರಬಿದ್ದಿವೆ. ಹೀಗೆ ಲೀಗ್ ಹಂತದ ಪಂದ್ಯಗಳು ಮುಗಿಯುವ ಮುನ್ನವೇ ಪ್ಲೇಆಫ್ ರೇಸ್ನಿಂದ ಹೊರಬಿದ್ದ 5 ತಂಡಗಳಾವುವು ಎಂದು ನೋಡುವುದಾದರೆ....

ಚೆನ್ನೈ ಸೂಪರ್ ಕಿಂಗ್ಸ್: ಈ ಬಾರಿಯ ಐಪಿಎಲ್ನಲ್ಲಿ ಈಗಾಗಲೇ 12 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ಪಂದ್ಯಗಳಲ್ಲಿ ಸೋಲನುಭವಿಸಿದರೆ, 3 ಮ್ಯಾಚ್ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಸಿಎಸ್ಕೆ ತಂಡಕ್ಕೆ ಇನ್ನೂ 2 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಗೆದ್ದರೂ ಸಿಎಸ್ಕೆ ತಂಡಕ್ಕೆ ಪ್ಲೇಆಫ್ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ.

ರಾಜಸ್ಥಾನ್ ರಾಯಲ್ಸ್: ಆರ್ಆರ್ ತಂಡವು ಈಗಾಗಲೇ 12 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಮ್ಯಾಚ್ಗಳಲ್ಲಿ ಮಾತ್ರ. ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮುಂದಿನ ಹಂತಕ್ಕೇರಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ ಆರ್ಆರ್ ಪಡೆಯ ಪ್ಲೇಆಫ್ ಕನಸು ಕೂಡ ಕಮರಿದೆ.

ಸನ್ರೈಸರ್ಸ್ ಹೈದರಾಬಾದ್: ಎಸ್ಆರ್ಹೆಚ್ ತಂಡವು ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ ವೇಳೆ 3 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಪ್ಲೇಆಫ್ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ.

ಕೊಲ್ಕತ್ತಾ ನೈಟ್ ರೈಡರ್ಸ್: ಕೆಕೆಆರ್ ತಂಡವು ಈವರೆಗೆ 13 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 5 ಪಂದ್ಯಗಳಲ್ಲಿ ಮಾತ್ರ. ಇನ್ನು ಆರ್ಸಿಬಿ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಇದರೊಂದಿಗೆ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ಲೇಆಫ್ ಅಭಿಯಾನ ಕೂಡ ಅಂತ್ಯಗೊಂಡಿದೆ.

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್ಗೆ ಲಗ್ಗೆಯಿಟ್ಟಿದ್ದು, ಒಂದು ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ 4ನೇ ತಂಡವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.

ಲಕ್ನೋ ಸೂಪರ್ ಜೈಂಟ್ಸ್: ಎಲ್ಎಸ್ಜಿ ತಂಡವು ಇದುವರೆಗೆ ಆಡಿದ 12 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ. ಇನ್ನುಳಿದ 2 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದರೂ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಪ್ಲೇಆಫ್ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ.














