IPL 2025: 5 ತಂಡಗಳಿಗೆ ಹೊಸ ಕ್ಯಾಪ್ಟನ್ಸ್
IPL 2025 Captains: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಗಾಗಿ 8 ತಂಡಗಳು ತಮ್ಮ ಕ್ಯಾಪ್ಟನ್ಗಳನ್ನು ಘೋಷಿಸಿದ್ದಾರೆ. ಇದಾಗ್ಯೂ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಾಯಕರುಗಳು ಯಾರು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಇನ್ನು ಈ ಬಾರಿಯ ಐಪಿಎಲ್ಗೆ ನಾಯಕರುಗಳಾಗಿ ಆಯ್ಕೆಯಾಗಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...
Updated on: Mar 02, 2025 | 11:53 AM

ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಆವೃತ್ತಿ ಆರಂಭಕ್ಕೆ ಇನ್ನು ಉಳಿದಿರುವುದು ವಾರಗಳು ಮಾತ್ರ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ ಈಗಾಗಲೇ 8 ತಂಡಗಳು ತಮ್ಮ ನಾಯಕರುಗಳನ್ನು ಘೋಷಿಸಿದ್ದಾರೆ. ಇನ್ನೆರಡು ಟೀಮ್ಗಳಿಗೆ ಹೊಸ ನಾಯಕರುಗಳು ಆಯ್ಕೆಯಾಗಬೇಕಿದೆ. ಹಾಗಿದ್ರೆ ಈ ಬಾರಿಯ ಐಪಿಎಲ್ನಲ್ಲಿ ಕ್ಯಾಪ್ಟನ್ಗಳಾಗಿ ಕಾಣಿಸಿಕೊಳ್ಳಲಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

Rp (2)ಲಕ್ನೋ ಸೂಪರ್ ಜೈಂಟ್ಸ್: ಈ ಬಾರಿಯ ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ. ಕಳೆದ ಬಾರಿ ನಾಯಕರಾಗಿದ್ದ ಕೆಎಲ್ ರಾಹುಲ್ ಈ ಸಲ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಪಂತ್ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್: ಸಿಎಸ್ಕೆ ತಂಡವನ್ನು ಈ ಬಾರಿ ಕೂಡ ರುತುರಾಜ್ ಗಾಯಕ್ವಾಡ್ ಮುನ್ನಡೆಸಲಿದ್ದಾರೆ. ಇನ್ನು ರುತುರಾಜ್ ಅವರಿಗೆ ಮಾರ್ಗದರ್ಶಕರಾಗಿ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಳ್ಳಲಿದ್ದಾರೆ.

ಗುಜರಾತ್ ಟೈಟಾನ್ಸ್: ಕಳೆದ ಸೀಸನ್ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಶುಭ್ಮನ್ ಗಿಲ್ ಈ ಬಾರಿ ಕೂಡ ಕ್ಯಾಪ್ಟನ್ ಪಟ್ಟದೊಂದಿಗೆ ಕಣಕ್ಕಿಳಿಯಲಿದ್ದಾರೆ. ಗಿಲ್ ಜೊತೆ ಉಪನಾಯಕನಾಗಿ ಅಫ್ಘಾನ್ ಆಲ್ರೌಂಡರ್ ರಶೀದ್ ಖಾನ್ ಕಾಣಿಸಿಕೊಳ್ಳಲಿದ್ದಾರೆ.

ಪಂಜಾಬ್ ಕಿಂಗ್ಸ್: ಕಳೆದ ಸೀಸನ್ನಲ್ಲಿ ಶಿಖರ್ ಧವನ್ ಮುಂದಾಳತ್ವದಲ್ಲಿ ಕಣಕ್ಕಿಳಿದಿದ್ದ ಪಂಜಾಬ್ ಕಿಂಗ್ಸ್ ಈ ಬಾರಿ ಶ್ರೇಯಸ್ ಅಯ್ಯರ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದೆ. ಅಯ್ಯರ್ ಕಳೆದ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿದ್ದರು. ಇದೀಗ ಪಂಜಾಬ್ ಕಿಂಗ್ಸ್ ಪರ ಹೊಸ ಇನಿಂಗ್ಸ್ ಆರಂಭಿಸಲು ಶ್ರೇಯಸ್ ಅಯ್ಯರ್ ತುದಿಗಾಲಲ್ಲಿ ನಿಂತಿದ್ದಾರೆ.

ಮುಂಬೈ ಇಂಡಿಯನ್ಸ್: ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ಬಾರಿ ಕ್ಯಾಪ್ಟನ್ ಆಗಿ ಮುಂದುವರೆಯಲಿದ್ದಾರೆ. ಇನ್ನು ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಅಥವಾ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ರಾಜಸ್ಥಾನ್ ರಾಯಲ್ಸ್: ಆರ್ಆರ್ ಫ್ರಾಂಚೈಸಿಯು ಈ ಬಾರಿ ಕೂಡ ಸಂಜು ಸ್ಯಾಮ್ಸನ್ ಅವರನ್ನೇ ನಾಯಕರನ್ನಾಗಿ ಮುಂದುವರೆಸುವುದಾಗಿ ತಿಳಿಸಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಪಡೆಯುವ ಸ್ಯಾಮ್ಸನ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿದೆ.

ಸನ್ರೈಸರ್ಸ್ ಹೈದರಾಬಾದ್: ಕಳೆದ ಬಾರಿಯ ರನ್ನರ್ ಅಪ್ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಈ ಬಾರಿ ಕೂಡ ಪ್ಯಾಟ್ ಕಮಿನ್ಸ್ ಮುನ್ನಡೆಸಲಿದ್ದಾರೆ. ಅದರಂತೆ ಕಮಿನ್ಸ್ ಸಾರಥ್ಯದಲ್ಲಿ ಎಸ್ಆರ್ಹೆಚ್ ಕಣಕ್ಕಿಳಿಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ತಂಡದ ಹೊಸ ನಾಯಕರಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಕ್ಯಾಪ್ಟನ್ ಆಗಿದ್ದ ಫಾಫ್ ಡುಪ್ಲೆಸಿಸ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯಲಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್: ಹಾಲಿ ಚಾಂಪಿಯನ್ ಕೆಕೆಆರ್ ತಂಡವು ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ. ಈ ತಂಡದ ನಾಯಕತ್ವದ ರೇಸ್ನಲ್ಲಿ ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ ಹಾಗೂ ರಿಂಕು ಸಿಂಗ್ ಹೆಸರುಗಳು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.

ಡೆಲ್ಲಿ ಕ್ಯಾಪಿಟಲ್ಸ್: ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸಹ ಹೊಸ ನಾಯಕ ಮುನ್ನಡೆಸಲಿದ್ದಾರೆ. ಸದ್ಯ ನಾಯಕತ್ವದ ರೇಸ್ನಲ್ಲಿ ಕೆಎಲ್ ರಾಹುಲ್, ಅಕ್ಷರ್ ಪಟೇಲ್ ಹಾಗೂ ಫಾಫ್ ಡುಪ್ಲೆಸಿಸ್ ಹೆಸರು ಮುಂಚೂಣಿಯಲ್ಲಿದ್ದು ಇವರಲ್ಲಿ ಯಾರಿಗೆ ಕ್ಯಾಪ್ಟನ್ ಪಟ್ಟ ಸಿಗಲಿದೆ ಕಾದು ನೋಡಬೇಕಿದೆ.



















