IPL 2025 Playoffs: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಸೆಣಸಲಿದೆ.
IPL 2025: ಇಂಡಿಯುನ್ ಪ್ರೀಮಿಯರ್ ಲೀಗ್ನ ಪ್ಲೇಆಫ್ ಪಂದ್ಯಗಳಿಗೆ ಇಂದಿನಿಂದ (ಮೇ 29) ಚಾಲನೆ ದೊರೆಯಲಿದೆ. ಈ ಸುತ್ತಿನಲ್ಲಿ ಅಂಕ ಪಟ್ಟಿಯಲ್ಲಿ ಟಾಪ್-4 ಸ್ಥಾನಗಳನ್ನು ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಪಂಜಾಬ್ ಕಿಂಗ್ಸ್ (PBKS), ಮುಂಬೈ ಇಂಡಿಯನ್ಸ್ (MI) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಕಣಕ್ಕಿಳಿಯಲಿವೆ.
1 / 6
ಈ ಸುತ್ತಿನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾದರೆ, ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಲಿದೆ. ಈ ಪಂದ್ಯಗಳಿಗೆ ನಾಲ್ಕು ತಂಡಗಳ 8 ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ...
2 / 6
ಗುಜರಾತ್ ಟೈಟಾನ್ಸ್: ಶುಭ್ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡದಿಂದ ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್ ಹೊರನಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಬಟ್ಲರ್ ತವರಿಗೆ ಮರಳಿದ್ದಾರೆ. ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ ಕೂಡ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಬಟ್ಲರ್ ಹಾಗೂ ರಬಾಡ ಕಾಣಿಸಿಕೊಳ್ಳುವುದಿಲ್ಲ.
3 / 6
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡದಿಂದ ಮೂವರು ಆಟಗಾರರು ಹೊರ ನಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಇಂಗ್ಲೆಂಡ್ ಆಟಗಾರ ವಿಲ್ ಜಾಕ್ಸ್ ತವರಿಗೆ ಮರಳಿದರೆ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಸೌತ್ ಆಫ್ರಿಕಾ ಆಟಗಾರರಾದ ರಯಾನ್ ರಿಕೆಲ್ಟನ್ ಹಾಗೂ ಕಾರ್ಬಿನ್ ಬಾಷ್ ತವರಿಗೆ ಮರಳಿದ್ದಾರೆ.
4 / 6
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡದಲ್ಲಿ ಸೌತ್ ಆಫ್ರಿಕಾ ಆಲ್ರೌಂಡರ್ ಮಾರ್ಕೊ ಯಾನ್ಸೆನ್ ಕೂಡ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕಾಗಿ ಆಯ್ಕೆ ಮಾಡಲಾದ ಸೌತ್ ಆಫ್ರಿಕಾ ತಂಡದಲ್ಲಿ ಯಾನ್ಸೆನ್ ಸ್ಥಾನ ಪಡೆದಿದ್ದು, ಹೀಗಾಗಿ ಅವರು ಸಹ ತವರಿಗೆ ಹಿಂತಿರುಗಿದ್ದಾರೆ.